PBKS vs RCB, IPL 2023: ಗೆಲ್ಲಲೇ ಬೇಕಾದ ಒತ್ತಡ: ಮೊಹಾಲಿಯಲ್ಲಿ ಆರ್​ಸಿಬಿ ಹುಡುಗರ ಭರ್ಜರಿ ಅಭ್ಯಾಸ

Updated on: Apr 20, 2023 | 11:39 AM

RCB Practice: ಹೈವೋಲ್ಟೇಜ್ ಪಂದ್ಯಕ್ಕಾಗಿ ಆರ್​ಸಿಬಿ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ವಿರಾಟ್ ಕೊಹ್ಲಿ, ನಾಯಕ ಫಾಫ್ ಡುಪ್ಲೆಸಿಸ್, ಗ್ಲೆನ್ ಮ್ಯಾಕ್ಸ್​ವೆಲ್ ಬ್ಯಾಟಿಂಗ್ ಅಭ್ಯಾಸ ನಡೆಸಿದರು. (Photo Credit, RCB Twitter)

1 / 7
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿಂದ ಎರಡು ಪಂದ್ಯಗಳನ್ನು ಆಯೋಜಿಸಲಾಗಿದೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸೊಯೇಷನ್ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಮ್ಯಾಚ್​ನಲ್ಲಿ ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (PBKS vs RCB) ತಂಡ ಮುಖಾಮುಖಿ ಆಗಲಿದೆ.

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿಂದ ಎರಡು ಪಂದ್ಯಗಳನ್ನು ಆಯೋಜಿಸಲಾಗಿದೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸೊಯೇಷನ್ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಮ್ಯಾಚ್​ನಲ್ಲಿ ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (PBKS vs RCB) ತಂಡ ಮುಖಾಮುಖಿ ಆಗಲಿದೆ.

2 / 7

ಮೊಹಾಲಿಯಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತಂಡ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ವೇಯ್ನ್ ಪಾರ್ನೆಲ್ ಬದಲು ಜೋಶ್ ಹ್ಯಾಝಲ್​ವುಡ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

3 / 7

ಮೊಹಮ್ಮದ್ ಸಿರಾಜ್ ಬಿಟ್ಟರೆ ಮತ್ಯಾವ ಬೌಲರ್ ಕೂಡ ಮಾರಕವಾಗಿ ಗೋಚರಿಸುತ್ತಿಲ್ಲ. ಹೀಗಾಗಿ ಬೌಲಿಂಗ್ ವಿಭಾಗದಲ್ಲಿ ಇಂದು ಬದಲಾವಣೆ ಖಚಿತ ಎಂದು ಹೇಳಬಹುದು.

4 / 7

ಇದೀಗ ಈ ಹೈವೋಲ್ಟೇಜ್ ಪಂದ್ಯಕ್ಕಾಗಿ ಆರ್​ಸಿಬಿ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ವಿರಾಟ್ ಕೊಹ್ಲಿ, ನಾಯಕ ಫಾಫ್ ಡುಪ್ಲೆಸಿಸ್, ಗ್ಲೆನ್ ಮ್ಯಾಕ್ಸ್​ವೆಲ್ ಬ್ಯಾಟಿಂಗ್ ಅಭ್ಯಾಸ ನಡೆಸಿದರು.

5 / 7

ಮಹಿಪಾಲ್ ಲುಮ್ರೂರ್, ದಿನೇಶ್ ಕಾರ್ತಿಕ್, ಶಹ್ಬಾಜ್ ಅಹ್ಮಾದ್ ಕಡೆಯಿಂದ ಉತ್ತಮ ಆಟಬರಬೇಕಿದೆ. ಪಾಯಿಂಟ್ ಟೇಬಲ್​ನಲ್ಲಿ ಮೇಲಕ್ಕೇರಲು ಇಂದಿನ ಪಂದ್ಯದಲ್ಲಿ ಆರ್​ಸಿಬಿ ಗೆಲ್ಲಲೇ ಬೇಕಾಗಿದೆ.

6 / 7

ಈ ಬಾರಿ ಆರ್​ಸಿಬಿ ಆಡಿರುವ 5 ಪಂದ್ಯಗಳಲ್ಲಿ ಆರ್​ಸಿಬಿ ಮೂರರಲ್ಲಿ ಸೋತಿದೆ. ಇದೀಗ ಮೊದಲಾರ್ಧಕ್ಕೂ ಮುನ್ನ ಸತತ ಗೆಲುವು ಸಾಧಿಸುವ ಹಂಬಲದಲ್ಲಿದೆ ಆರ್​ಸಿಬಿ.

7 / 7

ಆರ್​ಸಿಬಿ ತಂಡವು ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ​ಸ್ಟೇಡಿಯಂನಲ್ಲಿ ಒಟ್ಟು 7 ಪಂದ್ಯಗಳನ್ನಾಡಿದೆ. ಈ ವೇಳೆ ಆರ್​ಸಿಬಿ ಗೆದ್ದಿರುವುದು ಕೇವಲ 4 ಬಾರಿ ಮಾತ್ರ. ಇನ್ನು ಕಳೆದ ಸೀಸನ್​ನಲ್ಲಿ ಪಂಜಾಬ್ ವಿರುದ್ಧ ಆರ್​ಸಿಬಿ ಎರಡು ಬಾರಿ ಕೂಡ ಸೋಲನುಭವಿಸಿತ್ತು.

Loading...
Unable to load recommendations.
Follow Us