IND vs PAK: ಟೀಮ್ ಇಂಡಿಯಾಗೆ ಬಿಗ್ ಶಾಕ್: ವಿರಾಟ್ ಕೊಹ್ಲಿಗೆ ಗಾಯ

|

Updated on: Feb 23, 2025 | 10:44 AM

India vs Pakistan: ಪಾಕಿಸ್ತಾನ್ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಆಘಾತ ಎದುರಾಗಿದೆ. ಭಾರತ ತಂಡದ ಪ್ರಮುಖ ಬ್ಯಾಟರ್ ವಿರಾಟ್ ಕೊಹ್ಲಿ ಗಾಯಗೊಂಡಿದ್ದು, ಹೀಗಾಗಿ ಪಾಕ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

1 / 5
ಪಾಕಿಸ್ತಾನ್ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಗಾಯಗೊಂಡಿದ್ದಾರೆ. ಶನಿವಾರ ನಡೆದ ಅಭ್ಯಾಸದ ವೇಳೆ ಕೊಹ್ಲಿಗೆ ಗಾಯವಾಗಿದ್ದು, ಹೀಗಾಗಿ ಅವರು ಅರ್ಧದಲ್ಲೇ ಅಭ್ಯಾಸವನ್ನು ನಿಲ್ಲಿಸಿದ್ದರು. ಇದಾಗ್ಯೂ ಅವರ ಗಾಯದ ಗಂಭೀರತೆ ಬಗ್ಗೆ ಸ್ಪಷ್ಟ ಮಾಹಿತಿ ಹೊರಬಿದ್ದಿಲ್ಲ.

2 / 5
ದುಬೈ ಇಂಟರ್​ನ್ಯಾಷನಲ್ ಮೈದಾನದಲ್ಲಿ ಶನಿವಾರ ನಡೆದ ಅಭ್ಯಾಸದ ವೇಳೆ ವಿರಾಟ್ ಕೊಹ್ಲಿ ಮೈದಾನದಿಂದ ಹೊರಗುಳಿದಿದ್ದರು. ಅಲ್ಲದೆ ಎಡಗೈ ಕಾಲಿಗೆ ಐಸ್ ಪ್ಯಾಕ್ ಇಟ್ಟು ವಿಶ್ರಾಂತಿ ಪಡೆಯುತ್ತಿರುವ ಫೋಟೋಗಳು ಇದೀಗ ವೈರಲ್ ಆಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಕಣಕ್ಕಿಳಿಯಲಿದ್ದಾರಾ ಎಂಬುದೇ ಈಗ ದೊಡ್ಡ ಪ್ರಶ್ನೆಯಾಗಿದೆ.

3 / 5
ಏಕೆಂದರೆ ಇದಕ್ಕೂ ಮುನ್ನ ಇಂಗ್ಲೆಂಡ್ ವಿರುದ್ಧದ ಸರಣಿಯ ಮೊದಲ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಅವರ ಮೊಣಕಾಲಿಗೆ ಗಾಯವಾಗಿತ್ತು. ಹೀಗಾಗಿ ಅವರು ಆ ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಫೋಟೋದಲ್ಲೂ ಕೊಹ್ಲಿ ಮೊಣಕಾಲಿಗೆ ಐಸ್ ಪ್ಯಾಕ್ ಇಟ್ಟಿರುವುದು ಕಾಣಬಹುದು.

4 / 5
ಹೀಗಾಗಿಯೇ ಪಾಕಿಸ್ತಾನ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯುವುದಿಲ್ಲವಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಇತ್ತ ಕೊಹ್ಲಿಯ ಲಭ್ಯತೆ ಅಥವಾ ಅಲಭ್ಯತೆ ಬಗ್ಗೆ ಬಿಸಿಸಿಐ ಕಡೆಯಿಂದಲೂ ಯಾವುದೇ ಸ್ಪಷ್ಟನೆ ಹೊರಬಿದ್ದಿಲ್ಲ. ಹೀಗಾಗಿ ಕಿಂಗ್ ಕೊಹ್ಲಿ ಇವತ್ತು ಆಡುತ್ತಾರಾ ಅಥವಾ ಇಲ್ಲವಾ ಎಂಬುದನ್ನು ತಿಳಿಯಲು ಟಾಸ್ ಪ್ರಕ್ರಿಯೆಯವರೆಗೂ ಕಾಯಲೇಬೇಕು.

5 / 5
ಇನ್ನು ಭಾರತ ಮತ್ತು ಪಾಕಿಸ್ತಾನ್ ನಡುವಣ ಈ ಹೈವೋಲ್ಟೇಜ್ ಪಂದ್ಯವು ಇಂದು (ಫೆ.23) ಮಧ್ಯಾಹ್ನ 2.30 ರಿಂದ ಶುರುವಾಗಲಿದೆ. ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಗೆದ್ದರೆ ಸೆಮಿಫೈನಲ್​ಗೇರುವುದು ಬಹುತೇಕ ಖಚಿತವಾಗಲಿದೆ. ಅತ್ತ ಈ ಪಂದ್ಯದಲ್ಲಿ ಪಾಕ್ ಪಡೆ ಸೋತರೆ ಸೆಮಿಫೈನಲ್ ಆಸೆ ಕ್ಷೀಣಿಸಲಿದೆ.