
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 23ನೇ ಪಂದ್ಯದ ಮೂಲಕ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಮತ್ತೊಂದು ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅತೀ ಹೆಚ್ಚು ರನ್ ಕಲೆಹಾಕುವ ಮೂಲಕ ಎಂಬುದು ವಿಶೇಷ.

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ ಪರ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 34 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 49 ರನ್ ಬಾರಿಸಿದ್ದರು. ಈ 49 ರನ್ಗಳೊಂದಿಗೆ ಕಿಂಗ್ ಕೊಹ್ಲಿ ಟಿ20 ಇತಿಹಾಸದಲ್ಲೇ ಒಂದೇ ಮೈದಾನದಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಇಂತಹದೊಂದು ಭರ್ಜರಿ ದಾಖಲೆ ಇಂಗ್ಲೆಂಡ್ನ ಜೇಮ್ಸ್ ವಿನ್ಸ್ ಹೆಸರಿನಲ್ಲಿತ್ತು. ಸೌತಂಪ್ಟನ್ನ ರೋಸ್ ಬೌಲ್ ಮೈದಾನದಲ್ಲಿ 117 ಇನಿಂಗ್ಸ್ಗಳಲ್ಲಿ 3585 ರನ್ ಕಲೆಹಾಕುವ ಮೂಲಕ ಜೇಮ್ಸ್ ವಿನ್ಸ್, ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಗ್ರೌಂಡ್ನಲ್ಲಿ ಅತೀ ಹೆಚ್ಚು ರನ್ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.

ಇದೀಗ ಈ ದಾಖಲೆಯನ್ನು ವಿರಾಟ್ ಕೊಹ್ಲಿ ಅಳಿಸಿ ಹಾಕಿದ್ದಾರೆ. ಕಿಂಗ್ ಕೊಹ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈವರೆಗೆ 109 ಇನಿಂಗ್ಸ್ ಆಡಿದ್ದಾರೆ. ಈ ವೇಳೆ ಕೊಹ್ಲಿ ಬರೋಬ್ಬರಿ 3750+ ರನ್ ಗಳಿಸಿದ್ದಾರೆ. ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಮೈದಾನದಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಅಷ್ಟೇ ಅಲ್ಲದೆ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಒಂದೇ ತಂಡದ ಪರ ಕಣಕ್ಕಿಳಿದು 9 ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಕೂಡ ಕಿಂಗ್ ಕೊಹ್ಲಿ ಹೆಸರಿನಲ್ಲಿದೆ. 2008 ರಿಂದ ಆರ್ಸಿಬಿ ಪರ ಕಣಕ್ಕಿಳಿಯುತ್ತಿರುವ ವಿರಾಟ್ 278 ಇನಿಂಗ್ಸ್ಗಳ ಮೂಲಕ ಈವರೆಗೆ 9313 ರನ್ ಗಳಿಸಿ ಈ ವಿಶೇಷ ದಾಖಲೆ ಬರೆದಿದ್ದಾರೆ. ಒಟ್ಟಿನಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಾ ಸಾಗುತ್ತಿರುವ ವಿರಾಟ್ ಕೊಹ್ಲಿ ಬ್ಯಾಟ್ನಿಂದ ಈ ಬಾರಿಯ ಐಪಿಎಲ್ ಮೂಲಕ ಮತ್ತಷ್ಟು ದಾಖಲೆಗಳನ್ನು ನಿರೀಕ್ಷಿಸಬಹುದು.