Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಗಾಯದಿಂದಾಗಿ ಕೊಹ್ಲಿ ತಮ್ಮ ವೃತ್ತಿಜೀವನದಲ್ಲಿ ಎಷ್ಟು ಪಂದ್ಯಗಳಿಂದ ಹೊರಗುಳಿದಿದ್ದಾರೆ ಗೊತ್ತಾ?

Virat Kohli's Injury: ನಾಗ್ಪುರದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಿಂದ ಮೊಣಕಾಲು ನೋವಿನಿಂದಾಗಿ ವಿರಾಟ್ ಕೊಹ್ಲಿ ಹೊರಗುಳಿದಿದ್ದಾರೆ. 1130 ದಿನಗಳ ನಂತರ ಮೊದಲ ಬಾರಿಗೆ ಕೊಹ್ಲಿ ಗಾಯದಿಂದಾಗಿ ತಂಡದಿಂದ ಹೊರಗುಳಿದಿದ್ದರು. ಕೊಹ್ಲಿ ತಮ್ಮ ವೃತ್ತಿಜೀವನದಲ್ಲಿ ಐದನೇ ಬಾರಿಗೆ ಗಾಯದಿಂದಾಗಿ ತಂಡದಿಂದ ಹೊರಗುಳಿದಿದ್ದು ಅದರ ವಿವರ ಇಲ್ಲಿದೆ.

ಪೃಥ್ವಿಶಂಕರ
|

Updated on: Feb 07, 2025 | 1:17 PM

ಕ್ರಿಕೆಟ್ ಲೋಕದಲ್ಲಿ ಅತ್ಯಂತ ಫಿಟ್ ಆಟಗಾರರು ಎಂಬ ವಿಚಾರ ಬಂದಾಗಲೆಲ್ಲ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿ ನಿಲ್ಲುತ್ತಾರೆ. ತಮ್ಮ ಫಿಟ್‌ನೆಸ್‌ನಿಂದಾಗಿಯೇ ಪ್ರಪಂಚದಾದ್ಯಂತ ಪ್ರಸಿದ್ಧರಾಗಿರುವ ಕೊಹ್ಲಿ ಗಾಯದಿಂದಾಗಿ ಟೀಂ ಇಂಡಿಯಾದಿಂದ ಹೊರಗುಳಿಯುವುದು ಬಹಳ ಅಪರೂಪ. ಆದರೆ ಇಂಗ್ಲೆಂಡ್‌ ವಿರುದ್ಧ ಗುರುವಾರ ನಡೆದ ನಾಗ್ಪುರ ಏಕದಿನ ಪಂದ್ಯದಲ್ಲಿ, ಮೊಣಕಾಲು ನೋವಿನಿಂದ ಬಳಲುತ್ತಿರುವ ಕೊಹ್ಲಿಯನ್ನು ಆಡುವ ಹನ್ನೊಂದರ ಬಳಗದಿಂದ ಹೊರಗಿಡಲಾಯಿತು.

1 / 6
ಈ ಮೂಲಕ ಕೊಹ್ಲಿ 1130 ದಿನಗಳ ನಂತರ ಗಾಯದ ಕಾರಣದಿಂದಾಗಿ ತಂಡದಿಂದ ಹೊರಗುಳಿಯಬೇಕಾಯಿತು. ವಾಸ್ತವವಾಗಿ ಕೊಹ್ಲಿ ಗಾಯದಿಂದಾಗಿ ತಂಡದಿಂದ ಹೊರಗುಳಿದಿರುವುದು ಇದೇ ಮೊದಲಲ್ಲ. ಇದಕ್ಕೂ ಮುನ್ನ ಕೊಹ್ಲಿಗೆ ಅವರ ವೃತ್ತಿಜೀವನದಲ್ಲಿ 5 ಬಾರಿ ಗಾಯದ ಕಾರಣದಿಂದಾಗಿ ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಲು ಸಾಧ್ಯವಾಗಲಿಲ್ಲ.

2 / 6
ನಾಗ್ಪುರ ಏಕದಿನ ಪಂದ್ಯಕ್ಕೂ ಅಂದರೆ 1130 ದಿನಗಳ ಮೊದಲು ವಿರಾಟ್ ಕೊಹ್ಲಿ ಗಾಯದ ಕಾರಣದಿಂದಾಗಿ ಒಂದು ಪಂದ್ಯದಲ್ಲಿ ಹೊರಗುಳಿದಿದ್ದರು. 2022 ರ ದಕ್ಷಿಣ ಆಫ್ರಿಕಾ ಪ್ರವಾಸದ ಸಮಯದಲ್ಲಿ ಬೆನ್ನು ನೋವಿಗೆ ತುತ್ತಾಗಿದ್ದ ಕೊಹ್ಲಿ ಉಭಯ ತಂಡಗಳ ನಡುವಿನ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು. ಅವರ ಅನುಪಸ್ಥಿತಿಯಲ್ಲಿ ತಂಡದ ಉಪನಾಯಕ ಕೆ.ಎಲ್. ರಾಹುಲ್ ಈ ಪಂದ್ಯದಲ್ಲಿ ಮೊದಲ ಬಾರಿಗೆ ನಾಯಕತ್ವ ವಹಿಸಿಕೊಂಡಿದ್ದರು.

3 / 6
ಇನ್ನು ಅದೇ ವರ್ಷ ಅಂದರೆ 2022 ರ ಜುಲೈನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಏಕದಿನ ಸರಣಿಯನ್ನು ಆಡಲಾಯಿತು. ಆ ಸರಣಿಗೂ ಮುನ್ನ ಇಂಜುರಿಗೆ ತುತ್ತಾಗಿದ್ದ ವಿರಾಟ್ ಕೊಹ್ಲಿ ಮೊದಲ ಪಂದ್ಯದಿಂದ ಹೊರಗುಳಿದಿದ್ದರು. ಆದರೆ ಆ ಪಂದ್ಯವನ್ನು ಭಾರತ 10 ವಿಕೆಟ್‌ಗಳಿಂದ ಗೆದ್ದುಕೊಂಡಿತ್ತು.

4 / 6
2018 ರಲ್ಲಿ ನಡೆದಿದ್ದ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲೂ ವಿರಾಟ್ ಕೊಹ್ಲಿಗೆ ಗಾಯಕ್ಕೆ ತುತ್ತಾಗಿ ತಂಡದಿಂದ ಹೊರಗುಳಿಯಬೇಕಾಯಿತು. ವಾಸ್ತವವಾಗಿ, 3 ಪಂದ್ಯಗಳ ಟಿ20 ಸರಣಿಯು 1-1 ರಲ್ಲಿ ಸಮಬಲಗೊಂಡಿತ್ತು. ಆದರೆ ಮೂರನೇ ಪಂದ್ಯಕ್ಕೂ ಮುನ್ನ ಕೊಹ್ಲಿಗೆ ಬೆನ್ನು ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಕೊಹ್ಲಿ ತಂಡವನ್ನು ತೊರೆಯಬೇಕಾಯಿತು. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಿ ಪಂದ್ಯವನ್ನು 7 ರನ್‌ಗಳಿಂದ ಗೆದ್ದುಕೊಂಡಿದಲ್ಲದೆ ಸರಣಿಯನ್ನು ತಮ್ಮದಾಗಿಸಿಕೊಂಡಿದ್ದರು.

5 / 6
2017 ರಲ್ಲಿ ಆಸ್ಟ್ರೇಲಿಯಾ ತಂಡ ಭಾರತ ಪ್ರವಾಸ ಕೈಗೊಂಡಿತ್ತು. ಈ ಸರಣಿಯ ಮೂರನೇ ಟೆಸ್ಟ್ ಪಂದ್ಯ ರಾಂಚಿಯಲ್ಲಿ ನಡೆದಿತ್ತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬೌಂಡರಿ ತಡೆಯಲು ಪ್ರಯತ್ನಿಸುವಾಗ ಭುಜದ ಗಾಯಕ್ಕೆ ಒಳಗಾದರು. ಇದಾದ ನಂತರ, ಧರ್ಮಶಾಲಾದಲ್ಲಿ ನಡೆದ ಟೆಸ್ಟ್ ಪಂದ್ಯಕ್ಕೂ ಮುನ್ನ ಅವರು ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಹೀಗಾಗಿ ಅವರು ತಂಡದಿಂದ ಹೊರಗುಳಿಯಬೇಕಾಯಿತು.

6 / 6
Follow us
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ

ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ

ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್

Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್

ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ

ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್

ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!

ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​

ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್

ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ