AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಟೆಸ್ಟ್​ ಕೆರಿಯರ್​ನಲ್ಲಿ ಮೊದಲ ಬಾರಿಗೆ ವಿಭಿನ್ನವಾಗಿ ಔಟಾದ ವಿರಾಟ್ ಕೊಹ್ಲಿ..!

India vs Australia: ಈ ಪಂದ್ಯದಲ್ಲಿ ಮೊದಲ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್​ನಲ್ಲಿ 263 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 262 ರನ್​ ಪೇರಿಸಿತು.

TV9 Web
| Updated By: ಝಾಹಿರ್ ಯೂಸುಫ್|

Updated on:Feb 19, 2023 | 9:34 PM

Share
ಬರೋಬ್ಬರಿ 106 ಟೆಸ್ಟ್​ ಪಂದ್ಯಗಳು...ಅದರಲ್ಲಿ 180 ಇನಿಂಗ್ಸ್​ನಲ್ಲಿ ಬ್ಯಾಟ್ ಬೀಸಿರುವ ವಿರಾಟ್ ಕೊಹ್ಲಿ ಇದೇ ಮೊದಲ ಬಾರಿಗೆ ವಿಭಿನ್ನವಾಗಿ ಔಟಾಗಿದ್ದಾರೆ. ಅದು ಕೂಡ ತಮ್ಮದೇ ತಪ್ಪಿನಿಂದಾಗಿ ಎಂಬುದೇ ವಿಶೇಷ.

1 / 6
ಹೌದು, ದೆಹಲಿಯಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ನಡುವಣ 2ನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮೊದಲ ಇನಿಂಗ್ಸ್​ನಲ್ಲಿ 44 ರನ್ ಬಾರಿಸಿ ಎಲ್​ಬಿಡಬ್ಲ್ಯೂ ಆಗಿ ಔಟಾಗಿದ್ದರು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಕಿಂಗ್ ಕೊಹ್ಲಿ 20 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದರು.

2 / 6
ಆದರೆ ದ್ವಿತೀಯ ಇನಿಂಗ್ಸ್​ನಲ್ಲಿ ಕೊಹ್ಲಿ ಔಟ್ ಆಗಿದ್ದು ಸ್ಟಂಪಿಂಗ್​ನಿಂದಾಗಿ ಎಂಬುದೇ ಇಲ್ಲಿ ವಿಶೇಷ. ಅಂದರೆ 179 ಟೆಸ್ಟ್ ಇನಿಂಗ್ಸ್ ಆಡಿದ್ದ ಕೊಹ್ಲಿ ಒಮ್ಮೆಯೂ ಸ್ಟಂಪ್ ಔಟ್ ಆಗಿರಲಿಲ್ಲ. ಆದರೆ 2ನೇ ಇನಿಂಗ್ಸ್​ನ 19ನೇ ಓವರ್​ನ 2ನೇ ಎಸೆತವನ್ನು ಕೊಹ್ಲಿ ಮುಂದೆ ಬಂದು ರಕ್ಷಣಾತ್ಮಕವಾಗಿ ಆಡಲು ಯತ್ನಿಸಿದ್ದರು.

3 / 6
ಆದರೆ ಮರ್ಫಿ ಎಸೆದ ಚೆಂಡು ವಿರಾಟ್ ಕೊಹ್ಲಿಯನ್ನು ವಂಚಿಸಿ ವಿಕೆಟ್ ಕೀಪರ್ ಅಲೆಕ್ಸ್ ಕ್ಯಾರಿ ಕೈ ಸೇರಿತು. ಕ್ಷಣಾರ್ಧದಲ್ಲೇ ವಿಕೆಟ್ ಬೇಲ್ಸ್ ಎಗರಿಸುವ ಮೂಲಕ ಅಲೆಕ್ಸ್ ಕ್ಯಾರಿ ಕೊಹ್ಲಿಯನ್ನು ಸ್ಟಂಪ್ ಔಟ್ ಮಾಡಿದರು. ಇದರೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಮೊದಲ ಬಾರಿಗೆ ಸ್ಟಂಪ್ ಔಟ್ ಆಗಿ ನಿರ್ಗಮಿಸಬೇಕಾಯಿತು. ಅತ್ತ ಕೊಹ್ಲಿಯನ್ನು ಟೆಸ್ಟ್​ನಲ್ಲಿ ಸ್ಟಂಪ್ ಔಟ್ ಮಾಡಿದ ಮೊದಲ ಕೀಪರ್ ಎಂಬ ಹೆಗ್ಗಳಿಕೆಯು ಅಲೆಕ್ಸ್ ಕ್ಯಾರಿ ಪಾಲಾಯಿತು.

4 / 6
ಇನ್ನು ಈ ಪಂದ್ಯದಲ್ಲಿ ಮೊದಲ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್​ನಲ್ಲಿ 263 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 262 ರನ್​ ಪೇರಿಸಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ತಂಡವು ಕೇವಲ 113 ರನ್​ಗಳಿಗೆ ಆಲೌಟ್ ಆಯಿತು.

5 / 6
ಅದರಂತೆ ಸುಲಭ ಗುರಿ ಪಡೆದ ಟೀಮ್ ಇಂಡಿಯಾ 4 ವಿಕೆಟ್ ನಷ್ಟಕ್ಕೆ 118 ರನ್ ಬಾರಿಸಿ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ 4 ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ 2-0 ಅಂತರದಿಂದ ಮುನ್ನಡೆ ಸಾಧಿಸಿದೆ.

6 / 6

Published On - 9:30 pm, Sun, 19 February 23

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು

ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​

ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್

ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ

ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ

ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ