RCB vs CSK Record Alert: ಸಿಎಸ್​ಕೆ ವಿರುದ್ಧ ಅಬ್ಬರಿಸಿ ರೋಹಿತ್ ದಾಖಲೆ ಮುರಿದು ಅಗ್ರಸ್ಥಾನಕ್ಕೇರಿದ ಕೊಹ್ಲಿ

Updated on: Apr 05, 2026 | 8:53 PM

Virat Kohli breaks Rohit Sharma record: ಬೆಂಗಳೂರಿನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ, ವಿರಾಟ್ ಕೊಹ್ಲಿ ಸಿಎಸ್‌ಕೆ ವಿರುದ್ಧ ರೋಹಿತ್ ಶರ್ಮಾ ಅವರ ದಾಖಲೆಯನ್ನು ಮುರಿದು ಇತಿಹಾಸ ಸೃಷ್ಟಿಸಿದ್ದಾರೆ. ಐಪಿಎಲ್‌ನಲ್ಲಿ ಒಂದೇ ತಂಡದ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. 36 ಪಂದ್ಯಗಳಲ್ಲಿ 1174 ರನ್ ಗಳಿಸುವ ಮೂಲಕ ಕೊಹ್ಲಿ ಈ ಮೈಲಿಗಲ್ಲನ್ನು ತಲುಪಿದ್ದಾರೆ. ಇದು ಅವರ ಬ್ಯಾಟಿಂಗ್ ಸಾಮರ್ಥ್ಯಕ್ಕೆ ಮತ್ತೊಂದು ಗರಿ.

1 / 5
ಬೆಂಗಳೂರಿನ  ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 11 ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ಪರ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಸಣ್ಣ ಆದರೆ ದಾಖಲೆ ಮುರಿಯುವ ಇನ್ನಿಂಗ್ಸ್ ಆಡಿದರು.

2 / 5
ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 18 ಎಸೆತಗಳನ್ನು ಎದುರಿಸಿ 28 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ ಎರಡು ಬೌಂಡರಿ ಮತ್ತು ಒಂದು ಸಿಕ್ಸರ್ ಸೇರಿದ್ದವು. ಈ ಮೂಲಕ ವಿರಾಟ್ ಕೊಹ್ಲಿ ಇಷ್ಟು ದಿನ ಮುಂಬೈ ಇಂಡಿಯನ್ಸ್ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಅವರ ಹೆಸರಿನಲ್ಲಿದ್ದ ದಾಖಲೆಯೊಂದನ್ನು ಇದೀಗ ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ.

3 / 5
ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಇದೀಗ ಅವರು ಐಪಿಎಲ್‌ನಲ್ಲಿ ಒಂದೇ ತಂಡದ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ದಾಖಲೆಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಮಾತ್ರವಲ್ಲದೆ ಈ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿದ್ದಾರೆ.

4 / 5
ವಿರಾಟ್ ಕೊಹ್ಲಿ ಇಲ್ಲಿಯವರೆಗೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 36 ಪಂದ್ಯಗಳನ್ನಾಡಿದ್ದು, 1174 ರನ್ ಗಳಿಸಿದ್ದಾರೆ. ಇದು ಒಂದೇ ತಂಡದ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯಾಗಿದೆ. ಈ ಅವಧಿಯಲ್ಲಿ ಕೊಹ್ಲಿ ಸಿಎಸ್​ಕೆ ವಿರುದ್ಧ 10 ಅರ್ಧಶತಕಗಳನ್ನು ಬಾರಿಸಿದ್ದಾರೆ.

5 / 5
ವಿರಾಟ್​ಗೂ ಮೊದಲು ಈ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿತ್ತು. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 36 ಪಂದ್ಯಗಳಲ್ಲಿ ರೋಹಿತ್ ಶರ್ಮಾ ಒಂದು ಶತಕ ಮತ್ತು ಏಳು ಅರ್ಧಶತಕ ಸೇರಿದಂತೆ 1,161 ರನ್ ಗಳಿಸಿದ್ದಾರೆ. ಆದರೆ, ವಿರಾಟ್ ಈಗ ಅವರನ್ನು ಹಿಂದಿಕ್ಕಿದ್ದಾರೆ.

Follow Us