ನಾಲ್ಕನೇ ದಿನದಾಟದಲ್ಲಿ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಮೂರು ವರ್ಷ, ಮೂರು ತಿಂಗಳ ಬಳಿಕ ಟೆಸ್ಟ್ ಕ್ರಿಕೆಟ್ನಲ್ಲಿ ಶತಕ ಸಿಡಿಸಿ ಸಂಭ್ರಮಿಸಿದರು. 241 ಎಸೆತಗಳಲ್ಲಿ ಶತಕ ಸಾಧನೆ ತೋರಿದ ಕೊಹ್ಲಿ ಇನ್ನಿಂಗ್ಸ್‌ನಲ್ಲಿ 5 ಬೌಂಡರಿಗಳಿದ್ದವು. ಇಷ್ಟು ಎಸೆತಗಳನ್ನು ಎದುರಿಸಿ ನಿಧಾನಗತಿಯಲ್ಲಿ ಶತಕ ಗಳಿಸಿರುವ ಅವರ ಎರಡನೇ ಇನ್ನಿಂಗ್ಸ್ ಇದಾಗಿದೆ.