Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Test rankings: 12 ವರ್ಷಗಳ ಬಳಿಕ ಅತ್ಯಂತ ಕೆಳಸ್ತರಕ್ಕೆ ಕುಸಿದ ವಿರಾಟ್ ಕೊಹ್ಲಿ

Virat Kohli: ವಿರಾಟ್ ಕೊಹ್ಲಿ ಈ ಬಾರಿಯ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದರು. 5 ಪಂದ್ಯಗಳಲ್ಲಿ 9 ಇನಿಂಗ್ಸ್ ಆಡಿದ ಕೊಹ್ಲಿ 190 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಅಂದರೆ 23.75 ರ ಸರಾಸರಿಯಲ್ಲಿ ರನ್​ ಕಲೆಹಾಕಿದ್ದರು. ಈ ಕಳಪೆ ಪ್ರದರ್ಶನದ ಫಲವಾಗಿ ಇದೀಗ ಐಸಿಸಿ ಟೆಸ್ಟ್ ಬ್ಯಾಟರ್​ಗಳ ಶ್ರೇಯಾಂಕದಲ್ಲೂ ಕುಸಿತ ಕಂಡಿದ್ದಾರೆ.

ಝಾಹಿರ್ ಯೂಸುಫ್
|

Updated on:Jan 09, 2025 | 11:08 AM

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದ ವಿರಾಟ್ ಕೊಹ್ಲಿ ಇದೀಗ ಐಸಿಸಿ ಟೆಸ್ಟ್​ ಬ್ಯಾಟರ್​ ರ‍್ಯಾಂಕಿಂಗ್​ನಲ್ಲೂ ಭಾರೀ ಕುಸಿತಕ್ಕೊಳಗಾಗಿದ್ದಾರೆ. ಅದು ಕೂಡ ಕಳೆದ 12 ವರ್ಷಗಳಲ್ಲೇ ಅತ್ಯಂತ ಕಡಿಮೆ ಶ್ರೇಯಾಂಕ ಪಡೆಯುವ ಮೂಲಕ ಎಂಬುದೇ ಅಚ್ಚರಿ.

1 / 5
ವಿರಾಟ್ ಕೊಹ್ಲಿ ಕಳೆದ 12 ವರ್ಷಗಳಲ್ಲಿ ಒಮ್ಮೆಯೂ ಟೆಸ್ಟ್ ಬ್ಯಾಟರ್​ಗಳ ಟಾಪ್-25 ಪಟ್ಟಿಯಿಂದ ಹೊರಬಿದ್ದಿರಲಿಲ್ಲ. ಆದರೆ ಈ ಬಾರಿ ಅವರು 27ನೇ ಸ್ಥಾನಕ್ಕೆ ಕುಸಿದಿದ್ದಾರೆ. ಈ ಮೂಲಕ ದಶಕದ ಬಳಿಕ ಅತ್ಯಂತ ಕಡಿಮೆ ಶ್ರೇಯಾಂಕದಲ್ಲಿ ಕಾಣಿಸಿಕೊಂಡಿದ್ದಾರೆ.

2 / 5
2011 ರಲ್ಲಿ ಟೆಸ್ಟ್ ಕೆರಿಯರ್ ಆರಂಭಿಸಿದ್ದ ವಿರಾಟ್ ಕೊಹ್ಲಿ 2012 ರಲ್ಲಿ ಐಸಿಸಿ ಟೆಸ್ಟ್ ಬ್ಯಾಟರ್​​ಗಳ ಪಟ್ಟಿಯಲ್ಲಿ 36ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದರು. ಇದಾದ ಬಳಿಕ ಅವರ ರ‍್ಯಾಂಕಿಂಗ್ ಏರುಮುಖದತ್ತ ಸಾಗಿತ್ತು. ಇದರ ನಡುವೆ ಆಗಸ್ಟ್ 2018 ರಲ್ಲಿ ತಮ್ಮ ವೃತ್ತಿಜೀವನದ ಅತ್ಯುತ್ತಮ ಟೆಸ್ಟ್ ರೇಟಿಂಗ್ (937) ಪಡೆದುಕೊಂಡಿದ್ದರು.

3 / 5
ಆ ಬಳಿಕ ಟಾಪ್-10 ನಲ್ಲೇ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದ ವಿರಾಟ್ ಕೊಹ್ಲಿ ಈ ವರ್ಷ ಅಗ್ರ ಹತ್ತರಿಂದ ಹೊರಬಿದ್ದಿದ್ದರು. ಇದೀಗ ಟಾಪ್-25 ಯಿಂದಲೂ ಔಟ್ ಆಗಿದ್ದಾರೆ. ಈ ಮೂಲಕ ಕಳೆದ 12 ವರ್ಷಗಳಲ್ಲೇ ಅತ್ಯಂತ ಕೆಳಸ್ತರದ ರ‍್ಯಾಂಕಿಂಗ್ ಪಡೆದುಕೊಂಡಿದ್ದಾರೆ. ಈ ಶ್ರೇಯಾಂಕದಲ್ಲಿ ಮೇಲೇರಲು ವಿರಾಟ್ ಕೊಹ್ಲಿ ಮುಂಬರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭರ್ಜರಿ ಪ್ರದರ್ಶನ ನೀಡಲೇಬೇಕು.

4 / 5
ಇನ್ನು ಈ ಬಾರಿಯ ಟೆಸ್ಟ್ ಬ್ಯಾಟರ್​ಗಳ ರ‍್ಯಾಂಕಿಂಗ್​ನಲ್ಲಿ ಇಂಗ್ಲೆಂಡ್​ನ ಜೋ ರೂಟ್ ಅಗ್ರಸ್ಥಾನದಲ್ಲಿದ್ದರೆ, ಹ್ಯಾರಿ ಬ್ರೂಕ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಇನ್ನು ಮೂರನೇ ಸ್ಥಾನದಲ್ಲಿ ನ್ಯೂಝಿಲೆಂಡ್​ನ ಕೇನ್ ವಿಲಿಯಮ್ಸನ್ ಇದ್ದರೆ, ನಾಲ್ಕನೇ ಸ್ಥಾನದಲ್ಲಿ ಟೀಮ್ ಇಂಡಿಯಾದ ಯುವ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಐದನೇ ಸ್ಥಾನವನ್ನು ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್ ಅಲಂಕರಿಸಿದ್ದಾರೆ.

5 / 5

Published On - 11:08 am, Thu, 9 January 25

Follow us
ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ

ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್

ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ

ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ

ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್

ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ

ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ

ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ

ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು