AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಖಲೆಯಲ್ಲ… ಕಿಂಗ್ ಕೊಹ್ಲಿ ಆರ್ಭಟಕ್ಕೆ ವಿಶ್ವ ದಾಖಲೆಯೇ ಧೂಳೀಪಟ

IPL 2026 RCB vs LSG: ಐಪಿಎಲ್​ನ 23ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ ಕೇವಲ 146 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಆರ್​ಸಿಬಿ ತಂಡ 15.1 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಭರ್ಜರಿ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Apr 16, 2026 | 7:32 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 23ನೇ ಪಂದ್ಯದ ಮೂಲಕ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಮತ್ತೊಂದು ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅತೀ ಹೆಚ್ಚು ರನ್​ ಕಲೆಹಾಕುವ ಮೂಲಕ ಎಂಬುದು ವಿಶೇಷ.

1 / 5
ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಪರ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 34 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 49 ರನ್​ ಬಾರಿಸಿದ್ದರು. ಈ 49 ರನ್​ಗಳೊಂದಿಗೆ ಕಿಂಗ್ ಕೊಹ್ಲಿ ಟಿ20 ಇತಿಹಾಸದಲ್ಲೇ ಒಂದೇ ಮೈದಾನದಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

2 / 5
ಇದಕ್ಕೂ ಮುನ್ನ ಇಂತಹದೊಂದು ಭರ್ಜರಿ ದಾಖಲೆ ಇಂಗ್ಲೆಂಡ್​ನ ಜೇಮ್ಸ್​ ವಿನ್ಸ್​ ಹೆಸರಿನಲ್ಲಿತ್ತು. ಸೌತಂಪ್ಟನ್​ನ ರೋಸ್ ಬೌಲ್​ ಮೈದಾನದಲ್ಲಿ 117 ಇನಿಂಗ್ಸ್​ಗಳಲ್ಲಿ 3585 ರನ್​ ಕಲೆಹಾಕುವ ಮೂಲಕ ಜೇಮ್ಸ್​ ವಿನ್ಸ್, ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಗ್ರೌಂಡ್​ನಲ್ಲಿ ಅತೀ ಹೆಚ್ಚು ರನ್​ಗಳಿಸಿದ ಬ್ಯಾಟರ್​ ಎನಿಸಿಕೊಂಡಿದ್ದರು.

3 / 5
ಇದೀಗ ಈ ದಾಖಲೆಯನ್ನು ವಿರಾಟ್ ಕೊಹ್ಲಿ ಅಳಿಸಿ ಹಾಕಿದ್ದಾರೆ. ಕಿಂಗ್ ಕೊಹ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈವರೆಗೆ 109 ಇನಿಂಗ್ಸ್ ಆಡಿದ್ದಾರೆ. ಈ ವೇಳೆ ಕೊಹ್ಲಿ ಬರೋಬ್ಬರಿ 3750+ ರನ್​ ಗಳಿಸಿದ್ದಾರೆ. ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಮೈದಾನದಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

4 / 5
ಅಷ್ಟೇ ಅಲ್ಲದೆ ಟಿ20 ಕ್ರಿಕೆಟ್​ ಇತಿಹಾಸದಲ್ಲಿ ಒಂದೇ ತಂಡದ ಪರ ಕಣಕ್ಕಿಳಿದು 9 ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಕೂಡ ಕಿಂಗ್ ಕೊಹ್ಲಿ ಹೆಸರಿನಲ್ಲಿದೆ. 2008 ರಿಂದ ಆರ್​ಸಿಬಿ ಪರ ಕಣಕ್ಕಿಳಿಯುತ್ತಿರುವ ವಿರಾಟ್ 278 ಇನಿಂಗ್ಸ್​ಗಳ ಮೂಲಕ ಈವರೆಗೆ 9313 ರನ್​ ಗಳಿಸಿ ಈ ವಿಶೇಷ ದಾಖಲೆ ಬರೆದಿದ್ದಾರೆ. ಒಟ್ಟಿನಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಾ ಸಾಗುತ್ತಿರುವ ವಿರಾಟ್ ಕೊಹ್ಲಿ ಬ್ಯಾಟ್​ನಿಂದ ಈ ಬಾರಿಯ ಐಪಿಎಲ್​ ಮೂಲಕ ಮತ್ತಷ್ಟು ದಾಖಲೆಗಳನ್ನು ನಿರೀಕ್ಷಿಸಬಹುದು.

5 / 5
Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?

ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ

ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!

ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!

ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!

ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ

ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?

ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!

ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?

ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು