ವಿರಾಟ್ ಕೊಹ್ಲಿ: ದಾಖಲೆಗಳ ಸರದಾರನ ಮುಂದಿದೆ 6 ಭರ್ಜರಿ ದಾಖಲೆಗಳು!

Updated on: Nov 02, 2026 | 3:16 PM

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿ ನವೆಂಬರ್ 4 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯದಲ್ಲೇ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಬ್ಯಾಟ್​ನಿಂದ ಭರ್ಜರಿ ದಾಖಲೆ ನಿರೀಕ್ಷಿಸಬಹುದು. ಏಕೆಂದರೆ ಏಕದಿನ ಕ್ರಿಕೆಟ್​ನಲ್ಲಿ ಹೊಸ ಮೈಲುಗಲ್ಲು ತಲುಪಲು ಕಿಂಗ್ ಕೊಹ್ಲಿಗೆ ಬೇಕಿರುವುದು ಕೇವಲ 2 ರನ್​ಗಳು ಮಾತ್ರ.

1 / 7
ವರ್ಲ್ಡ್ ಕ್ರಿಕೆಟ್‌ನ 'ರನ್ ಮಷಿನ್' ವಿರಾಟ್ ಕೊಹ್ಲಿ ಮತ್ತೊಂದು ವಿಶ್ವ ದಾಖಲೆಯ ಹೊಸ್ತಿಲಲ್ಲಿದ್ದಾರೆ. ನವೆಂಬರ್ 4, 2026 ರಿಂದ ಆರಂಭವಾಗಲಿರುವ ನ್ಯೂಝಿಲೆಂಡ್ ವಿರುದ್ಧದ 5 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲೇ 'ಕಿಂಗ್ ಕೊಹ್ಲಿ' ಬ್ಯಾಟ್‌ನಿಂದ ಭರ್ಜರಿ ದಾಖಲೆಯನ್ನು ನಿರೀಕ್ಷಿಸಬಹುದು. ಅಷ್ಟೇ ಅಲ್ಲದೆ, ಈ ಇಡೀ ಸರಣಿಯ ಮೂಲಕ ಅವರು ಮತ್ತಷ್ಟು ಐತಿಹಾಸಿಕ ದಾಖಲೆಗಳನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ. ಆ ಮಹತ್ತರ ದಾಖಲೆಗಳಾವುವು ಎಂಬುದರ ಸಂಪೂರ್ಣ ವಿವರ ಇಲ್ಲಿದೆ... (PC: Gettyimages)

ವರ್ಲ್ಡ್ ಕ್ರಿಕೆಟ್‌ನ 'ರನ್ ಮಷಿನ್' ವಿರಾಟ್ ಕೊಹ್ಲಿ ಮತ್ತೊಂದು ವಿಶ್ವ ದಾಖಲೆಯ ಹೊಸ್ತಿಲಲ್ಲಿದ್ದಾರೆ. ನವೆಂಬರ್ 4, 2026 ರಿಂದ ಆರಂಭವಾಗಲಿರುವ ನ್ಯೂಝಿಲೆಂಡ್ ವಿರುದ್ಧದ 5 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲೇ 'ಕಿಂಗ್ ಕೊಹ್ಲಿ' ಬ್ಯಾಟ್‌ನಿಂದ ಭರ್ಜರಿ ದಾಖಲೆಯನ್ನು ನಿರೀಕ್ಷಿಸಬಹುದು. ಅಷ್ಟೇ ಅಲ್ಲದೆ, ಈ ಇಡೀ ಸರಣಿಯ ಮೂಲಕ ಅವರು ಮತ್ತಷ್ಟು ಐತಿಹಾಸಿಕ ದಾಖಲೆಗಳನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ. ಆ ಮಹತ್ತರ ದಾಖಲೆಗಳಾವುವು ಎಂಬುದರ ಸಂಪೂರ್ಣ ವಿವರ ಇಲ್ಲಿದೆ... (PC: Gettyimages)

2 / 7

 13,000 ರನ್: ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆ ಈಗಾಗಲೇ ಕೊಹ್ಲಿ ಹೆಸರಿನಲ್ಲಿದೆ. ಪ್ರಸ್ತುತ ಈ ಸ್ಥಾನದಲ್ಲಿ 12,988 ರನ್ ಗಳಿಸಿರುವ ವಿರಾಟ್, ಇನ್ನು ಕೇವಲ 2 ರನ್ ಗಳಿಸಿದರೆ ಸಾಕು. ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ನಂ. 3 ಸ್ಥಾನದಲ್ಲಿ 13,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್ ಎಂಬ ಮಹಾನ್ ಕೀರ್ತಿಗೆ ಪಾತ್ರರಾಗಲಿದ್ದಾರೆ. (PC: Gettyimages)

3 / 7

2ನೇ ಸ್ಥಾನದ ಮೇಲೆ ಕಣ್ಣು: ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ (ಎಲ್ಲಾ ಮಾದರಿಗಳು ಸೇರಿ) ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಸದ್ಯ 3ನೇ ಸ್ಥಾನದಲ್ಲಿದ್ದಾರೆ. ಶ್ರೀಲಂಕಾದ ದಂತಕಥೆ ಕುಮಾರ್ ಸಂಗಕ್ಕಾರ (28,016 ರನ್) ಅವರ ದಾಖಲೆಯನ್ನು ಮುರಿಯಲು ಕೊಹ್ಲಿಗೆ ಇನ್ನು ಕೇವಲ 42 ರನ್​ಗಳ ಅಗತ್ಯವಿದೆ. ಈ ರನ್ ಗಳಿಸುತ್ತಿದ್ದಂತೆ ಸಚಿನ್ ತೆಂಡೂಲ್ಕರ್ ನಂತರ ವಿಶ್ವದಲ್ಲೇ ಅತಿ ಹೆಚ್ಚು ಅಂತರರಾಷ್ಟ್ರೀಯ ರನ್ ಗಳಿಸಿದ ಎರಡನೇ ಬ್ಯಾಟರ್ ಆಗಿ ಕೊಹ್ಲಿ ಹೊರಹೊಮ್ಮಲಿದ್ದಾರೆ. (PC: Gettyimages)

4 / 7

28,000 ರನ್: ವಿರಾಟ್ ಕೊಹ್ಲಿ ಪ್ರಸ್ತುತ 27,975 ಅಂತರರಾಷ್ಟ್ರೀಯ ರನ್‌ಗಳನ್ನು ಗಳಿಸಿದ್ದು, ಇನ್ನು ಕೇವಲ 25 ರನ್ ಗಳಿಸಿದರೆ 28,000 ರನ್‌ಗಳ ಮೈಲಿಗಲ್ಲು ತಲುಪಲಿದ್ದಾರೆ. ಈ ಮೂಲಕ ಅತೀ ಕಡಿಮೆ ಇನಿಂಗ್ಸ್​ಗಳ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ 28 ಸಾವಿರ ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ಕಿಂಗ್ ಕೊಹ್ಲಿ ತಮ್ಮದಾಗಿಸಿಕೊಳ್ಳಲಿದ್ದಾರೆ. (PC: Gettyimages)

5 / 7

 50 ಪ್ಲಸ್ ಅರ್ಧಶತಕ: ವಿದೇಶದಲ್ಲಿ ಅತಿ ಹೆಚ್ಚು ಬಾರಿ 50 ಕ್ಕಿಂತ ಹೆಚ್ಚು ರನ್ ಬಾರಿಸಿದ ದಾಖಲೆಯಲ್ಲೂ ವಿರಾಟ್ ಕೊಹ್ಲಿ ಮುಂಚೂಣಿಯಲ್ಲಿದ್ದಾರೆ. ಸದ್ಯ 49 ಬಾರಿ ಈ ಸಾಧನೆ ಮಾಡಿರುವ ಕೊಹ್ಲಿ, ಈ ಸರಣಿಯಲ್ಲಿ ಮತ್ತೊಂದು ಅರ್ಧಶತಕ ಅಥವಾ ಶತಕ ಬಾರಿಸಿದರೆ, ವಿದೇಶಿ ನೆಲದಲ್ಲಿ 50 ಬಾರಿ '50+ ರನ್' ಗಳಿಸಿದ ವಿಶ್ವದ ಮೊದಲ ಆಟಗಾರನಾಗಲಿದ್ದಾರೆ. (PC: Gettyimages)

6 / 7

ಸೆನಾ ರಾಷ್ಟ್ರಗಳಲ್ಲಿ 50+ ಸರಾಸರಿ: ಸೌತ್ ಆಫ್ರಿಕಾ, ಇಂಗ್ಲೆಂಡ್, ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್ (SENA) ದೇಶಗಳಲ್ಲಿ ಅದ್ಭುತ ದಾಖಲೆ ಹೊಂದಿರುವ ಕೊಹ್ಲಿ, ನ್ಯೂಝಿಲೆಂಡ್ ನೆಲದಲ್ಲಿ 13 ಇನಿಂಗ್ಸ್‌ಗಳಿಂದ 49.66 ಸರಾಸರಿಯಲ್ಲಿ 596 ರನ್ ಗಳಿಸಿದ್ದಾರೆ. ಕಿವೀಸ್ ನೆಲದಲ್ಲಿ ಇನ್ನು ಕೇವಲ 4 ರನ್ ಗಳಿಸಿದರೆ 600 ರನ್ ಪೂರ್ಣಗೊಳ್ಳಲಿದ್ದು, ಇದರೊಂದಿಗೆ ನಾಲ್ಕೂ SENA ರಾಷ್ಟ್ರಗಳಲ್ಲಿ 50 ಕ್ಕಿಂತ ಹೆಚ್ಚು ಬ್ಯಾಟಿಂಗ್ ಸರಾಸರಿ ಹೊಂದಿರುವ ಬ್ಯಾಟರ್ ಎಂಬ ಅಪರೂಪದ ದಾಖಲೆ ನಿರ್ಮಾಣವಾಗಲಿದೆ. (PC: Gettyimages)

7 / 7

ಒಟ್ಟಿನಲ್ಲಿ, ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ 55ನೇ ಶತಕ ಸಿಡಿಸಿ ಅದ್ಭುತ ಫಾರ್ಮ್ ಪ್ರದರ್ಶಿಸಿರುವ ವಿರಾಟ್ ಕೊಹ್ಲಿ ಕಡೆಯಿಂದ ನ್ಯೂಝಿಲೆಂಡ್ ಅಂಗಳದಲ್ಲೂ ಭರ್ಜರಿ ಬ್ಯಾಟಿಂಗ್ ನಿರೀಕ್ಷಿಸಬಹುದು. ಈ ರನ್ ಅಬ್ಬರದೊಂದಿಗೆ 'ಕಿಂಗ್ ಕೊಹ್ಲಿ' ಹಲವು ಅಪರೂಪದ ಜಾಗತಿಕ ದಾಖಲೆಗಳನ್ನು ತಮ್ಮದಾಗಿಸಿಕೊಳ್ಳುವುದನ್ನು ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. (PC: Gettyimages)

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಚೀಫ್ ಸಬ್ ಎಡಿಟರ್. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us