Updated on: Oct 12, 2023 | 6:22 PM
ದೆಹಲಿಯಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧಶತಕ ಬಾರಿಸಿ ಮಿಂಚಿದ್ದರು. ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕಿಂಗ್ ಕೊಹ್ಲಿ 56 ಎಸೆತಗಳನ್ನು ಎದುರಿಸಿ 6 ಫೋರ್ಗಳೊಂದಿಗೆ ಅಜೇಯ 55 ರನ್ ಬಾರಿಸಿದ್ದರು.
ಈ ಅರ್ಧಶತಕದೊಂದಿಗೆ ಏಕದಿನ ಕ್ರಿಕೆಟ್ನಲ್ಲಿ ಯಶಸ್ವಿ ಚೇಸಿಂಗ್ ವೇಳೆ ಅತ್ಯಧಿಕ 50+ ಸ್ಕೋರ್ಗಳಿಸಿದ ವಿಶ್ವ ದಾಖಲೆ ವಿರಾಟ್ ಕೊಹ್ಲಿ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು.
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಏಕದಿನ ಕ್ರಿಕೆಟ್ನಲ್ಲಿ ಯಶಸ್ವಿಯಾದ ಚೇಸಿಂಗ್ನಲ್ಲಿ 45 ಬಾರಿ 50+ ಸ್ಕೋರ್ಗಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು.
ಇದೀಗ ಯಶಸ್ವಿ ಚೇಸಿಂಗ್ನಲ್ಲಿ 46ನೇ ಬಾರಿ 50+ ಸ್ಕೋರ್ಗಳಿಸುವ ಮೂಲಕ ವಿರಾಟ್ ಕೊಹ್ಲಿ ಸಚಿನ್ ಹೆಸರಿನಲ್ಲಿದ್ದ ಅಪರೂಪದ ದಾಖಲೆಯನ್ನು ಮುರಿದಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.
ಇನ್ನು ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿರುವ 49 ಏಕದಿನ ಶತಕಗಳ ದಾಖಲೆಯನ್ನು ಮುರಿಯಲು ವಿರಾಟ್ ಕೊಹ್ಲಿಗೆ 3 ಶತಕಗಳ ಅವಶ್ಯಕತೆಯಿದೆ. ಇದೀಗ ವಿಶ್ವಕಪ್ನಲ್ಲಿ ಕಣಕ್ಕಿಳಿಯುತ್ತಿರುವ ಕಿಂಗ್ ಕೊಹ್ಲಿ ಮುಂಬರುವ ಪಂದ್ಯಗಳಲ್ಲಿ ಈ ದಾಖಲೆ ಮುರಿಯಲಿದ್ದಾರಾ ಕಾದು ನೋಡಬೇಕಿದೆ.