ICC Test rankings: 12 ವರ್ಷಗಳ ಬಳಿಕ ಅತ್ಯಂತ ಕೆಳಸ್ತರಕ್ಕೆ ಕುಸಿದ ವಿರಾಟ್ ಕೊಹ್ಲಿ
Virat Kohli: ವಿರಾಟ್ ಕೊಹ್ಲಿ ಈ ಬಾರಿಯ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದರು. 5 ಪಂದ್ಯಗಳಲ್ಲಿ 9 ಇನಿಂಗ್ಸ್ ಆಡಿದ ಕೊಹ್ಲಿ 190 ರನ್ಗಳಿಸಲಷ್ಟೇ ಶಕ್ತರಾಗಿದ್ದರು. ಅಂದರೆ 23.75 ರ ಸರಾಸರಿಯಲ್ಲಿ ರನ್ ಕಲೆಹಾಕಿದ್ದರು. ಈ ಕಳಪೆ ಪ್ರದರ್ಶನದ ಫಲವಾಗಿ ಇದೀಗ ಐಸಿಸಿ ಟೆಸ್ಟ್ ಬ್ಯಾಟರ್ಗಳ ಶ್ರೇಯಾಂಕದಲ್ಲೂ ಕುಸಿತ ಕಂಡಿದ್ದಾರೆ.