Virat Kohli: ಒಂದೇ ಒಂದು ರನ್ ​ಗಳಿಸದೇ ದಾಖಲೆ ಬರೆದ ವಿರಾಟ್ ಕೊಹ್ಲಿ..!

Virat Kohli Records: ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾಗಿದ್ದರು. ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೊಹ್ಲಿ 9 ಎಸೆತಗಳನ್ನು ಎದುರಿಸಿದರೂ ರನ್ ಖಾತೆ ತೆರೆಯದೇ ವಿಕೆಟ್ ಒಪ್ಪಿಸಿದರು.

| Updated By: ಝಾಹಿರ್ ಯೂಸುಫ್

Updated on: Oct 29, 2023 | 5:58 PM

ವಿರಾಟ್ ಕೊಹ್ಲಿ ಮೈದಾನಕ್ಕಿಳಿದರೆ ದಾಖಲೆ ನಿರ್ಮಾಣವಾಗುವುದು ಸಹಜ. ಈ ಬಾರಿ ಯಾವುದೇ ರನ್​ಗಳಿಸದೆಯೂ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ಆದರೆ ಈ ಸಲ ನಿರ್ಮಿಸಿರುವುದು ಬೇಡದ ದಾಖಲೆ ಎಂಬುದಷ್ಟೇ ವ್ಯತ್ಯಾಸ.

1 / 6
ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾಗಿದ್ದರು. ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೊಹ್ಲಿ 9 ಎಸೆತಗಳನ್ನು ಎದುರಿಸಿದರೂ ರನ್ ಖಾತೆ ತೆರೆಯದೇ ವಿಕೆಟ್ ಒಪ್ಪಿಸಿದರು.

2 / 6
ಹೀಗೆ ಸೊನ್ನೆ ಸುತ್ತುವುದರೊಂದಿಗೆ ವಿರಾಟ್ ಕೊಹ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ಕಳಪೆ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ. ಅಂದರೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ಬಾರಿ ಡಕ್​ ಔಟ್ ಆದ ಬ್ಯಾಟರ್​ಗಳ ಪಟ್ಟಿಯಲ್ಲಿ ಸಚಿನ್ ಅಗ್ರಸ್ಥಾನದಲ್ಲಿದ್ದರು.

3 / 6
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ 782 ಇನಿಂಗ್ಸ್​ಗಳಲ್ಲಿ 34 ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು. ಇದೀಗ ಇಂಗ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ಈ ದಾಖಲೆಯನ್ನು ವಿರಾಟ್ ಕೊಹ್ಲಿ ಸರಿಗಟ್ಟಿರುವುದು ವಿಶೇಷ.

4 / 6
ವಿರಾಟ್ ಕೊಹ್ಲಿ ಒಟ್ಟು 569 ಅಂತಾರಾಷ್ಟ್ರೀಯ ಇನಿಂಗ್ಸ್ ಆಡಿದ್ದು, ಈ ವೇಳೆ 34ನೇ ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಅತ್ಯಧಿಕ ಬಾರಿ ಸೊನ್ನೆಗೆ ಔಟಾದ ಬ್ಯಾಟರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ವಿರಾಟ್ ಕೊಹ್ಲಿ ಸರಿಗಟ್ಟಿದ್ದಾರೆ.

5 / 6
ವಿಶೇಷ ಎಂದರೆ ವಿಶ್ವಕಪ್​ (ಏಕದಿನ-ಟಿ20) ಪಂದ್ಯವೊಂದರಲ್ಲಿ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾಗಿರುವುದು ಇದೇ ಮೊದಲ ಬಾರಿ. ಅಂದರೆ ವಿಶ್ವಕಪ್​ನಲ್ಲಿ ಒಟ್ಟು 56 ಇನಿಂಗ್ಸ್​ ಆಡಿದ್ದ ಕೊಹ್ಲಿ ಒಮ್ಮೆಯೂ ಶೂನ್ಯಕ್ಕೆ ವಿಕೆಟ್ ಒಪ್ಪಿಸಿರಲಿಲ್ಲ. ಆದರೆ ಈ ಬಾರಿ ಡೇವಿಡ್ ವಿಲ್ಲಿ ಕೊಹ್ಲಿಯನ್ನು ಸೊನ್ನೆಗೆ ಔಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

6 / 6
Follow us