AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಕಿಂಗ್ ಕೊಹ್ಲಿಯ ಆರ್ಭಟಕ್ಕೆ ಕ್ರಿಸ್ ಗೇಲ್ ವಿಶ್ವ ದಾಖಲೆಯೇ ಶೇಕಿಂಗ್

Virat Kohli Records: ಟಿ20 ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿ ಈವರೆಗೆ 413 ಪಂದ್ಯಗಳನ್ನಾಡಿದ್ದು, ಈ ವೇಳೆ 396 ಇನಿಂಗ್ಸ್ ಆಡಿದ್ದಾರೆ. ಈ ಇನಿಂಗ್ಸ್​ಗಳ ಮೂಲಕ ಒಟ್ಟು 13500 ರನ್ ಕಲೆಹಾಕಿದ್ದಾರೆ. ಇನ್ನು ಈ 396 ಇನಿಂಗ್ಸ್​ಗಳಲ್ಲಿ ಕೊಹ್ಲಿ ಬ್ಯಾಟ್​ನಿಂದ 9 ಭರ್ಜರಿ ಶತಕಗಳು ಹಾಗೂ 105 ಅರ್ಧಶತಕಗಳು ಮೂಡಿ ಬಂದಿವೆ.

ಝಾಹಿರ್ ಯೂಸುಫ್
|

Updated on: Jun 01, 2025 | 1:55 PM

Share
ಟಿ20 ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿ (Virat Kohli) ಮತ್ತೊಂದು ಮೈಲುಗಲ್ಲು ಮುಟ್ಟಿದ್ದಾರೆ. ಅದು ಕೂಡ 13500 ರನ್​ ಕಲೆಹಾಕುವ ಮೂಲಕ. ಅಂದರೆ ಟಿ20 ಕ್ರಿಕೆಟ್​ನಲ್ಲಿ ಹದಿಮೂರು ಸಾವಿರದ ಐನೂರು ರನ್ ಕಲೆಹಾಕಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಯನ್ನು ಕಿಂಗ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ.

1 / 5
ಈ ದಾಖಲೆಯೊಂದಿಗೆ ವಿರಾಟ್ ಕೊಹ್ಲಿ ಟಿ20 ರನ್ ಸರದಾರರ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದ್ದಾರೆ. ಒಂದು ವೇಳೆ ಐಪಿಎಲ್ ಫೈನಲ್ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಬ್ಯಾಟ್​ನಿಂದ ಶತಕ ಮೂಡಿಬಂದರೆ, ಈ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಬಹುದು. ಏಕೆಂದರೆ ಕೊಹ್ಲಿಗಿಂತ ಮುಂದಿರುವ ಕೀರನ್ ಪೊಲಾರ್ಡ್ (13537) ಹಾಗೂ ಶೊಯೆಬ್ ಮಲಿಕ್ 13571 ರನ್ ಕಲೆಹಾಕಿದ್ದಾರೆ.

2 / 5
ಹೀಗಾಗಿ ಜೂನ್ 3 ರಂದು ಅಹಮದಾಬಾದ್​ನಲ್ಲಿ ನಡೆಯಲಿರುವ ಫೈನಲ್​ ಪಂದ್ಯದಲ್ಲಿ ಕೊಹ್ಲಿ ಬ್ಯಾಟ್​ನಿಂದ ಮೂರಂಕಿ ರನ್ ಮೂಡಿಬಂದರೆ ಭರ್ಜರಿ ದಾಖಲೆ ನಿರ್ಮಾಣವಾಗಲಿದೆ. ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆಯಲು ಕೊಹ್ಲಿಗೆ ಬೇಕಿರುವುದು ಕೇವಲ 1063 ರನ್​ಗಳು ಮಾತ್ರ.

3 / 5
ಸದ್ಯ ಈ ವಿಶ್ವ ದಾಖಲೆ ವೆಸ್ಟ್ ಇಂಡೀಸ್​ನ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಯೂನಿವರ್ಸ್ ಬಾಸ್ ಖ್ಯಾತಿಯ ಗೇಲ್ 463 ಟಿ20 ಪಂದ್ಯಗಳಲ್ಲಿ 455 ಇನಿಂಗ್ಸ್ ಆಡಿದ್ದು, ಈ ವೇಳೆ 22 ಶತಕ ಹಾಗೂ 88 ಅರ್ಧಶತಕಗಳೊಂದಿಗೆ ಒಟ್ಟು 14562 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಪೇರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 5
ಸದ್ಯ ಐಪಿಎಲ್​ನಲ್ಲಿ ಮಾತ್ರ ಟಿ20 ಪಂದ್ಯಗಳನ್ನಾಡುತ್ತಿರುವ ವಿರಾಟ್ ಕೊಹ್ಲಿ ಮುಂಬರುವ ಸೀಸನ್​ಗಳ ಮೂಲಕ 1063 ರನ್​ಗಳನ್ನು ಕಲೆಹಾಕಿದರೆ, ಕ್ರಿಸ್ ಗೇಲ್ ಅವರನ್ನು ಹಿಂದಿಕ್ಕಿ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. ಹೀಗಾಗಿಯೇ ಮುಂಬರುವ ಐಪಿಎಲ್ ಮೂಲಕ ಕೊಹ್ಲಿ ಕಡೆಯಿಂದ ಈ ಭರ್ಜರಿ ದಾಖಲೆಯನ್ನು ನಿರೀಕ್ಷಿಸಬಹುದು.

5 / 5