
ದಾಖಲೆಗಳ ಸರದಾರನ ಹೆಸರಿಗೆ ಮತ್ತೊಂದು ವಿಶ್ವ ದಾಖಲೆ ಸೇರ್ಪಡೆಯಾಗಿದೆ. ಈ ಬಾರಿ ಸೇರ್ಪಡೆಯಾಗಿರುವ ಹೊಸ ದಾಖಲೆ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು 50+ ರನ್‌ಗಳ ಜೊತೆಯಾಟ. ಈ ದಾಖಲೆಯೊಂದಿಗೆ ಇಂಗ್ಲೆಂಡ್ ಬ್ಯಾಟರ್ ಅಲೆಕ್ಸ್ ಹೇಲ್ಸ್ ಅವರ ವಿಶ್ವ ದಾಖಲೆಯನ್ನು ವಿರಾಟ್ ಕೊಹ್ಲಿ (Virat Kohli) ಸರಿಗಟ್ಟಿದ್ದಾರೆ. (PC: IPL)

ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 2ನೇ ವಿಕೆಟ್ಗೆ ದೇವದತ್ ಪಡಿಕ್ಕಲ್ ಜೊತೆ 76 ರನ್‌ಗಳ ಜೊತೆಯಾಟವಾಡಿದ್ದರು. ಈ ಜೊತೆಯಾಟದೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ 50+ ರನ್‌ಗಳ ಜೊತೆಯಾಟವಾಡಿದ ಏಷ್ಯನ್ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ವಿಶ್ವ ದಾಖಲೆಯನ್ನು ಕೂಡ ಸರಿಗಟ್ಟಿದ್ದಾರೆ. (PC: IPL)

ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ 50+ ಸ್ಕೋರ್ ಜೊತೆಯಾಟವಾಡಿದ ವಿಶ್ವ ದಾಖಲೆ ಇಂಗ್ಲೆಂಡ್ನ ಅಲೆಕ್ಸ್ ಹೇಲ್ಸ್ ಹೆಸರಿನಲ್ಲಿದೆ. ಈವರೆಗೆ 523 ಟಿ20 ಇನಿಂಗ್ಸ್ ಆಡಿರುವ ಹೇಲ್ಸ್ ಒಟ್ಟು 210 ಬಾರಿ 50+ ಜೊತೆಯಾಟದಲ್ಲಿ ಪಾಲುದಾರರಾಗಿದ್ದಾರೆ. ಇದೀಗ ಈ ಸಂಖ್ಯೆಯನ್ನು ಕಿಂಗ್ ಕೊಹ್ಲಿ ಸರಿಗಟ್ಟಿರುವುದು ವಿಶೇಷ. (PC: Google)

ಈವರೆಗೆ 410 ಟಿ20 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ ಒಟ್ಟು 210 ಬಾರಿ 50+ ಸ್ಕೋರ್ಗಳ ಜೊತೆಯಾಟದಾಟದ ಪಾಲುದಾರರಾಗಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ 50+ ಸ್ಕೋರ್ಗಳ ಜೊತೆಯಾಟವಾಡಿದ ಅಲೆಕ್ಸ್ ಹೇಲ್ಸ್ ಅವರ ವಿಶ್ವ ದಾಖಲೆಯನ್ನು ಕಿಂಗ್ ಕೊಹ್ಲಿ ಸರಿಗಟ್ಟಿದ್ದಾರೆ. (PC: IPL)

ಇನ್ನು ಈ ಪಂದ್ಯದಲ್ಲಿ ಬಾರಿಸಿದ 58 ರನ್ಗಳೊಂದಿಗೆ ವಿರಾಟ್ ಕೊಹ್ಲಿ ಈ ಬಾರಿಯ ಐಪಿಎಲ್ನಲ್ಲಿ 500 ರನ್ಗಳನ್ನು ಪೂರೈಸಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ 9 ಬೇರೆ ಬೇರೆ ಸೀಸನ್‌ಗಳಲ್ಲಿ 500ಕ್ಕೂ ಹೆಚ್ಚು ರನ್ ಗಳಿಸಿದ ಏಕೈಕ ಬ್ಯಾಟರ್ ಎಂಬ ದಾಖಲೆಯನ್ನು ಕೂಡ ಕಿಂಗ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. (PC: IPL)