ಭರ್ಜರಿ ಸೆಂಚುರಿ ಸಿಡಿಸಿ ಮತ್ತೊಂದು ವಿಶ್ವ ದಾಖಲೆ ಬರೆದ ಕಿಂಗ್ ಕೊಹ್ಲಿ
TV9 Web | Updated By: ಝಾಹಿರ್ ಯೂಸುಫ್
Updated on:
Oct 19, 2023 | 10:01 PM
Virat Kohli Records: ಈ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡ ನೀಡಿದ 257 ರನ್ಗಳ ಗುರಿಯನ್ನು ವಿರಾಟ್ ಕೊಹ್ಲಿಯ ಶತಕದೊಂದಿಗೆ ಟೀಮ್ ಇಂಡಿಯಾ 41.3 ಓವರ್ಗಳಲ್ಲಿ ಚೇಸ್ ಮಾಡಿತು. ಈ ಮೂಲಕ ಭಾರತ ತಂಡ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
1 / 6
ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ವರ್ಲ್ಡ್ ರೆಕಾರ್ಡ್ ಅನ್ನು ಮುರಿಯುವ ಮೂಲಕ ಎಂಬುದು ವಿಶೇಷ.
2 / 6
ಬಾಂಗ್ಲಾ ವಿರುದ್ದದ ಪಂದ್ಯದಲ್ಲಿ 97 ಎಸೆತಗಳನ್ನು ಎದುರಿಸಿದ ಕಿಂಗ್ ಕೊಹ್ಲಿ 4 ಭರ್ಜರಿ ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ ಅಜೇಯ 103 ರನ್ ಬಾರಿಸಿದ್ದರು.
3 / 6
ಈ ಶತಕದೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಕಿಂಗ್ ಕೊಹ್ಲಿ 26 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ಇಂಟರ್ನ್ಯಾಷನಲ್ ಕ್ರಿಕೆಟ್ನಲ್ಲಿ ಅತೀ ವೇಗವಾಗಿ 26000 ರನ್ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
4 / 6
ಇದಕ್ಕೂ ಮುನ್ನ ಈ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಸಚಿನ್ 601 ಇನಿಂಗ್ಸ್ಗಳ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 26 ಸಾವಿರ ರನ್ ಕಲೆಹಾಕಿದ್ದರು.
5 / 6
ಇದೀಗ ಕಿಂಗ್ ಕೊಹ್ಲಿ ಕೇವಲ 577 ಇನಿಂಗ್ಸ್ಗಳ ಮೂಲಕ 26 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಮುರಿದು ಹೊಸ ಇತಿಹಾಸ ನಿರ್ಮಿಸಿದ್ದಾರೆ.
6 / 6
ಇನ್ನು ಈ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡ ನೀಡಿದ 257 ರನ್ಗಳ ಗುರಿಯನ್ನು ವಿರಾಟ್ ಕೊಹ್ಲಿಯ ಶತಕದೊಂದಿಗೆ ಟೀಮ್ ಇಂಡಿಯಾ 41.3 ಓವರ್ಗಳಲ್ಲಿ ಚೇಸ್ ಮಾಡಿತು. ಈ ಮೂಲಕ ಭಾರತ ತಂಡ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.