AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಕೆಕೆಆರ್ ವಿರುದ್ಧ ಕಣಕ್ಕಿಳಿದು ಇತಿಹಾಸ ನಿರ್ಮಿಸಿದ ವಿರಾಟ್ ಕೊಹ್ಲಿ

Virat Kohli's Historic IPL Record: ಐಪಿಎಲ್ 2026 ರ RCB vs KKR ಪಂದ್ಯದಲ್ಲಿ ವಿರಾಟ್ ಕೊಹ್ಲಿ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ಆಟಗಾರ ಎನಿಸಿಕೊಂಡಿದ್ದಾರೆ. ಇದು ಅವರ 279ನೇ ಪಂದ್ಯವಾಗಿದ್ದು, ರೋಹಿತ್ ಶರ್ಮಾ ಮತ್ತು ಎಂಎಸ್ ಧೋನಿ ಅವರನ್ನು ಹಿಂದಿಕ್ಕಿದ್ದಾರೆ. ಕೊಹ್ಲಿ ಒಂದೇ ತಂಡಕ್ಕೆ ಹೆಚ್ಚು ಪಂದ್ಯ, 9000 ರನ್‌, ಅತಿ ಹೆಚ್ಚು ಶತಕಗಳು ಮತ್ತು ಅರ್ಧಶತಕಗಳ ದಾಖಲೆಗಳನ್ನೂ ಹೊಂದಿದ್ದಾರೆ, ಇದು ಅವರ ಅದ್ಭುತ ಐಪಿಎಲ್ ವೃತ್ತಿಜೀವನವನ್ನು ಎತ್ತಿ ತೋರಿಸುತ್ತದೆ.

ಪೃಥ್ವಿಶಂಕರ
|

Updated on: May 13, 2026 | 10:08 PM

Share
ಐಪಿಎಲ್ 2026 ರ 57ನೇ ಪಂದ್ಯ ಆರ್​ಸಿಬಿ ಹಾಗೂ ಕೆಕೆಆರ್ ನಡುವೆ ನಡೆಯಿತು. ಈ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ್ದರಿಂದ ಪಂದ್ಯ ತಡವಾಗಿ ಅಂದರೆ ರಾತ್ರಿ8:45 ಕ್ಕೆ ಆರಂಭವಾಯಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ನಾಯಕ ರಜತ್ ಪಾಟಿದರ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಇನ್ನು ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿರಾಟ್ ಕೊಹ್ಲಿ ಹೊಸ ಇತಿಹಾಸವನ್ನು ನಿರ್ಮಿಸಿದರು.

1 / 5
ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯ ವಿರಾಟ್ ಕೊಹ್ಲಿಯ ಐಪಿಎಲ್ ವೃತ್ತಿಜೀವನದ 279 ನೇ ಐಪಿಎಲ್ ಪಂದ್ಯವಾಗಿದೆ. ಈ ಮೂಲಕ ಕೊಹ್ಲಿ ಐಪಿಎಲ್‌ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನಾಡಿದ ಆಟಗಾರರ ಪಟ್ಟಿಯಲ್ಲಿ ರೋಹಿತ್ ಶರ್ಮಾ ಮತ್ತು ಎಂಎಸ್ ಧೋನಿ ಅವರನ್ನು ಹಿಂದಿಕ್ಕಿದ್ದಾರೆ.

2 / 5
ಇದೀಗ 279 ಪಂದ್ಯಗಳೊಂದೊಗೆ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ರೋಹಿತ್ ಶರ್ಮಾ ಮತ್ತು ಎಂಎಸ್ ಧೋನಿ ತಲಾ 278 ಪಂದ್ಯಗಳೊಂದಿಗೆ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಮುಂದಿನ ಪಂದ್ಯದಲ್ಲಿ ಆಡುವ ಮೂಲಕ ರೋಹಿತ್ ಹಾಗೂ ಧೋನಿ ಮತ್ತೆ ಈ ಪಟ್ಟಿಯಲ್ಲಿ ಕೊಹ್ಲಿಯನ್ನು ಸರಿಗಟ್ಟುವ ಅವಕಾಶ ಹೊಂದಿದ್ದಾರೆ.

3 / 5
ವಿರಾಟ್ ಕೊಹ್ಲಿ 2008 ರ ಉದ್ಘಾಟನಾ ಐಪಿಎಲ್ ಆವೃತ್ತಿಯಿಂದಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿದ್ದಾರೆ. ಈ ಮೂಲಕ ಈ ಲೀಗ್‌ನಲ್ಲಿ ಒಂದೇ ತಂಡಕ್ಕಾಗಿ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ದಾಖಲೆಯನ್ನು ಕೊಹ್ಲಿ ಹೊಂದಿದ್ದಾರೆ.

4 / 5
ವಿರಾಟ್ ಕೊಹ್ಲಿ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ 9,000 ರನ್ ಗಳಿಸಿದ್ದು, ಈ ಮೈಲಿಗಲ್ಲು ತಲುಪಿದ ಏಕೈಕ ಬ್ಯಾಟ್ಸ್‌ಮನ್ ಆಗಿದ್ದಾರೆ. ಬೇರೆ ಯಾವುದೇ ಆಟಗಾರ 8,000 ರನ್‌ಗಳನ್ನು ತಲುಪಿಲ್ಲ. ವಿರಾಟ್ ಕೊಹ್ಲಿ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಎಂಟು ಶತಕಗಳು ಮತ್ತು 66 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಇದರೊಂದಿಗೆ ಅತಿ ಹೆಚ್ಚು ಶತಕಗಳು ಮತ್ತು ಅರ್ಧಶತಕಗಳ ವಿಚಾರದಲ್ಲಿಯೂ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ.

5 / 5
Follow Us