AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಟಿಂಗ್​ನಲ್ಲಿ ಮಾತ್ರವಲ್ಲ, ಕ್ಯಾಚ್​ನಲ್ಲೂ ಕಿಂಗ್ ಕೊಹ್ಲಿಗೆ ಸರಿಸಾಟಿಯಿಲ್ಲ..!

Virat Kohli Records: ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 300 ಕ್ಕಿಂತ ಅಧಿಕ ಕ್ಯಾಚ್ ಹಿಡಿದಿರುವುದು ಕೇವಲ 9 ಆಟಗಾರರು ಮಾತ್ರ. ಈ ಆಟಗಾರರ ಪಟ್ಟಿಯಲ್ಲಿ ಇದೀಗ ವಿರಾಟ್ ಕೊಹ್ಲಿ ಆರನೇ ಸ್ಥಾನಕ್ಕೇರಿದ್ದಾರೆ. ಅಲ್ಲದೆ ಟೀಮ್ ಇಂಡಿಯಾ ಪರ ಅತ್ಯಧಿಕ ಕ್ಯಾಚ್ ಹಿಡಿದ ದಾಖಲೆ ಬರೆಯುವ ಹೊಸ್ತಿಲಲ್ಲಿದ್ದಾರೆ. ಹೀಗಾಗಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಿಂಗ್ ಕೊಹ್ಲಿ ಕಡೆಯಿಂದ ಭರ್ಜರಿ ದಾಖಲೆ ನಿರೀಕ್ಷಿಸಬಹುದು.

ಝಾಹಿರ್ ಯೂಸುಫ್
|

Updated on: Feb 10, 2025 | 1:53 PM

Share
ವಿರಾಟ್ ಕೊಹ್ಲಿ ಅತ್ಯದ್ಭುತ ಬ್ಯಾಟರ್ ಎಂಬುದು ಗೊತ್ತೇ ಇದೆ. ಅದಕ್ಕೆ ಸಾಕ್ಷಿ ಅವರು ಪೇರಿಸಿರುವ ರನ್ ರಾಶಿ. ಇದರ ಹೊರತಾಗಿ ಕಿಂಗ್ ಕೊಹ್ಲಿ ಅತ್ಯುತ್ತಮ ಫೀಲ್ಡರ್​ ಕೂಡ ಹೌದು. ಇದೀಗ ಫೀಲ್ಡಿಂಗ್ ಮೂಲಕವೇ ವಿರಾಟ್ ಕೊಹ್ಲಿ ಹೊಸ ದಾಖಲೆಯತ್ತ ಹೆಜ್ಜೆಯನ್ನಿಟ್ಟಿದ್ದಾರೆ.

1 / 7
ಇಂಗ್ಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 2 ಕ್ಯಾಚ್​ಗಳನ್ನು ಹಿಡಿದಿದ್ದಾರೆ. ಈ ಕ್ಯಾಚ್​ಗಳೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಕ್ಯಾಚ್ ಹಿಡಿದ ಫೀಲ್ಡರ್​ಗಳ ಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದ್ದಾರೆ. ಅದು ಕೂಡ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಅವರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

2 / 7
ಆಸ್ಟ್ರೇಲಿಯಾ ಪರ 348 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ಸ್ಟೀವ್ ಸ್ಮಿತ್ 453 ಇನಿಂಗ್ಸ್​ಗಳಲ್ಲಿ ಫೀಲ್ಡಿಂಗ್ ಮಾಡಿದ್ದಾರೆ. ಈ ವೇಳೆ ಒಟ್ಟು 327 ಕ್ಯಾಚ್​ಗಳನ್ನು ಹಿಡಿದಿದ್ದಾರೆ. ಇದೀಗ ಸ್ಮಿತ್ ಅವರನ್ನು ಹಿಂದಿಕ್ಕಿ ಆರನೇ ಸ್ಥಾನಕ್ಕೇರುವಲ್ಲಿ ವಿರಾಟ್ ಕೊಹ್ಲಿ ಯಶಸ್ವಿಯಾಗಿದ್ದಾರೆ.

3 / 7
ವಿರಾಟ್ ಕೊಹ್ಲಿ ಭಾರತದ ಪರ ಈವರೆಗೆ 544 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 653 ಇನಿಂಗ್ಸ್​ಗಳಲ್ಲಿ ಫೀಲ್ಡಿಂಗ್ ಮಾಡಿರುವ ಅವರು ಒಟ್ಟು 329 ಕ್ಯಾಚ್​ಗಳನ್ನು ಹಿಡಿದಿದ್ದಾರೆ. ಈ ಮೂಲಕ ಭಾರತದ ಪರ ಅತ್ಯಧಿಕ ಕ್ಯಾಚ್ ಹಿಡಿದ 2ನೇ ಆಟಗಾರ ಎನಿಸಿಕೊಂಡಿದ್ದಾರೆ.

4 / 7
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ರಾಹುಲ್ ದ್ರಾವಿಡ್. ಟೀಮ್ ಇಂಡಿಯಾ ಪರ 509 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ದ್ರಾವಿಡ್, 571	ಇನಿಂಗ್ಸ್​ಗಳಲ್ಲಿ ಫೀಲ್ಡಿಂಗ್ ಮಾಡಿದ್ದಾರೆ. ಈ ವೇಳೆ 334 ಕ್ಯಾಚ್​ಗಳನ್ನು ಹಿಡಿದು ಭಾರತದ ಅತ್ಯಂತ ಯಶಸ್ವಿ ಫೀಲ್ಡರ್ ಎನಿಸಿಕೊಂಡಿದ್ದಾರೆ.

5 / 7
ರಾಹುಲ್ ದ್ರಾವಿಡ್ ಹೆಸರಿನಲ್ಲಿರುವ ಈ ಶ್ರೇಷ್ಠ ದಾಖಲೆ ಮುರಿಯಲು ವಿರಾಟ್ ಕೊಹ್ಲಿಗೆ ಬೇಕಿರುವುದು ಕೇವಲ 6 ಕ್ಯಾಚ್​ಗಳು ಮಾತ್ರ. ಹೀಗಾಗಿ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಈ ದಾಖಲೆಯನ್ನು ಕಿಂಗ್ ಕೊಹ್ಲಿ ತನ್ನದಾಗಿಸಿಕೊಳ್ಳುವುದನ್ನು ಎದುರು ನೋಡಬಹುದು.

6 / 7
ಇನ್ನು ಕ್ರಿಕೆಟ್ ಇತಿಹಾಸದಲ್ಲಿ ಅತೀ ಹೆಚ್ಚು ಕ್ಯಾಚ್​ಗಳನ್ನು ಹಿಡಿದ ವಿಶ್ವ ದಾಖಲೆ ಶ್ರೀಲಂಕಾದ ಮಹೇಲ ಜಯವರ್ಧನೆ ಹೆಸರಿನಲ್ಲಿದೆ. ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 652	 ಪಂದ್ಯಗಳನ್ನಾಡಿರುವ ಜಯವರ್ಧನೆ 768 ಇನಿಂಗ್ಸ್​ಗಳಲ್ಲಿ ಫೀಲ್ಡಿಂಗ್ ಮಾಡಿದ್ದಾರೆ. ಈ ವೇಳೆ ಒಟ್ಟು 440	 ಕ್ಯಾಚ್​ಗಳನ್ನು ಹಿಡಿದು ವಿಶ್ವ ದಾಖಲೆ ನಿರ್ಮಿಸಿದ್ದಾರೆ.

7 / 7
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ

ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು

ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ

ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ

ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ

ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ

49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್

ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ

ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ

ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ