- Kannada News Photo gallery Cricket photos Virat Kohli has played only two Tests since the World Cup final
Virat Kohli: 2 ತಿಂಗಳಲ್ಲಿ 14 ಪಂದ್ಯಗಳನ್ನು ತಪ್ಪಿಸಿಕೊಂಡ ವಿರಾಟ್ ಕೊಹ್ಲಿ
Virat Kohli: ಭಾರತ ಮತ್ತು ಇಂಗ್ಲೆಂಡ್ ನಡುವಣ 3ನೇ ಟೆಸ್ಟ್ ಪಂದ್ಯ ಫೆಬ್ರವರಿ 5 ರಿಂದ ಶುರುವಾಗಲಿದೆ. ರಾಜ್ಕೋಟ್ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಕಿಂಗ್ ಕೊಹ್ಲಿಯ ಕಂಬ್ಯಾಕ್ಗಾಗಿ ಮತ್ತಷ್ಟು ಪಂದ್ಯಗಳವರೆಗೆ ಕಾಯಬೇಕಾಗಿ ಬರಬಹುದು.
Updated on:Feb 08, 2024 | 12:54 PM

ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದ ವಿರಾಟ್ ಕೊಹ್ಲಿ (Virat Kohli) ಮೂರನೇ ಪಂದ್ಯಕ್ಕೂ ಅಲಭ್ಯರಾಗಲಿರುವುದು ಬಹುತೇಕ ಖಚಿತವಾಗಿದೆ. ವಿಶೇಷ ಎಂದರೆ ಏಕದಿನ ವಿಶ್ವಕಪ್ ಫೈನಲ್ ಬಳಿಕ ಕಿಂಗ್ ಕೊಹ್ಲಿ ಆಡಿದ್ದಕ್ಕಿಂತ ಹೊರಗುಳಿದಿರುವುದೇ ಹೆಚ್ಚು.

ಅಂದರೆ ಏಕದಿನ ವಿಶ್ವಕಪ್ ಬಳಿಕ ಭಾರತ ತಂಡವು 18 ಪಂದ್ಯಗಳನ್ನಾಡಿದೆ. ಈ ಹದಿನೆಂಟು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿದಿರುವುದು ಕೇವಲ 4 ಮ್ಯಾಚ್ಗಳಲ್ಲಿ ಮಾತ್ರ ಎಂದರೆ ನಂಬಲೇಬೇಕು.

ಏಕದಿನ ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ನಡೆದ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಂಡಿರಲಿಲ್ಲ. ಆ ಬಳಿಕ ಸೌತ್ ಆಫ್ರಿಕಾ ವಿರುದ್ಧ ನಡೆದ 3 ಪಂದ್ಯಗಳ ಟಿ20 ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿಗಳಿಂದ ಕಿಂಗ್ ಕೊಹ್ಲಿ ವಿಶ್ರಾಂತಿ ಪಡೆದಿದ್ದರು.

ಇದಾದ ಬಳಿಕ ಸೌತ್ ಆಫ್ರಿಕಾ ವಿರುದ್ಧ ನಡೆದ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದರು. ಆದರೆ ಇದರ ಬೆನ್ನಲ್ಲೇ ನಡೆದ ಅಫ್ಘಾನಿಸ್ತಾನ್ ವಿರುದ್ಧ ಟಿ20 ಸರಣಿಯ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದರು.

ಇನ್ನು ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯ 2ನೇ ಮತ್ತು 3ನೇ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಕೊಹ್ಲಿ, ಇದೀಗ ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಅಂದರೆ ಏಕದಿನ ವಿಶ್ವಕಪ್ ಬಳಿಕ ಟೀಮ್ ಇಂಡಿಯಾ ಆಡಿದ ಒಟ್ಟು 18 ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ 14 ಪಂದ್ಯಗಳಿಂದ ಹೊರಗುಳಿದಿದ್ದಾರೆ.

ಇದೀಗ ಇಂಗ್ಲೆಂಡ್ ವಿರುದ್ಧದ ಮೂರನೇ ಮತ್ತು ನಾಲ್ಕನೇ ಟೆಸ್ಟ್ ಪಂದ್ಯಗಳಲ್ಲೂ ಕಿಂಗ್ ಕೊಹ್ಲಿ ಕಾಣಿಸಿಕೊಳ್ಳುವುದು ಅನುಮಾನ. ಇನ್ನು ಐದನೇ ಟೆಸ್ಟ್ ಪಂದ್ಯದ ಅವರು ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಒಂದು ವೇಳೆ 5ನೇ ಟೆಸ್ಟ್ಗೂ ಅಲಭ್ಯರಾದರೆ ಕಿಂಗ್ ಕೊಹ್ಲಿಯ ಆಟವನ್ನು ಕಣ್ತುಂಬಿಕೊಳ್ಳಲು ಐಪಿಎಲ್ವರೆಗೂ ಕಾಯಲೇಬೇಕು.
Published On - 12:54 pm, Thu, 8 February 24
