Virat Kohli: ಸಚಿನ್ ತೆಂಡೂಲ್ಕರ್ ವಿಶ್ವ ದಾಖಲೆ ಸರಿಗಟ್ಟಿದ ಕಿಂಗ್ ಕೊಹ್ಲಿ
TV9 Web | Updated By: ಝಾಹಿರ್ ಯೂಸುಫ್
Updated on:
Nov 12, 2023 | 10:06 PM
Virat Kohli Records: ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕಿಂಗ್ ಕೊಹ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಲ್ಲಿ ತುಸು ಎಚ್ಚರಿಕೆಯ ಬ್ಯಾಟಿಂಗ್ಗೆ ಒತ್ತು ನೀಡಿದ್ದ ಕೊಹ್ಲಿ ನಂತರ ಬಿರುಸಿನಿಂದ ಬ್ಯಾಟ್ ಬೀಸಿದರು. ಈ ಮೂಲಕ 56 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ 51 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
1 / 5
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.
2 / 5
ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕಿಂಗ್ ಕೊಹ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಲ್ಲಿ ತುಸು ಎಚ್ಚರಿಕೆಯ ಬ್ಯಾಟಿಂಗ್ಗೆ ಒತ್ತು ನೀಡಿದ್ದ ಕೊಹ್ಲಿ ನಂತರ ಬಿರುಸಿನಿಂದ ಬ್ಯಾಟ್ ಬೀಸಿದರು. ಈ ಮೂಲಕ 56 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ 51 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
3 / 5
ಈ ಅರ್ಧಶತಕದೊಂದಿಗೆ ಏಕದಿನ ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತ್ಯಧಿಕ 50+ ಸ್ಕೋರ್ಗಳಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಕಿಂಗ್ ಕೊಹ್ಲಿ ಕೂಡ ಸೇರ್ಪಡೆಯಾಗಿದ್ದಾರೆ. ಈ ಹಿಂದೆ ಈ ದಾಖಲೆ ಇಬ್ಬರು ಆಟಗಾರರ ಹೆಸರಿನಲ್ಲಿತ್ತು.
4 / 5
2003 ರ ವಿಶ್ವಕಪ್ನಲ್ಲಿ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ 7 ಬಾರಿ 50+ ಸ್ಕೋರ್ಗಳಿಸಿ ದಾಖಲೆ ನಿರ್ಮಿಸಿದ್ದರು. ಇದಾದ ಬಳಿಕ 2019 ರಲ್ಲಿ ಬಾಂಗ್ಲಾದೇಶ್ ತಂಡದ ಆಟಗಾರ ಶಕೀಬ್ ಅಲ್ ಹಸನ್ ಕೂಡ 7 ಬಾರಿ 50+ ಸ್ಕೋರ್ಗಳಿಸಿ ಮಿಂಚಿದ್ದರು.
5 / 5
ಇದೀಗ ಕಿಂಗ್ ಕೊಹ್ಲಿ ಈ ಬಾರಿಯ ವಿಶ್ವಕಪ್ನಲ್ಲಿ 7ನೇ ಬಾರಿ 50 ಪ್ಲಸ್ ಸ್ಕೋರ್ಗಳಿಸುವ ಮೂಲಕ ಸಚಿನ್ ತೆಂಡೂಲ್ಕರ್ ಹಾಗೂ ಶಕೀಬ್ ಅಲ್ ಹಸನ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸರಿಗಟ್ಟಿದ್ದಾರೆ.