ಈ ಒಂದು ದಾಖಲೆ ಮುರಿಯಲು ವಿರಾಟ್ ಕೊಹ್ಲಿಗೆ ಇದುವೇ ಕೊನೆಯ ಅವಕಾಶ

Updated on: Oct 22, 2025 | 11:54 AM

Virat Kohli Records: ವಿರಾಟ್ ಕೊಹ್ಲಿಗೆ ಇದು ಕೊನೆಯ ಆಸ್ಟ್ರೇಲಿಯಾ ಪ್ರವಾಸ. ಏಕೆಂದರೆ ಕಿಂಗ್ ಕೊಹ್ಲಿ 2027ರ ಏಕದಿನ ವಿಶ್ವಕಪ್​ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತರಾಗುವುದು ಖಚಿತ. ಇತ್ತ ಏಕದಿನ ಕ್ರಿಕೆಟ್​ನಲ್ಲಿ ಮಾತ್ರ ಮುಂದುವರೆದಿರುವ ಕೊಹ್ಲಿ ಮುಂದಿನ ವರ್ಷ ಆಸ್ಟ್ರೇಲಿಯಾದಲ್ಲಿ ಕಣಕ್ಕಿಳಿಯುವುದಿಲ್ಲ. ಹೀಗಾಗಿ ಆಸ್ಟ್ರೇಲಿಯಾ ಪಿಚ್​ನಲ್ಲಿ ಭರ್ಜರಿ ದಾಖಲೆ ಬರೆಯಲು ವಿರಾಟ್ ಕೊಹ್ಲಿಗೆ ಇದುವೇ ಕೊನೆಯ ಅವಕಾಶ.

1 / 6
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 2ನೇ ಏಕದಿನ ಪಂದ್ಯವು ನಾಳೆ (ಅ.23) ನಡೆಯಲಿದೆ. ಅಡಿಲೇಡ್​ನ ದಿ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಇತಿಹಾಸ ನಿರ್ಮಿಸುವ ಅವಕಾಶವೊಂದು ವಿರಾಟ್ ಕೊಹ್ಲಿ (Virat Kohli) ಮುಂದಿದೆ. ಅದು ಕೂಡ ಭರ್ಜರಿ ಶತಕ ಸಿಡಿಸುವ ಮೂಲಕ..!

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 2ನೇ ಏಕದಿನ ಪಂದ್ಯವು ನಾಳೆ (ಅ.23) ನಡೆಯಲಿದೆ. ಅಡಿಲೇಡ್​ನ ದಿ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಇತಿಹಾಸ ನಿರ್ಮಿಸುವ ಅವಕಾಶವೊಂದು ವಿರಾಟ್ ಕೊಹ್ಲಿ (Virat Kohli) ಮುಂದಿದೆ. ಅದು ಕೂಡ ಭರ್ಜರಿ ಶತಕ ಸಿಡಿಸುವ ಮೂಲಕ..!

2 / 6

ಹೌದು, ಆಸ್ಟ್ರೇಲಿಯಾ ಮೈದಾನದಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ವಿದೇಶಿಗನೆಂಬ ದಾಖಲೆ ಬರೆಯಲು ಕಿಂಗ್ ಕೊಹ್ಲಿಗೆ ಒಂದು ಶತಕದ ಅವಶ್ಯಕತೆಯಿದೆ. ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಕೊಹ್ಲಿ ಬ್ಯಾಟ್​ನಿಂದ ಮೂರಂಕಿ ಮೊತ್ಗ ಮೂಡಿಬಂದರೆ, ಆಸೀಸ್ ಪಿಚ್​ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ವಿದೇಶಿ ದಾಂಡಿಗ ಎಂಬ ದಾಖಲೆ ವಿರಾಟ್ ಕೊಹ್ಲಿ ಪಾಲಾಗಿದೆ.

3 / 6

ಸದ್ಯ ಈ ದಾಖಲೆಯನ್ನು ವಿರಾಟ್ ಕೊಹ್ಲಿ ಇಂಗ್ಲೆಂಡ್​​ನ ಜ್ಯಾಕ್ ಹಾಬ್ಸ್ ಅವರೊಂದಿಗೆ ಹಂಚಿಕೊಂಡಿದ್ದಾರೆ. ಇಂಗ್ಲೆಂಡ್ ತಂಡದ ಮಾಜಿ ಆಟಗಾರ ಜ್ಯಾಕ್ ಹಾಬ್ಸ್ ಮೆಲ್ಬೋರ್ನ್​ ಕ್ರಿಕೆಟ್ ಗ್ರೌಂಡ್​ನಲ್ಲಿ 5 ಟೆಸ್ಟ್ ಸೆಂಚುರಿ ಸಿಡಿಸಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾದ ಒಂದೇ ಮೈದಾನದಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ವಿದೇಶಿ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದ್ದಾರೆ. 

4 / 6

ಇತ್ತ ಅಡಿಲೇಡ್ ಓವಲ್​ ಮೈದಾನದಲ್ಲಿ ವಿರಾಟ್ ಕೊಹ್ಲಿ ಈವರೆಗೆ 5 ಶತಕಗಳನ್ನು ಬಾರಿಸಿದ್ದಾರೆ. ಏಕದಿನ ಕ್ರಿಕೆಟ್​ನಲ್ಲಿ  2 ಹಾಗೂ ಟೆಸ್ಟ್​ನಲ್ಲಿ 3 ಸೆಂಚುರಿ ಸಿಡಿಸುವ ಮೂಲಕ ಕಿಂಗ್ ಕೊಹ್ಲಿ ಜ್ಯಾಕ್ ಹಾಬ್ಸ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಇದೀಗ 2ನೇ ಏಕದಿನ ಪಂದ್ಯದಲ್ಲಿ ಸೆಂಚುರಿ ಸಿಡಿಸಿದರೆ ಆಸ್ಟ್ರೇಲಿಯಾದ ಒಂದೇ ಮೈದಾನದಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ವಿದೇಶಿ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.

5 / 6

ಅಷ್ಟೇ ಅಲ್ಲದೆ ಆಸ್ಟ್ರೇಲಿಯಾದ ಒಂದೇ ಮೈದಾನದಲ್ಲಿ 1000 ರನ್ ಕಲೆಹಾಕಿದ ಮೊದಲ ವಿದೇಶಿ ಬ್ಯಾಟರ್ ಎನಿಸಿಕೊಳ್ಳಲು ವಿರಾಟ್ ಕೊಹ್ಲಿಗೆ ಬೇಕಿರುವುದು ಕೇವಲ 25 ರನ್​ಗಳು ಮಾತ್ರ. ಅಂದರೆ ಅಡಿಲೇಡ್​ನಲ್ಲಿ 17 ಇನಿಂಗ್ಸ್ ಆಡಿರುವ ಕಿಂಗ್ ಕೊಹ್ಲಿ ಈವರೆಗೆ 975 ರನ್ ಕಲೆಹಾಕಿದ್ದಾರೆ.

6 / 6

ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲಿ 25 ರನ್ ಗಳಿಸಿದರೆ ಕಾಂಗರೂನಾಡಿನ ಒಂದೇ ಮೈದಾನದಲ್ಲಿ ಸಾವಿರ ರನ್ ಕಲೆಹಾಕಿದ ಮೊದಲ ವಿದೇಶಿ ಆಟಗಾರ ಎನಿಸಿಕೊಳ್ಳಲಿದ್ದಾರೆ. ಹೀಗಾಗಿ ಅಡಿಲೇಡ್​ ಓವಲ್ ಮೈದಾನದಲ್ಲಿ ಕಿಂಗ್ ಕೊಹ್ಲಿ ಬ್ಯಾಟ್​ನಿಂದ ಭರ್ಜರಿ ದಾಖಲೆಗಳನ್ನು ನಿರೀಕ್ಷಿಸಬಹುದು.

Loading...
Unable to load recommendations.
Follow Us