Virat Kohli: ಆಸ್ಟ್ರೇಲಿಯಾ ಪಿಚ್​ನಲ್ಲಿ ಯಾರಿಗೂ ಸಾಧ್ಯವಾಗದ ದಾಖಲೆ ಬರೆದ ವಿರಾಟ್ ಕೊಹ್ಲಿ

| Updated By: ಝಾಹಿರ್ ಯೂಸುಫ್

Updated on: Oct 24, 2022 | 7:56 PM

Virat Kohli's Record: ಪಾಕಿಸ್ತಾನ ವಿರುದ್ಧದ ಅರ್ಧಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎಂಬ ದಾಖಲೆ ಬರೆದರು.

1 / 5
ಆಸ್ಟ್ರೇಲಿಯಾದ ಎಂಸಿಜಿ ಮೈದಾನದಲ್ಲಿ ನಡೆದ ಪಾಕಿಸ್ತಾನ್ ವಿರುದ್ಧ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಜೇಯ 82 ರನ್ ಬಾರಿಸಿದ್ದರು. ಈ ಭರ್ಜರಿ ಇನಿಂಗ್ಸ್​ ಮೂಲಕ ಕಿಂಗ್ ಕೊಹ್ಲಿ ಟೀಮ್ ಇಂಡಿಯಾಗೆ 4 ವಿಕೆಟ್​ಗಳ ರೋಚಕ ಜಯ ತಂದುಕೊಟ್ಟಿದ್ದರು.

2 / 5
ವಿಶೇಷ ಎಂದರೆ ಈ ಅಮೋಘ ಇನಿಂಗ್ಸ್ ಮೂಲಕ ಆಸ್ಟ್ರೇಲಿಯಾದಲ್ಲಿ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿದೇಶಿ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದ್ದಾರೆ. ಅಂದರೆ ಕಾಂಗರೂ ನಾಡಿನಲ್ಲಿ ಯಾವುದೇ ವಿದೇಶಿ ಬ್ಯಾಟ್ಸ್​ಮನ್ ಟಿ20 ಕ್ರಿಕೆಟ್​ನಲ್ಲಿ 500 ಕ್ಕೂ ಅಧಿಕ ಕಲೆಹಾಕಲು ಸಾಧ್ಯವಾಗಿರಲಿಲ್ಲ.

3 / 5
ಇದೀಗ ಆಸ್ಟ್ರೇಲಿಯಾ ಪಿಚ್​ಗಳಲ್ಲಿ ಟಿ20 ಕ್ರಿಕೆಟ್​ನಲ್ಲಿ 500+ ರನ್​ ಬಾರಿಸುವ ಮೂಲಕ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ. ಈ ಮೂಲಕ ಆಸ್ಟ್ರೇಲಿಯನ್ನರು ಹೊರತುಪಡಿಸಿ ಕಾಂಗರೂ ನಾಡಿನಲ್ಲಿ ರನ್​ ಸುರಿಮಳೆಗೈದ ವಿಶೇಷ ದಾಖಲೆಯನ್ನು ಕಿಂಗ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ.

4 / 5
ಪಾಕಿಸ್ತಾನ ವಿರುದ್ಧದ ಅರ್ಧಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎಂಬ ದಾಖಲೆ ಬರೆದರು. ಈ ಹಿಂದೆ ಈ ದಾಖಲೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (3741) ಅವರ ಹೆಸರಿನಲ್ಲಿತ್ತು. ಇದೀಗ ವಿರಾಟ್ ಕೊಹ್ಲಿ 3794 ರನ್​ಗಳಿಸುವ ಮೂಲಕ ನಂಬರ್ 1 ಸ್ಥಾನಕ್ಕೇರಿದ್ದಾರೆ.

5 / 5
ಹಾಗೆಯೇ ಐಸಿಸಿ ಟೂರ್ನಿಗಳಲ್ಲಿ ಅತ್ಯಧಿಕ 50+ ರನ್​ ಬಾರಿಸಿದ ವಿಶ್ವ ದಾಖಲೆಯನ್ನು ಕೂಡ ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿತ್ತು. ಸಚಿನ್ ತೆಂಡೂಲ್ಕರ್ ಐಸಿಸಿ ಟೂರ್ನಿಗಳಲ್ಲಿ ಒಟ್ಟು 23 ಬಾರಿ 50+ ಸ್ಕೋರ್ ಕಲೆಹಾಕಿದ್ದಾರೆ. ಇದೀಗ ಕಿಂಗ್ ಕೊಹ್ಲಿ ಐಸಿಸಿ ಟೂರ್ನಿಯಲ್ಲಿ ಒಟ್ಟು 24 ಬಾರಿ 50+ ಸ್ಕೋರ್ ಬಾರಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.

Published On - 7:53 pm, Mon, 24 October 22