- Kannada News Photo gallery Cricket photos Virat Kohli is also the first non-Australian to score more than 500 runs in T20I Kannada News
Virat Kohli: ಆಸ್ಟ್ರೇಲಿಯಾ ಪಿಚ್ನಲ್ಲಿ ಯಾರಿಗೂ ಸಾಧ್ಯವಾಗದ ದಾಖಲೆ ಬರೆದ ವಿರಾಟ್ ಕೊಹ್ಲಿ
Virat Kohli's Record: ಪಾಕಿಸ್ತಾನ ವಿರುದ್ಧದ ಅರ್ಧಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎಂಬ ದಾಖಲೆ ಬರೆದರು.
Updated on:Oct 24, 2022 | 7:56 PM

ಆಸ್ಟ್ರೇಲಿಯಾದ ಎಂಸಿಜಿ ಮೈದಾನದಲ್ಲಿ ನಡೆದ ಪಾಕಿಸ್ತಾನ್ ವಿರುದ್ಧ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಜೇಯ 82 ರನ್ ಬಾರಿಸಿದ್ದರು. ಈ ಭರ್ಜರಿ ಇನಿಂಗ್ಸ್ ಮೂಲಕ ಕಿಂಗ್ ಕೊಹ್ಲಿ ಟೀಮ್ ಇಂಡಿಯಾಗೆ 4 ವಿಕೆಟ್ಗಳ ರೋಚಕ ಜಯ ತಂದುಕೊಟ್ಟಿದ್ದರು.

ವಿಶೇಷ ಎಂದರೆ ಈ ಅಮೋಘ ಇನಿಂಗ್ಸ್ ಮೂಲಕ ಆಸ್ಟ್ರೇಲಿಯಾದಲ್ಲಿ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿದೇಶಿ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದ್ದಾರೆ. ಅಂದರೆ ಕಾಂಗರೂ ನಾಡಿನಲ್ಲಿ ಯಾವುದೇ ವಿದೇಶಿ ಬ್ಯಾಟ್ಸ್ಮನ್ ಟಿ20 ಕ್ರಿಕೆಟ್ನಲ್ಲಿ 500 ಕ್ಕೂ ಅಧಿಕ ಕಲೆಹಾಕಲು ಸಾಧ್ಯವಾಗಿರಲಿಲ್ಲ.

ಇದೀಗ ಆಸ್ಟ್ರೇಲಿಯಾ ಪಿಚ್ಗಳಲ್ಲಿ ಟಿ20 ಕ್ರಿಕೆಟ್ನಲ್ಲಿ 500+ ರನ್ ಬಾರಿಸುವ ಮೂಲಕ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ಈ ಮೂಲಕ ಆಸ್ಟ್ರೇಲಿಯನ್ನರು ಹೊರತುಪಡಿಸಿ ಕಾಂಗರೂ ನಾಡಿನಲ್ಲಿ ರನ್ ಸುರಿಮಳೆಗೈದ ವಿಶೇಷ ದಾಖಲೆಯನ್ನು ಕಿಂಗ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ.

ಪಾಕಿಸ್ತಾನ ವಿರುದ್ಧದ ಅರ್ಧಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎಂಬ ದಾಖಲೆ ಬರೆದರು. ಈ ಹಿಂದೆ ಈ ದಾಖಲೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (3741) ಅವರ ಹೆಸರಿನಲ್ಲಿತ್ತು. ಇದೀಗ ವಿರಾಟ್ ಕೊಹ್ಲಿ 3794 ರನ್ಗಳಿಸುವ ಮೂಲಕ ನಂಬರ್ 1 ಸ್ಥಾನಕ್ಕೇರಿದ್ದಾರೆ.

ಹಾಗೆಯೇ ಐಸಿಸಿ ಟೂರ್ನಿಗಳಲ್ಲಿ ಅತ್ಯಧಿಕ 50+ ರನ್ ಬಾರಿಸಿದ ವಿಶ್ವ ದಾಖಲೆಯನ್ನು ಕೂಡ ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿತ್ತು. ಸಚಿನ್ ತೆಂಡೂಲ್ಕರ್ ಐಸಿಸಿ ಟೂರ್ನಿಗಳಲ್ಲಿ ಒಟ್ಟು 23 ಬಾರಿ 50+ ಸ್ಕೋರ್ ಕಲೆಹಾಕಿದ್ದಾರೆ. ಇದೀಗ ಕಿಂಗ್ ಕೊಹ್ಲಿ ಐಸಿಸಿ ಟೂರ್ನಿಯಲ್ಲಿ ಒಟ್ಟು 24 ಬಾರಿ 50+ ಸ್ಕೋರ್ ಬಾರಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.
Published On - 7:53 pm, Mon, 24 October 22
