- Kannada News Photo gallery Cricket photos Virat Kohli gifts special bat to Bangladesh's Shakib al Hasan
ಶಕೀಬ್ ಅಲ್ ಹಸನ್ಗೆ ವಿಶೇಷ ಗಿಫ್ಟ್ ನೀಡಿದ ವಿರಾಟ್ ಕೊಹ್ಲಿ
Shakib al Hasan - Virat Kohli: ಬಾಂಗ್ಲಾದೇಶ್ ತಂಡದ ಶ್ರೇಷ್ಠ ಆಲ್ರೌಂಡರ್ ಶಕೀಬ್ ಅಲ್ ಹಸನ್ ಭಾರತದಲ್ಲಿ ತಮ್ಮ ಕೊನೆಯ ಪಂದ್ಯವಾಡಿದ್ದಾರೆ. ಕಾನ್ಪುರ ಟೆಸ್ಟ್ ಪಂದ್ಯದೊಂದಿಗೆ ವಿದೇಶಿ ಸರಣಿ ಮುಗಿಸಿರುವ ಶಕೀಬ್ ಅಲ್ ಹಸನ್ಗೆ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ವಿಶೇಷ ಉಡುಗೊರೆ ನೀಡಿ ಬೀಳ್ಕೊಟ್ಟಿದ್ದಾರೆ.
Updated on: Oct 01, 2024 | 5:58 PM

ಕಾನ್ಪುರದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ದದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 7 ವಿಕೆಟ್ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಎರಡು ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ. ವಿಶೇಷ ಎಂದರೆ ಈ ಸರಣಿಯು ಬಾಂಗ್ಲಾದೇಶ್ ತಂಡದ ಮಾಜಿ ನಾಯಕ ಶಕೀಬ್ ಅಲ್ ಹಸನ್ ಅವರ ಕೊನೆಯ ವಿದೇಶಿ ಟೆಸ್ಟ್ ಸರಣಿ.

ಅಂದರೆ ಈಗಾಗಲೇ ಟೆಸ್ಟ್ ಕ್ರಿಕೆಟ್ಗೆ ವಿದಾಯ ಘೋಷಿಸಿರುವ ಶಕೀಬ್ ಅಲ್ ಹಸನ್ ಇನ್ಮುಂದೆ ಯಾವುದೇ ವಿದೇಶಿ ಟೆಸ್ಟ್ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ಅಲ್ಲದೆ ಸೌತ್ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯದ ಮೂಲಕ ರೆಡ್ ಬಾಲ್ ಕ್ರಿಕೆಟ್ಗೆ ವಿದಾಯ ಹೇಳಲಿದ್ದಾರೆ.

ಹೀಗಾಗಿಯೇ ಭಾರತದ ವಿರುದ್ಧದ ಟೆಸ್ಟ್ ಸರಣಿಯು ಶಕೀಬ್ ಅಲ್ ಹಸನ್ ಪಾಲಿಗೆ ತುಂಬಾ ಮಹತ್ವದ್ದಾಗಿತ್ತು. ಇದಾಗ್ಯೂ ಈ ಸರಣಿಯಲ್ಲಿ ಬಾಂಗ್ಲಾದೇಶ್ ತಂಡಕ್ಕೆ ಗೆಲ್ಲಲು ಸಾಧ್ಯವಾಗಲಿಲ್ಲ. ಆದರೆ ಸೋಲಿನೊಂದಿಗೆ ವಿದೇಶಿ ಸರಣಿ ಕೊನೆಗೊಳಿಸುತ್ತಿರುವ ಶಕೀಬ್ಗೆ ವಿರಾಟ್ ಕೊಹ್ಲಿ ತಮ್ಮ ಬ್ಯಾಟ್ ಅನ್ನು ಗಿಫ್ಟ್ ಮಾಡಿದ್ದಾರೆ.

ಪಂದ್ಯದ ಬಳಿಕ ಶಕೀಬ್ ಅಲ್ ಹಸನ್ ಜೊತೆ ಕುಶಲೋಪರಿ ನಡೆಸಿದ ವಿರಾಟ್ ಕೊಹ್ಲಿ ತಮ್ಮ ವಿಶೇಷ ಬ್ಯಾಟ್ ಅನ್ನು ಉಡುಗೊರೆಯಾಗಿ ನೀಡಿದರು. ಈ ಮೂಲಕ ಬಾಂಗ್ಲಾದೇಶ್ ತಂಡದ ಶ್ರೇಷ್ಠ ಆಲ್ರೌಂಡರ್ನನ್ನು ಉಡುಗೊರೆಯೊಂದಿಗೆ ಕಿಂಗ್ ಕೊಹ್ಲಿ ಬೀಳ್ಕೊಟ್ಟರು.

ಬಾಂಗ್ಲಾದೇಶ್ ಪರ ಈವರೆಗೆ 71 ಟೆಸ್ಟ್ ಪಂದ್ಯಗಳನ್ನಾಡಿರುವ ಶಕೀಬ್ ಅಲ್ ಹಸನ್ ಒಟ್ಟು 4609 ರನ್ ಕಲೆಹಾಕಿದ್ದಾರೆ. ಹಾಗೆಯೇ 121 ಟೆಸ್ಟ್ ಇನಿಂಗ್ಸ್ಗಳಲ್ಲಿ ಬೌಲಿಂಗ್ ಮಾಡಿರುವ ಅವರು 15675 ಎಸೆತಗಳಲ್ಲಿ 246 ವಿಕೆಟ್ಗಳನ್ನು ಕಬಳಿಸಿದ್ದಾರೆ. ಇದೀಗ ತಮ್ಮ 37ನೇ ವಯಸ್ಸಿನಲ್ಲಿ ಶಕೀಬ್ ಅಲ್ ಹಸನ್ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಅದರಂತೆ ಸೌತ್ ಆಫ್ರಿಕಾ ವಿರುದ್ಧ ತವರಿನಲ್ಲಿ ಕೊನೆಯ ಪಂದ್ಯವಾಡುವ ಮೂಲಕ ರೆಡ್ ಬಾಲ್ ಕ್ರಿಕೆಟ್ಗೆ ಗುಡ್ ಬೈ ಹೇಳಲಿದ್ದಾರೆ.
