AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs GT: ಸತತ 4ನೇ ಆವೃತ್ತಿಯಲ್ಲಿ 600 ರನ್; ಇತಿಹಾಸ ನಿರ್ಮಿಸಿದ ಕಿಂಗ್ ಕೊಹ್ಲಿ

Virat Kohli Breaks IPL Record: ಗುಜರಾತ್ ಟೈಟಾನ್ಸ್ ವಿರುದ್ಧದ ಐಪಿಎಲ್ 2026 ಕ್ವಾಲಿಫೈಯರ್ 1 ಪಂದ್ಯದಲ್ಲಿ ಆರ್‌ಸಿಬಿ 255 ರನ್ ಗಳಿಸಿತು. ವಿರಾಟ್ ಕೊಹ್ಲಿ ತಮ್ಮ 43 ರನ್ ಇನ್ನಿಂಗ್ಸ್ ಮೂಲಕ ಈ ಸೀಸನ್‌ನಲ್ಲಿ 600 ರನ್ ಗಡಿ ದಾಟಿದರು. ಇದು ಕೊಹ್ಲಿ ಅವರ 6ನೇ 600+ ರನ್ ಸೀಸನ್ ಆಗಿದ್ದು, ಐಪಿಎಲ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಆಗಿದ್ದಾರೆ. ಸತತ ನಾಲ್ಕು ಆವೃತ್ತಿಗಳಲ್ಲಿ 600 ರನ್ ಗಳಿಸಿದ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ.

ಪೃಥ್ವಿಶಂಕರ
|

Updated on:May 26, 2026 | 10:56 PM

Share
ಗುಜರಾತ್ ಟೈಟಾನ್ಸ್ ವಿರುದ್ಧದ ಐಪಿಎಲ್ 2026 ಕ್ವಾಲಿಫೈಯರ್ 1 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಾಯಕ ರಜತ್ ಪಾಟಿದರ್ ಅವರ ಅಜೇಯ 93 ರನ್​ಗಳ ಇನ್ನಿಂಗ್ಸ್ ಹಾಗೂ ಅನುಭವಿ ವಿರಾಟ್ ಕೊಹ್ಲಿ ಮತ್ತು ಕೃನಾಲ್ ಪಾಂಡ್ಯ ಅವರ ತಲಾ 43 ರನ್​ಗಳ ಇನ್ನಿಂಗ್ಸ್​ನಿಂದ ದಾಖಲೆಯ 255 ರನ್ ಕಲೆಹಾಕಿತು (PC- RCB X).

1 / 5
ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿಗೆ ಅರ್ಧಶತಕ ಪೂರೈಸಲು ಸಾಧ್ಯವಾಗದೆ ಇರಬಹುದು. ಆದಾಗ್ಯೂ ಕೊಹ್ಲಿ ತಮ್ಮ ಇನ್ನಿಂಗ್ಸ್​ನಲ್ಲಿ 25 ಎಸೆತಗಳನ್ನು ಎದುರಿಸಿ ಐದು ಬೌಂಡರಿ ಮತ್ತು ಒಂದು ಸಿಕ್ಸರ್ ಸೇರಿದಂತೆ 43 ರನ್​ ಬಾರಿಸಿದರು. ಈ ಮೂಲಕ ತಂಡಕ್ಕೆ ಭದ್ರ ಬುನಾದಿಯನ್ನು ಹಾಕಿಕೊಟ್ಟರು. ಜೊತೆಗೆ ಈ ಇನ್ನಿಂಗ್ಸ್​ನೊಂದಿಗೆ ಕೊಹ್ಲಿ, ಈ ಐಪಿಎಲ್‌ನಲ್ಲಿ 600 ರನ್​ಗಳ ಗಡಿ ಕೂಡ ದಾಟಿದರು (PC- RCB X).

2 / 5
ಈ ಐಪಿಎಲ್‌ನಲ್ಲಿ 14 ಲೀಗ್ ಪಂದ್ಯಗಳು ಮತ್ತು ಕ್ವಾಲಿಫೈಯರ್ 1 ಪಂದ್ಯ ಸೇರಿದಂತೆ ಇದುವರೆಗೆ 15 ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ  600 ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಈ ಮೂಲಕ ಕೊಹ್ಲಿ ಅತಿ ಹೆಚ್ಚು ಐಪಿಎಲ್​ ಸೀಸನ್​ಗಳಲ್ಲಿ 600 ಕ್ಕೂ ಹೆಚ್ಚು ರನ್‌ಗಳನ್ನು ಅತಿ ಹೆಚ್ಚು ಬಾರಿ ಬಾರಿಸಿದ ಬ್ಯಾಟ್ಸ್‌ಮನ್ ಎಂಬ ದಾಖಲೆ ಬರೆದಿದ್ದಾರೆ (PC- RCB X).

3 / 5
 ಆರನೇ ಬಾರಿಗೆ ಅಂದರೆ 6ನೇ ಆವೃತ್ತಿಯಲ್ಲಿ 600 ಕ್ಕೂ ಹೆಚ್ಚು ರನ್​ಗಳನ್ನು ಬಾರಿಸಿರುವ ಕೊಹ್ಲಿ ಮತ್ತೊಂದು ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ. ವಿರಾಟ್ ಕೊಹ್ಲಿ ಈ ಹಿಂದೆ 2013, 2016, 2023, 2024 ಮತ್ತು 2025 ರಲ್ಲಿ 600+ ರನ್ ಕಲೆಹಾಕಿದ್ದಾರೆ. ಈ ಮೂಲಕ ಕೊಹ್ಲಿ ಸತತ ನಾಲ್ಕು ಆವೃತ್ತಿಗಳಲ್ಲಿ 600 ರನ್ ಬಾರಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ (PC- RCB X).

4 / 5
ಈ ಪಟ್ಟಿಯಲ್ಲಿ ಕೆಎಲ್ ರಾಹುಲ್ ಎರಡನೇ ಸ್ಥಾನದಲ್ಲಿದ್ದು, ಅವರು ನಾಲ್ಕು ಆವೃತ್ತಿಗಳಲ್ಲಿ 600 ರನ್‌ಗಳ ಗಡಿ ದಾಟಿದ್ದಾರೆ. ಉಳಿದಂತೆ ಶುಭಮನ್ ಗಿಲ್, ಡೇವಿಡ್ ವಾರ್ನರ್ ಮತ್ತು ಕ್ರಿಸ್ ಗೇಲ್ ಐಪಿಎಲ್‌ನಲ್ಲಿ ತಲಾ ಮೂರು ಬಾರಿ 600+ ರನ್ ಗಳಿಸಿದ್ದಾರೆ. ಸಾಯಿ ಸುದರ್ಶನ್, ಫಾಫ್ ಡು ಪ್ಲೆಸಿಸ್ ಮತ್ತು ಸೂರ್ಯಕುಮಾರ್ ಯಾದವ್ ತಲಾ ಎರಡು ಆವೃತ್ತಿಗಳಲ್ಲಿ ಈ ಸಾಧನೆ ಮಾಡಿದ್ದಾರೆ (PC- IPL X).

5 / 5

Published On - 10:55 pm, Tue, 26 May 26

Follow Us
ಬಿಜೆಪಿ ಸಭೆ: ಶಾಸಕರ ಮೇಲೆ ವಿಶ್ವಾಸ ಇಟ್ಟಿದ್ದೇ ತಪ್ಪಾಯ್ತು ಎಂದ ಅಶೋಕ್

ಸಿಪಿ ಯೋಗೇಶ್ವರ್ ಪುತ್ರನಿಗೆ ಶುಭ ಹಾರೈಸಿದ ಸಿಎಂ ಹೇಳಿದ್ದೇನು? ವಿಡಿಯೋ ನೋಡಿ

ರಾಮ ಮಂದಿರದ ದೇಣಿಗೆ ಲೂಟಿ: ಕದ್ದ ಹಣದಲ್ಲಿ ಪ್ರೇಮ ಪುರಾಣ, ಲವರ್​ಗೆ ಗಿಫ್ಟ್!

ಕೆ ಸುಧಾಕರ್‌ ಜೊತೆಗಿನ ವೈಮನಸಿನ ಬಗ್ಗೆ ಬಿಜೆಪಿ ಸಭೆಯಲ್ಲಿ ಚರ್ಚೆ ಆಯ್ತಾ?

ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕಳೆ
ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕಳೆ
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ

SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು

ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ

ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!

ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?