- Kannada News Photo gallery Cricket photos virat kohli half century highest run getter in t20 world cup cricket news in kannada
Virat Kohli: 3 ಅರ್ಧಶತಕ, 220 ರನ್, ವಿಶ್ವ ದಾಖಲೆ ಪುಡಿಪುಡಿ..! ಟಿ20 ವಿಶ್ವಕಪ್‌ನಲ್ಲಿ ಕೊಹ್ಲಿ ಈಗ ನಂ.1
IND vs BAN: ವಿರಾಟ್ ಕೊಹ್ಲಿ ಈ ಪಂದ್ಯದಲ್ಲು 16 ರನ್ ಗಳಿಸಿದ ತಕ್ಷಣ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದರು.
Updated on:Nov 02, 2022 | 6:22 PM

2022 ರ ಟಿ 20 ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಅವರ ಅದ್ಭುತ ಪ್ರದರ್ಶನ ಮುಂದುವರೆದಿದೆ. ವಿರಾಟ್ ಕೊಹ್ಲಿ ಬಾಂಗ್ಲಾದೇಶ ವಿರುದ್ಧವೂ ಭರ್ಜರಿ ಅರ್ಧಶತಕ ಗಳಿಸಿದ್ದರು. ಕೊಹ್ಲಿಯ 64 ರನ್‌ಗಳ ಇನಿಂಗ್ಸ್ ಆಧಾರದ ಮೇಲೆ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿ 184 ರನ್ ಗಳಿಸಿತು. ಜೊತೆಗೆ ಬಾಂಗ್ಲಾ ತಂಡವನ್ನು 5 ರನ್ಗಳಿಂದ ಮಣಿಸುವುದರಲ್ಲೂ ಯಶಸ್ವಿಯಾಯಿತು. ಈ ಅರ್ಧಶತಕದೊಂದಿಗೆ ಕಿಂಗ್ ಕೊಹ್ಲಿ ಟಿ20 ಕ್ರಿಕೆಟ್ನಲ್ಲಿ ನೂತನ ದಾಖಲೆ ಸಹ ಬರೆದರು.

ತಮ್ಮ ಅರ್ಧಶತಕದ ಇನ್ನಿಂಗ್ಸ್‌ನಲ್ಲಿ, ವಿರಾಟ್ ಕೊಹ್ಲಿ ಟಿ20 ವಿಶ್ವಕಪ್‌ನ ದೊಡ್ಡ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿಯಾದರು. ವಿರಾಟ್ ಕೊಹ್ಲಿ ಈ ಪಂದ್ಯದಲ್ಲು 16 ರನ್ ಗಳಿಸಿದ ತಕ್ಷಣ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದರು. ಈ ಮೊದಲು ಟಿ20 ವಿಶ್ವಕಪ್‌ನಲ್ಲಿ ಮಹೇಲಾ ಜಯವರ್ಧನೆ 1016 ರನ್ ಗಳಿಸಿ, ಮೊದಲ ಸ್ಥಾನದಲ್ಲಿದ್ದರು. ವಿರಾಟ್ 23ನೇ ಇನ್ನಿಂಗ್ಸ್‌ನಲ್ಲಿ ಈ ದಾಖಲೆಯನ್ನು ಮುರಿದಿದ್ದಾರೆ.

ವಿರಾಟ್ ಕೊಹ್ಲಿ ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ತಮ್ಮ ಮೂರನೇ ಅರ್ಧಶತಕವನ್ನು ಗಳಿಸಿದರು. ವಿರಾಟ್ ಈ ಹಿಂದೆ ಪಾಕಿಸ್ತಾನದ ವಿರುದ್ಧ ಅಜೇಯ 82 ರನ್, ನಂತರ ನೆದರ್ಲ್ಯಾಂಡ್ಸ್ ವಿರುದ್ಧ 62 ರನ್ ಗಳಿಸಿದ್ದರು. ಈಗ ವಿರಾಟ್ ಕೊಹ್ಲಿ ಬಾಂಗ್ಲಾದೇಶ ವಿರುದ್ಧ ಅಜೇಯ 64 ರನ್ಗಳ ಇನ್ನಿಂಗ್ಸ್ ಆಡಿದರು.

ಹಾಗೆಯೇ 2022 ರ ಟಿ 20 ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 213 ರನ್‌ಗಳ ಗಡಿ ದಾಟಿದ ಕೊಹ್ಲಿ, ನೆದರ್ಲೆಂಡ್ಸ್‌ನ ಓಡೌಡ್ ಅವರನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ್ದಾರೆ.

ಎರಡನೇ ವಿಕೆಟ್‌ಗೆ ಕೆಎಲ್ ರಾಹುಲ್ ಜೊತೆ ವಿರಾಟ್ ಕೊಹ್ಲಿ ಅರ್ಧಶತಕದ ಜೊತೆಯಾಟ ನಡೆಸಿದರು. ಈ ಇಬ್ಬರು ಆಟಗಾರರು 37 ಎಸೆತಗಳಲ್ಲಿ 67 ರನ್‌ಗಳ ಜೊತೆಯಾಟವನ್ನು ಹಂಚಿಕೊಂಡರು. ಇದಕ್ಕೂ ಮೊದಲು ರೋಹಿತ್ ಶರ್ಮಾ ಮತ್ತು ರಾಹುಲ್ 21 ಎಸೆತಗಳಲ್ಲಿ 11 ರನ್ ಸೇರಿಸಲಷ್ಟೇ ಶಕ್ತರಾಗಿದ್ದರು.
Published On - 6:22 pm, Wed, 2 November 22




