Virat Kohli: 2 ತಿಂಗಳಲ್ಲಿ 14 ಪಂದ್ಯಗಳನ್ನು ತಪ್ಪಿಸಿಕೊಂಡ ವಿರಾಟ್ ಕೊಹ್ಲಿ

| Updated By: ಝಾಹಿರ್ ಯೂಸುಫ್

Updated on: Feb 08, 2024 | 12:54 PM

Virat Kohli: ಭಾರತ ಮತ್ತು ಇಂಗ್ಲೆಂಡ್ ನಡುವಣ 3ನೇ ಟೆಸ್ಟ್ ಪಂದ್ಯ ಫೆಬ್ರವರಿ 5 ರಿಂದ ಶುರುವಾಗಲಿದೆ. ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಕಿಂಗ್ ಕೊಹ್ಲಿಯ ಕಂಬ್ಯಾಕ್​ಗಾಗಿ ಮತ್ತಷ್ಟು ಪಂದ್ಯಗಳವರೆಗೆ ಕಾಯಬೇಕಾಗಿ ಬರಬಹುದು.

1 / 6
ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದ ವಿರಾಟ್ ಕೊಹ್ಲಿ (Virat Kohli) ಮೂರನೇ ಪಂದ್ಯಕ್ಕೂ ಅಲಭ್ಯರಾಗಲಿರುವುದು ಬಹುತೇಕ ಖಚಿತವಾಗಿದೆ. ವಿಶೇಷ ಎಂದರೆ ಏಕದಿನ ವಿಶ್ವಕಪ್​ ಫೈನಲ್ ಬಳಿಕ ಕಿಂಗ್ ಕೊಹ್ಲಿ ಆಡಿದ್ದಕ್ಕಿಂತ ಹೊರಗುಳಿದಿರುವುದೇ ಹೆಚ್ಚು.

2 / 6
ಅಂದರೆ ಏಕದಿನ ವಿಶ್ವಕಪ್​ ಬಳಿಕ ಭಾರತ ತಂಡವು 18 ಪಂದ್ಯಗಳನ್ನಾಡಿದೆ. ಈ ಹದಿನೆಂಟು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿದಿರುವುದು ಕೇವಲ 4 ಮ್ಯಾಚ್​ಗಳಲ್ಲಿ ಮಾತ್ರ ಎಂದರೆ ನಂಬಲೇಬೇಕು.

3 / 6
ಏಕದಿನ ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ನಡೆದ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಂಡಿರಲಿಲ್ಲ. ಆ ಬಳಿಕ ಸೌತ್ ಆಫ್ರಿಕಾ ವಿರುದ್ಧ ನಡೆದ 3 ಪಂದ್ಯಗಳ ಟಿ20 ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿಗಳಿಂದ ಕಿಂಗ್ ಕೊಹ್ಲಿ ವಿಶ್ರಾಂತಿ ಪಡೆದಿದ್ದರು.

4 / 6
ಇದಾದ ಬಳಿಕ ಸೌತ್ ಆಫ್ರಿಕಾ ವಿರುದ್ಧ ನಡೆದ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದರು. ಆದರೆ ಇದರ ಬೆನ್ನಲ್ಲೇ ನಡೆದ ಅಫ್ಘಾನಿಸ್ತಾನ್ ವಿರುದ್ಧ ಟಿ20 ಸರಣಿಯ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದರು.

5 / 6
ಇನ್ನು ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯ 2ನೇ ಮತ್ತು 3ನೇ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಕೊಹ್ಲಿ, ಇದೀಗ ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್​ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಅಂದರೆ ಏಕದಿನ ವಿಶ್ವಕಪ್​ ಬಳಿಕ ಟೀಮ್ ಇಂಡಿಯಾ ಆಡಿದ ಒಟ್ಟು 18 ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ 14 ಪಂದ್ಯಗಳಿಂದ ಹೊರಗುಳಿದಿದ್ದಾರೆ.

6 / 6
ಇದೀಗ ಇಂಗ್ಲೆಂಡ್ ವಿರುದ್ಧದ ಮೂರನೇ ಮತ್ತು ನಾಲ್ಕನೇ ಟೆಸ್ಟ್ ಪಂದ್ಯಗಳಲ್ಲೂ ಕಿಂಗ್ ಕೊಹ್ಲಿ ಕಾಣಿಸಿಕೊಳ್ಳುವುದು ಅನುಮಾನ. ಇನ್ನು ಐದನೇ ಟೆಸ್ಟ್ ಪಂದ್ಯದ ಅವರು ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಒಂದು ವೇಳೆ 5ನೇ ಟೆಸ್ಟ್​ಗೂ ಅಲಭ್ಯರಾದರೆ ಕಿಂಗ್ ಕೊಹ್ಲಿಯ ಆಟವನ್ನು ಕಣ್ತುಂಬಿಕೊಳ್ಳಲು ಐಪಿಎಲ್​ವರೆಗೂ ಕಾಯಲೇಬೇಕು.

Published On - 12:54 pm, Thu, 8 February 24