Virat Kohli: ಮತ್ತೊಂದು ವಿಶ್ವ ದಾಖಲೆ ಮೇಲೆ ಕಣ್ಣಿಟ್ಟ ವಿರಾಟ್ ಕೊಹ್ಲಿ
India vs South Africa: ಭಾರತ-ಸೌತ್ ಆಫ್ರಿಕಾ ನಡುವಣ ಟೆಸ್ಟ್ ಸರಣಿಯು ನಾಳೆಯಿಂದ (ಡಿ.26) ಶುರುವಾಗಲಿದೆ. ಎರಡು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್ ಸೆಂಚುರಿಯನ್ನ ಸೂಪರ್ ಸ್ಪೋರ್ಟ್ ಪಾರ್ಕ್ ಮೈದಾನದಲ್ಲಿ ನಡೆಯಲಿದೆ. ಇನ್ನು ದ್ವಿತೀಯ ಟೆಸ್ಟ್ ಪಂದ್ಯವು ಕೇಪ್ಟೌನ್ನಲ್ಲಿ ಜನವರಿ 3 ರಿಂದ ಆರಂಭವಾಗಲಿದೆ.
Updated on: Dec 25, 2023 | 2:37 PM

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಮತ್ತೊಂದು ವಿಶ್ವ ದಾಖಲೆ ಬರೆಯುವ ಹೊಸ್ತಿಲಲ್ಲಿದ್ದಾರೆ. ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಬ್ಯಾಟ್ನಿಂದ 66 ರನ್ಗಳು ಮೂಡಿಬಂದರೆ ಕ್ರಿಕೆಟ್ ಇತಿಹಾಸದಲ್ಲೇ ಹೊಸ ದಾಖಲೆ ನಿರ್ಮಾಣವಾಗಲಿದೆ.

ಹೌದು, ಕ್ರಿಕೆಟ್ ಇತಿಹಾಸದಲ್ಲೇ ವರ್ಷವೊಂದರಲ್ಲಿ ಅತೀ ಹೆಚ್ಚು ಬಾರಿ 2 ಸಾವಿರ ರನ್ ಕಲೆಹಾಕಿದ ದಾಖಲೆ ವಿರಾಟ್ ಕೊಹ್ಲಿ ಹಾಗೂ ಕುಮಾರ ಸಂಗಾಕ್ಕರ ಹೆಸರಿನಲ್ಲಿದೆ.

ಶ್ರೀಲಂಕಾದ ಕುಮಾರ ಸಂಗಾಕ್ಕರ ವರ್ಷವೊಂದರಲ್ಲಿ ಒಟ್ಟು 6 ಬಾರಿ 2 ಸಾವಿರ ರನ್ ಕಲೆಹಾಕಿದ್ದರು. ಇತ್ತ ಕಿಂಗ್ ಕೊಹ್ಲಿ ಕೂಡ ಆರು ಬಾರಿ ಈ ಸಾಧನೆ ಮಾಡುವ ಮೂಲಕ ಸಂಗಾಕ್ಕರ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸರಿಗಟ್ಟಿದ್ದರು.

ಈ ವರ್ಷ 34 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ ಒಟ್ಟು 1934 ರನ್ ಕಲೆಹಾಕಿದ್ದಾರೆ. ಇದೀಗ 2 ಸಾವಿರ ರನ್ ಪೂರೈಸಲು ಕೊಹ್ಲಿಗೆ ಕೇವಲ 66 ರನ್ಗಳ ಅವಶ್ಯಕತೆಯಿದೆ. ಒಂದು ವೇಳೆ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಗಳಲ್ಲಿ 66 ರನ್ ಕಲೆಹಾಕಿದರೆ ಕುಮಾರ ಸಂಗಾಕ್ಕರ (6 ಬಾರಿ) ಅವರನ್ನು ಕಿಂಗ್ ಕೊಹ್ಲಿ ಹಿಂದಿಕ್ಕಲಿದ್ದಾರೆ.

ಈ ಮೂಲಕ ವರ್ಷವೊಂದರಲ್ಲಿ ಅತೀ ಹೆಚ್ಚು ಬಾರಿ 2 ಸಾವಿರ ರನ್ ಪೂರೈಸಿದ ವಿಶ್ವ ದಾಖಲೆಯನ್ನು ಕಿಂಗ್ ಕೊಹ್ಲಿ ತಮ್ಮದಾಗಿಸಿಕೊಳ್ಳಬಹುದು. ಅದರಂತೆ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ 66+ ರನ್ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಹೊಸ ಇತಿಹಾಸ ನಿರ್ಮಿಸಲಿದ್ದಾರಾ ಕಾದು ನೋಡಬೇಕಿದೆ.

ಭಾರತ-ಸೌತ್ ಆಫ್ರಿಕಾ ನಡುವಣ ಟೆಸ್ಟ್ ಸರಣಿಯು ನಾಳೆಯಿಂದ (ಡಿ.26) ಶುರುವಾಗಲಿದೆ. ಎರಡು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್ ಸೆಂಚುರಿಯನ್ನ ಸೂಪರ್ ಸ್ಪೋರ್ಟ್ ಪಾರ್ಕ್ ಮೈದಾನದಲ್ಲಿ ನಡೆಯಲಿದೆ. ಇನ್ನು ದ್ವಿತೀಯ ಟೆಸ್ಟ್ ಪಂದ್ಯವು ಕೇಪ್ಟೌನ್ನಲ್ಲಿ ಜನವರಿ 3 ರಿಂದ ಆರಂಭವಾಗಲಿದೆ.



















