- Kannada News Photo gallery Cricket photos Virat Kohli's 50+ Scores: New T20 Record in IPL 2025 Match
IPL 2025: ತವರಿನಲ್ಲಿ ರನ್ ಬರ ನೀಗಿಸಿಕೊಂಡು ಗೇಲ್ ದಾಖಲೆ ಮುರಿದ ವಿರಾಟ್ ಕೊಹ್ಲಿ
Virat Kohli's Half-Century: ರಾಜಸ್ಥಾನ್ ರಾಯಲ್ಸ್ ವಿರುದ್ಧದ ಐಪಿಎಲ್ 2025 ರ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧಶತಕ ಸಿಡಿಸಿ ತಮ್ಮ ತವರಿನಲ್ಲಿ ರನ್‌ಗಳ ಬರವನ್ನು ನೀಗಿಸಿಕೊಂಡು. ಇದರಿಂದ ಆರ್‌ಸಿಬಿಗೆ ಉತ್ತಮ ಆರಂಭ ಸಿಕ್ಕಿತು. ಅರ್ಧಶತಕದೊಂದಿಗೆ ಕ್ರಿಸ್ ಗೇಲ್ ದಾಖಲೆಯನ್ನು ಮುರಿದ ಕೊಹ್ಲಿ, ಮೊದಲು ಬ್ಯಾಟಿಂಗ್ ಮಾಡುವಾಗ ಅತಿ ಹೆಚ್ಚು 50+ ಸ್ಕೋರ್‌ಗಳ ದಾಖಲೆ ಸೃಷ್ಟಿಸಿದ್ದಾರೆ.
Updated on: Apr 24, 2025 | 9:29 PM

ರಾಜಸ್ಥಾನ್ ರಾಯಲ್ಸ್ ವಿರುದ್ಧದ ಐಪಿಎಲ್ 2025 ರ 42 ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ಆಟಗಾರ ವಿರಾಟ್ ಕೊಹ್ಲಿ ಅರ್ಧಶತಕ ಗಳಿಸುವ ಮೂಲಕ ತಮ್ಮ ತವರಿನಲ್ಲಿ ರನ್‌ಗಳ ಬರವನ್ನು ಕೊನೆಗೊಳಿಸಿದರು. ಈ ಮೂಲಕ ತಂಡಕ್ಕೆ ಉತ್ತಮ ಆರಂಭವನ್ನು ಒದಗಿಸಿಕೊಟ್ಟಿದಲ್ಲದೆ ಕ್ರಿಸ್ ಗೇಲ್ ದಾಖಲೆಯನ್ನು ಮುರಿದರು.

ವಾಸ್ತವವಾಗಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಈ ಸೀಸನ್ನ ಕೊನೆಯ ಮೂರು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ವಿಫಲರಾಗಿದ್ದರು. ಕಳೆದ ಮೂರು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಕೇವಲ 30 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಆದರೆ ಅವರು ರಾಜಸ್ಥಾನ ರಾಯಲ್ಸ್ ವಿರುದ್ಧ ಅದ್ಭುತ ಪುನರಾಗಮನ ಮಾಡಿ ಅರ್ಧಶತಕ ಗಳಿಸುವ ಮೂಲಕ ತವರಿನ ಪ್ರೇಕ್ಷಕರ ಮುಖದಲ್ಲಿ ನಗು ತರಿಸಿದರು.

ಇದರೊಂದಿಗೆ, ವಿರಾಟ್ ಕೊಹ್ಲಿ ಈಗ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಮೊದಲು ಬ್ಯಾಟಿಂಗ್ ಮಾಡುವಾಗ ಅತಿ ಹೆಚ್ಚು ರನ್ (50 ಕ್ಕಿಂತ ಹೆಚ್ಚು) ಗಳಿಸಿದ ದಾಖಲೆಯನ್ನು ಹೊಂದಿದ್ದಾರೆ. ಮೊದಲು ಬ್ಯಾಟಿಂಗ್ ಮಾಡುವಾಗ ವಿರಾಟ್ ಕೊಹ್ಲಿ 62 ಬಾರಿ 50 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಈ ವಿಚಾರದಲ್ಲಿ ಕೊಹ್ಲಿ ನಂತರ ಪಾಕಿಸ್ತಾನದ ಬಾಬರ್ ಅಜಮ್ ಇದ್ದಾರೆ.

ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್‌ನ ಸ್ಫೋಟಕ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ಮೊದಲು ಬ್ಯಾಟಿಂಗ್ ಮಾಡುವಾಗ 57 ಬಾರಿ 50 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಹಾಗೆಯೇ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ 55 ಬಾರಿ ಈ ಸಾಧನೆ ಮಾಡಿದ್ದಾರೆ. ಇಂಗ್ಲೆಂಡ್ ಬ್ಯಾಟ್ಸ್‌ಮನ್ ಜೋಸ್ ಬಟ್ಲರ್ 52 ಬಾರಿ ಈ ಸಾಧನೆ ಮಾಡಿದ್ದರೆ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್ ಕೂಡ 52 ಬಾರಿ 50+ ಸ್ಕೋರ್ ಬಾರಿಸಿದ ದಾಖಲೆ ಮಾಡಿದ್ದಾರೆ.

ಇದರೊಂದಿಗೆ ಕೊಹ್ಲಿ ಟಿ20ಯಲ್ಲಿ ಅಧಿಕ ಬಾರಿ 50 ಕ್ಕೂ ಹೆಚ್ಚು ರನ್ ಗಳಿಸಿದ ವಿಶ್ವದ ಎರಡನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೂಲಕ ಪಟ್ಟಿಯಲ್ಲಿ ಅವರು ವೆಸ್ಟ್ ಇಂಡೀಸ್ ಸ್ಫೋಟಕ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ಅವರನ್ನು ಹಿಂದಿಕ್ಕಿದ್ದಾರೆ. ಕ್ರಿಸ್ ಗೇಲ್ 110 ಬಾರಿ 50 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ.

ವಿರಾಟ್ ಕೊಹ್ಲಿ 111 ಬಾರಿ 50+ ರನ್ ಗಳಿಸಿದ್ದು, ಈ ವಿಷಯದಲ್ಲಿ ಅಗ್ರಸ್ಥಾನದಲ್ಲಿರುವ ಆಸ್ಟ್ರೇಲಿಯಾದ ಮಾಜಿ ಆರಂಭಿಕ ಆಟಗಾರ ಡೇವಿಡ್ ವಾರ್ನರ್ 117 ಬಾರಿ ಈ ಸಾಧನೆ ಮಾಡಿದ್ದಾರೆ. ಜೋಸ್ ಬಟ್ಲರ್ 95 ಬಾರಿ 50 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ.



















