Rohit Sharma-Virat Kohli: ಅದೇನೇ ಆಗಲಿ ಕೊಹ್ಲಿ ಬೇಕು ಎಂದಿದ್ದ ರೋಹಿತ್ ಶರ್ಮಾ: ನಂಬಿಕೆ ಉಳಿಸಿದ ವಿರಾಟ್

Rohit Sharma-Virat Kohli: ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಟೀಮ್ ಇಂಡಿಯಾ ದಿಗ್ಗಜರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಹೀಗಾಗಿ ಮುಂಬರುವ ಟಿ20 ಸರಣಿಗಳಲ್ಲಿ ಭಾರತದ ಪರ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕಾಣಿಸಿಕೊಳ್ಳುವುದಿಲ್ಲ. ಸೌತ್ ಆಫ್ರಿಕಾ ವಿರುದ್ಧದ ಫೈನಲ್ ಪಂದ್ಯದೊಂದಿಗೆ ಇಬ್ಬರು ದಿಗ್ಗಜರ ಯುಗಾಂತ್ಯವಾಗಿದೆ.

|

Updated on: Jun 30, 2024 | 10:09 AM

 T20 World Cup 2024: ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಬಲಿಷ್ಠ ಸೌತ್ ಆಫ್ರಿಕಾ ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ ವಿಶ್ವಕಪ್ ಗೆದ್ದುಕೊಂಡಿದೆ. ಈ ಗೆಲುವಿನ ರೂವಾರಿಗಳಲ್ಲಿ ವಿರಾಟ್ ಕೊಹ್ಲಿ ಕೂಡ ಒಬ್ಬರು. ಆದರೆ ಇದೇ ವಿರಾಟ್ ಕೊಹ್ಲಿಗೆ ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನ ನೀಡಲು ಬಿಸಿಸಿಐ ಹಿಂದೇಟು ಹಾಕಿತ್ತು ಎಂಬುದೇ ಸತ್ಯ.

1 / 7
ಈ ಬಾರಿಯ ಟಿ20 ವಿಶ್ವಕಪ್ ತಂಡದ ಆಯ್ಕೆಗೂ ಮುನ್ನ ವಿರಾಟ್ ಕೊಹ್ಲಿಯನ್ನು ತಂಡದಿಂದ ಕೈ ಬಿಡುವಂತೆ ಆಯ್ಕೆ ಸಮಿತಿಗೆ ಬಿಸಿಸಿಐ ಸೂಚಿಸಿತ್ತು. ಆದರೆ ರೋಹಿತ್ ಶರ್ಮಾ ಪಟ್ಟು ಹಿಡಿದ ಕಾರಣ ಕಿಂಗ್ ಕೊಹ್ಲಿಯನ್ನು ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡಲಾಗಿತ್ತು. ಅದರಂತೆ ವಿಶ್ವಕಪ್​ನಲ್ಲಿ ಕಣಕ್ಕಿಳಿದ ಕೊಹ್ಲಿ 7 ಪಂದ್ಯಗಳಲ್ಲೂ ವಿಫಲರಾಗಿದ್ದರು.

2 / 7
ಅದರಲ್ಲೂ ಸೆಮಿಫೈನಲ್​ನಲ್ಲಿ ಕೇವಲ 9 ರನ್​ಗಳಿಸಿ ಔಟಾಗಿದ್ದ ವಿರಾಟ್ ವಿರುದ್ಧ ಭಾರೀ ಟೀಕೆಗಳು ವ್ಯಕ್ತವಾಗಿದ್ದವು. ಅಲ್ಲದೆ ಆರಂಭಿಕನ ಸ್ಥಾನದಿಂದ ಕೊಹ್ಲಿಯನ್ನು ಕೆಳಗಿಳಿಸುವಂತೆ ಕೂಗುಗಳು ಕೇಳಿಬಂದಿದ್ದವು. ಆದರೆ ರೋಹಿತ್ ಶರ್ಮಾ ತಮ್ಮ ನಿರ್ಧಾರಕ್ಕೆ ಅಚಲವಾಗಿದ್ದರು. ಯಾವುದೇ ಒತ್ತಡಕ್ಕೂ ಮಣಿಯಲು ಹಿಟ್​ಮ್ಯಾನ್ ಸಿದ್ಧರಿರಲಿಲ್ಲ.

3 / 7
ಸೆಮಿಫೈನಲ್​ನಲ್ಲಿ ಕಳಪೆ ಪ್ರದರ್ಶನ ನೀಡಿದ ಬಳಿಕ ಕೂಡ ರೋಹಿತ್ ಶರ್ಮಾ ವಿರಾಟ್ ಕೊಹ್ಲಿಯ ಬೆಂಬಲಕ್ಕೆ ನಿಂತಿದ್ದರು. ಅಲ್ಲದೆ ಅವರು ಫೈನಲ್​ನಲ್ಲಿ ಆಡುತ್ತಾರೆ. ಅದಕ್ಕಾಗಿ ರನ್​ಗಳಿಕೆಯನ್ನು ಉಳಿಸಿಕೊಂಡಿದ್ದಾರೆ ಎಂಬ ಹೇಳಿಕೆ ನೀಡಿದ್ದರು. ರೋಹಿತ್ ಶರ್ಮಾ ಅವರ ಈ ಹೇಳಿಕೆ ವಿರುದ್ಧ ಕೂಡ ಕೆಲವರು ಕೊಂಕು ನುಡಿದಿದ್ದರು.

4 / 7
ಆದರೆ ರೋಹಿತ್ ಶರ್ಮಾ ಅವರ ನಂಬಿಕೆ ಹುಸಿಯಾಗಲಿಲ್ಲ. ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು. ಒಂದೆಡೆ ಕ್ರೀಸ್ ಕಚ್ಚಿ ನಿಂತು ಇನಿಂಗ್ಸ್ ಕಟ್ಟಿದರು. ಪರಿಣಾಮ ಅರ್ಧಶತಕ ಪೂರೈಸಲು 48 ಎಸೆತಗಳನ್ನು ತೆಗೆದುಕೊಂಡರು. ಇದರ ಬೆನ್ನಲ್ಲೇ ಮತ್ತೆ ಕೊಹ್ಲಿ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಆದರು.

5 / 7
ಅರ್ಧಶತಕದ ಬಳಿಕ ಬ್ಯಾಟಿಂಗ್ ಗೇರ್ ಬದಲಿಸಿದ ವಿರಾಟ್ ಕೊಹ್ಲಿ ಅಬ್ಬರಿಸಿದರು. ಪರಿಣಾಮ ಕಿಂಗ್ ಕೊಹ್ಲಿ ಬ್ಯಾಟ್​ನಿಂದ 59 ಎಸೆತಗಳಲ್ಲಿ 76 ರನ್​ಗಳು ಮೂಡಿಬಂತು. ಈ ಅರ್ಧಶತಕದ ನೆರವಿನಿಂದ ಟೀಮ್ ಇಂಡಿಯಾ 176 ರನ್​ಗಳಿಸಲು ಸಾಧ್ಯವಾಯಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 169 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 7 ರನ್​ಗಳ ರೋಚಕ ಜಯ ಸಾಧಿಸಿತು.

6 / 7
ಅಂದರೆ ಇಲ್ಲಿ ಟಿ20 ವಿಶ್ವಕಪ್ ಆಯ್ಕೆಯಿಂದ ಹಿಡಿದು, ಅಂತ್ಯದವರೆಗೂ ಬೆಂಬಲ ಸೂಚಿಸಿದ ನಾಯಕ ರೋಹಿತ್ ಶರ್ಮಾ ಅವರ ನಂಬಿಕೆಯನ್ನು ಉಳಿಸಿಕೊಳ್ಳುವಲ್ಲಿ ವಿರಾಟ್ ಕೊಹ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ. ಅಲ್ಲದೆ ದಿಗ್ಗಜರಿಬ್ಬರು ಸೇರಿ 17 ವರ್ಷಗಳ ಬಳಿಕ ಭಾರತ ತಂಡಕ್ಕೆ ಟಿ20 ವಿಶ್ವಕಪ್ ತಂದುಕೊಡುವಲ್ಲಿ ಸಫಲರಾಗಿರುವುದು ವಿಶೇಷ.

7 / 7
Follow us
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!

ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ

ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್

ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್

ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ

ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!

ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ

ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ

ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್

ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ