
ಐಪಿಎಲ್ 2026 ರ 23 ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಎಲ್ಲರ ಕಣ್ಣು ವಿರಾಟ್ ಕೊಹ್ಲಿ ಮೇಲಿದೆ. ಈ ಪಂದ್ಯದಲ್ಲಿ ಅವರು ದೊಡ್ಡ ದಾಖಲೆ ನಿರ್ಮಿಸುವ ಅವಕಾಶ ಹೊಂದಿದ್ದಾರೆ. ಇಲ್ಲಿಯವರೆಗೆ, ಕ್ರಿಸ್ ಗೇಲ್ ಮತ್ತು ರೋಹಿತ್ ಶರ್ಮಾ ಮಾತ್ರ ಈ ದಾಖಲೆ ಮಾಡಿದ್ದಾರೆ.

ಲಕ್ನೋ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಸಿಕ್ಸರ್‌ಗಳ ತ್ರಿಶತಕ ಬಾರಿಸುವ ಹೊಸ್ತಿಲಿನಲ್ಲಿದ್ದಾರೆ. ಇದಕ್ಕೂ ಮೊದಲು ಕ್ರಿಸ್ ಗೇಲ್ ಮತ್ತು ರೋಹಿತ್ ಶರ್ಮಾ ಮಾತ್ರ ಐಪಿಎಲ್‌ನಲ್ಲಿ 300 ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆಯನ್ನು ಮುರಿದಿದ್ದಾರೆ. ಈಗ, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿಗೆ ಈ ಅವಕಾಶ ಸಿಕ್ಕಿದೆ.

ವಿರಾಟ್ ಕೊಹ್ಲಿ ಪ್ರಸ್ತುತ ಐಪಿಎಲ್‌ನಲ್ಲಿ 298 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಇದುವರೆಗೆ 271 ಪಂದ್ಯಗಳನ್ನಾಡಿರುವ ಕೊಹ್ಲಿ 263 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಇದೀಗ ಈ ಪಂದ್ಯದಲ್ಲಿ ಅವರು ತಮ್ಮ 300 ಸಿಕ್ಸರ್‌ಗಳನ್ನು ಪೂರ್ಣಗೊಳಿಸುವ ಅವಕಾಶವನ್ನು ಹೊಂದಿದ್ದಾರೆ.

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಎರಡು ಸಿಕ್ಸ್ ಬಾರಿಸಿದರೆ ಐಪಿಎಲ್‌ನಲ್ಲಿ 300 ಸಿಕ್ಸ್‌ಗಳನ್ನು ಬಾರಿಸಿದ ಮೂರನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಅಲ್ಲದೆ ರೋಹಿತ್ ನಂತರ ಈ ಸಾಧನೆ ಮಾಡಿದ ಎರಡನೇ ಭಾರತೀಯ ಬ್ಯಾಟ್ಸ್‌ಮನ್ ಕೂಡ ಆಗಲಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ವಿಂಡೀಸ್ ದಿಗ್ಗಜ ಕ್ರಿಸ್ ಗೇಲ್ 142 ಐಪಿಎಲ್ ಪಂದ್ಯಗಳಲ್ಲಿ 141 ಇನ್ನಿಂಗ್ಸ್‌ಗಳಲ್ಲಿ 357 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಹಾಗೆಯೇ ಎರಡನೇ ಸ್ಥಾನದಲ್ಲಿರುವ ರೋಹಿತ್ ಶರ್ಮಾ 276 ಪಂದ್ಯಗಳಲ್ಲಿ 271 ಇನ್ನಿಂಗ್ಸ್‌ಗಳಲ್ಲಿ 310 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.