IPL 2026: ಕ್ರಿಸ್ ಗೇಲ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

Updated on: Apr 30, 2026 | 5:38 PM

Virat Kohli Record Alert: ಐಪಿಎಲ್ 2026 ರ GT vs RCB ಪಂದ್ಯದಲ್ಲಿ ವಿರಾಟ್ ಕೊಹ್ಲಿ ವಿಶ್ವದಾಖಲೆ ಬರೆಯುವ ಅಂಚಿನಲ್ಲಿದ್ದಾರೆ. ಅಮೋಘ ಫಾರ್ಮ್‌ನಲ್ಲಿರುವ ಕೊಹ್ಲಿ, ಈ ಪಂದ್ಯದಲ್ಲಿ ಶತಕ ಗಳಿಸಿದರೆ 14,000 ಟಿ20 ರನ್‌ಗಳನ್ನು ಪೂರೈಸಿ ಕ್ರಿಸ್ ಗೇಲ್ ದಾಖಲೆ ಮುರಿಯಲಿದ್ದಾರೆ. ಅಲ್ಲದೆ, ಟಿ20ಯಲ್ಲಿ 10 ಶತಕ ಗಳಿಸಿದ ಮೊದಲ ಭಾರತೀಯ ಮತ್ತು 450 ಸಿಕ್ಸರ್‌ಗಳನ್ನು ಪೂರೈಸುವ ಅವಕಾಶವಿದೆ.

1 / 6
ಐಪಿಎಲ್ 2026 ರ 42ನೇ ಪಂದ್ಯ ಗುಜರಾತ್ ಟೈಟಾನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ನಡೆಯಲಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿಗೆ ವಿಶ್ವ ದಾಖಲೆ ಸೃಷ್ಟಿಸುವ ಅವಕಾಶವಿದೆ. ಈ ಪಂದ್ಯದಲ್ಲಿ ಒಂದು ವೇಳೆ ಕೊಹ್ಲಿ ಶತಕದ ಇನ್ನಿಂಗ್ಸ್ ಆಡಿದರೆ, ಟಿ20 ಕ್ರಿಕೆಟ್​ನಲ್ಲಿ ಹೊಸ ಮೈಲಿಗಲ್ಲನ್ನು ದಾಟಲಿದ್ದಾರೆ.

2 / 6
ಇದಕ್ಕೆ ಪೂರಕವಾಗಿ ಈ ಆವೃತ್ತಿಯಲ್ಲಿ ವಿರಾಟ್ ಕೊಹ್ಲಿ ಅದ್ಭುತ ಫಾರ್ಮ್​ನಲ್ಲಿದ್ದಾರೆ. ಪ್ರತಿ ಪಂದ್ಯದಲ್ಲೂ ಕೊಹ್ಲಿ ಅವರ ಬ್ಯಾಟ್ ಅಬ್ಬರಿಸುತ್ತಿದೆ. ಹೀಗಾಗಿ ಈ ಆವೃತ್ತಿಯಲ್ಲಿ ಇದುವರೆಗೆ ಆರ್​ಸಿಬಿ ಪರ ಅತಿ ಹೆಚ್ಚು ರನ್ ಗಳಿಸಿರುವ ವಿರಾಟ್ ಕೊಹ್ಲಿ ಆರೆಂಜ್ ಕ್ಯಾಪ್​ ರೇಸ್​ನಲ್ಲಿಯೂ ಇದ್ದಾರೆ. ಇದೀಗ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಶತಕ ಗಳಿಸುವ ಮೂಲಕ ಕೊಹ್ಲಿ ಅಪರೂಪದ ದಾಖಲೆಯನ್ನು ಮುರಿಯುವ ಅಂಚಿನಲ್ಲಿದ್ದಾರೆ.

3 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. ಈ ಆವೃತ್ತಿಯಲ್ಲಿ ಎರಡೂ ತಂಡಗಳ ನಡುವಿನ ಎರಡನೇ ಮುಖಾಮುಖಿ ಇದಾಗಿದೆ. ವಿರಾಟ್ ಕೊಹ್ಲಿ 81 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡುವುದರೊಂದಿಗೆ ಬೆಂಗಳೂರು ಮೊದಲ ಪಂದ್ಯವನ್ನು ಸುಲಭವಾಗಿ ಗೆದ್ದುಕೊಂಡಿತು. ಹಿಂದಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ ಗುಜರಾತ್ ಈ ಪಂದ್ಯಕ್ಕಿಳಿಯದೆ.

4 / 6
ಬೆಂಗಳೂರಿನಲ್ಲಿ ನಡೆದ ಉಭಯ ತಂಡಗಳ ನಡುವಿನ ಪಂದ್ಯದಲ್ಲಿ ಆರ್‌ಸಿಬಿ ಸ್ಟಾರ್ ಕೊಹ್ಲಿ ಶತಕ ವಂಚಿತರಾದರೂ ಗುಜರಾತ್ ವಿರುದ್ಧ ಅತ್ಯುತ್ತಮ ದಾಖಲೆಯನ್ನು ಹೊಂದಿದ್ದಾರೆ. ಗುಜರಾತ್ ವಿರುದ್ಧದ ಏಳು ಇನ್ನಿಂಗ್ಸ್‌ಗಳಲ್ಲಿ ಕೊಹ್ಲಿ ಒಂದು ಶತಕ ಮತ್ತು ನಾಲ್ಕು ಅರ್ಧಶತಕಗಳು ಸೇರಿದಂತೆ 432 ರನ್ ಗಳಿಸಿದ್ದಾರೆ. ಈಗ, ಈ ಪಂದ್ಯದಲ್ಲಿ ಕೊಹ್ಲಿ 100 ರನ್ ದಾಟಿದರೆ ಅವರ ಹೆಸರಿನಲ್ಲಿ ದಾಖಲೆಯೊಂದು ಸೃಷ್ಟಿಯಾಗಲಿದೆ.

5 / 6
ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 106 ರನ್ ಗಳಿಸಿದರೆ, ಟಿ20 ಕ್ರಿಕೆಟ್‌ನಲ್ಲಿ 14,000 ರನ್ ಪೂರ್ಣಗೊಳಿಸಲಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ ಆರನೇ ಬ್ಯಾಟ್ಸ್‌ಮನ್ ಎನಿಸಿಕೊಳ್ಳಲಿದ್ದಾರೆ. ಕೊಹ್ಲಿ ಇದುವರೆಗೆ 422 ಟಿ20 ಪಂದ್ಯಗಳಲ್ಲಿ 405 ಇನ್ನಿಂಗ್ಸ್‌ಗಳಲ್ಲಿ 13,894 ರನ್ ಗಳಿಸಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ ಶತಕ ಬಾರಿಸುವಲ್ಲಿ ಯಶಸ್ವಿಯಾದರೆ, 423 ಇನ್ನಿಂಗ್ಸ್‌ಗಳಲ್ಲಿ ಈ ಮೈಲಿಗಲ್ಲು ತಲುಪಿದ ವೆಸ್ಟ್ ಇಂಡೀಸ್ ದಂತಕಥೆ ಕ್ರಿಸ್ ಗೇಲ್ ಅವರ ದಾಖಲೆಯನ್ನು ಮುರಿಯಲಿದ್ದಾರೆ.

6 / 6
ಅಷ್ಟೇ ಅಲ್ಲ, ಕೊಹ್ಲಿ ಶತಕ ಬಾರಿಸಿದರೆ, ಗುಜರಾತ್ ವಿರುದ್ಧ 500 ರನ್​ಗಳನ್ನು ಸಹ ಪೂರೈಸಲಿದ್ದಾರೆ. ಹಾಗೆಯೇ ಟಿ20 ಕ್ರಿಕೆಟ್‌ನಲ್ಲಿ 10 ಶತಕಗಳನ್ನು ಬಾರಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗುತ್ತಾರೆ. ಈ ಇನ್ನಿಂಗ್ಸ್‌ನಲ್ಲಿ ಅವರು ಒಂದೇ ಒಂದು ಸಿಕ್ಸ್ ಬಾರಿಸಿದರೆ, ಈ ಸ್ವರೂಪದಲ್ಲಿ ಒಟ್ಟು 450 ಸಿಕ್ಸರ್​ಗಳನ್ನು ಪೂರೈಸಲಿದ್ದಾರೆ.

Follow Us