Updated on: Apr 10, 2023 | 11:39 PM
IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಅಬ್ಬರಿಸುವ ಮೂಲಕ ವಿರಾಟ್ ಕೊಹ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ವಿಶೇಷ ದಾಖಲೆಯೊಂದಿಗೆ ಕಿಂಗ್ ಕೊಹ್ಲಿ ಟಾಪ್-5 ಸಿಕ್ಸರ್ ಸರದಾರರ ಪಟ್ಟಿಗೆ ಎಂಟ್ರಿ ಕೊಟ್ಟಿದ್ದಾರೆ.
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ಗೆ ಇಳಿದ ಆರ್ಸಿಬಿ ಪರ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಇನಿಂಗ್ಸ್ ಆರಂಭಿಸಿದ್ದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ ಕೊಹ್ಲಿ ಅವೇಶ್ ಖಾನ್ ಎಸೆದ 2ನೇ ಓವರ್ನ 3ನೇ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದರು.
ಈ ಸಿಕ್ಸ್ನೊಂದಿಗೆ ಐಪಿಎಲ್ನಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದ ಕೀರನ್ ಪೊಲಾರ್ಡ್ ಅವರನ್ನು ಹಿಂದಿಕ್ಕಿದರು.
ಮುಂಬೈ ಇಂಡಿಯನ್ಸ್ ಪರ ಆಡಿದ್ದ ಕೀರನ್ ಪೊಲಾರ್ಡ್ 171 ಇನಿಂಗ್ಸ್ಗಳಲ್ಲಿ ಒಟ್ಟು 223 ಸಿಕ್ಸ್ಗಳನ್ನು ಸಿಡಿಸಿದ್ದರು. ಇದೀಗ ಈ ದಾಖಲೆಯನ್ನು ವಿರಾಟ್ ಕೊಹ್ಲಿ ಮುರಿದು ಮುನ್ನುಗ್ಗಿದ್ದಾರೆ.
ಕಿಂಗ್ ಕೊಹ್ಲಿ 218 ಇನಿಂಗ್ಸ್ ಮೂಲಕ ಒಟ್ಟು 227 ಸಿಕ್ಸ್ಗಳನ್ನು ಸಿಡಿಸಿ ಐಪಿಎಲ್ನ ಸಿಕ್ಸರ್ ಸರದಾರರ ಪಟ್ಟಿಯಲ್ಲಿ ಟಾಪ್-5 ಗೆ ಎಂಟ್ರಿ ಕೊಟ್ಟಿದ್ದಾರೆ. ಇನ್ನು ಐಪಿಎಲ್ನಲ್ಲಿ ಅತೀ ಸಿಕ್ಸ್ ಬಾರಿಸಿದ ಬ್ಯಾಟರ್ಗಳ ಪಟ್ಟಿ ಈ ಕೆಳಗಿನಂತಿದೆ...
1- ಕ್ರಿಸ್ ಗೇಲ್: ಐಪಿಎಲ್ನಲ್ಲಿ 141 ಇನಿಂಗ್ಸ್ ಆಡಿರುವ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಒಟ್ಟು 357 ಸಿಕ್ಸ್ಗಳನ್ನು ಸಿಡಿಸಿ ಸಿಕ್ಸರ್ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.
2- ಎಬಿ ಡಿವಿಲಿಯರ್ಸ್: ಮಾಜಿ ಆರ್ಸಿಬಿ ತಂಡದ ಆಟಗಾರ ಎಬಿಡಿ 170 ಇನಿಂಗ್ಸ್ಗಳಲ್ಲಿ ಒಟ್ಟು 251 ಸಿಕ್ಸ್ಗಳನ್ನು ಸಿಡಿಸಿದ್ದರು.
3- ರೋಹಿತ್ ಶರ್ಮಾ: 224 ಇನಿಂಗ್ಸ್ ಆಡಿರುವ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಒಟ್ಟು 241 ಸಿಕ್ಸ್ಗಳನ್ನು ಬಾರಿಸಿದ್ದಾರೆ.
4- ಎಂಎಸ್ ಧೋನಿ: ಸಿಎಸ್ಕೆ ತಂಡದ ನಾಯಕ ಧೋನಿ 208 ಇನಿಂಗ್ಸ್ಗಳಲ್ಲಿ 232 ಸಿಕ್ಸ್ಗಳನ್ನು ಸಿಡಿಸಿದ್ದಾರೆ.
5- ವಿರಾಟ್ ಕೊಹ್ಲಿ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 44 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್ನೊಂದಿಗೆ ಕೊಹ್ಲಿ 61 ರನ್ ಬಾರಿಸಿದ್ದರು. ಈ ನಾಲ್ಕು ಸಿಕ್ಸ್ಗಳೊಂದಿಗೆ ಒಟ್ಟು 227 ಸಿಕ್ಸ್ಗಳನ್ನು ಪೂರೈಸಿ ಸಿಕ್ಸರ್ ಸರದಾರರ ಪಟ್ಟಿಯಲ್ಲಿ 5ನೇ ಸ್ಥಾನ ಅಲಂಕರಿಸಿದ್ದಾರೆ.