Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ತಂಡಕ್ಕೆ ವಿರಾಟ್ ಕೊಹ್ಲಿಯೇ ಕ್ಯಾಪ್ಟನ್: ಸುರೇಶ್ ರೈನಾ

IPL 2025 Virat Kohli: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ವಿರಾಟ್ ಕೊಹ್ಲಿ 143 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ 66 ಪಂದ್ಯಗಳಲ್ಲಿ ಆರ್​ಸಿಬಿ ಜಯ ಸಾಧಿಸಿದೆ. ಹಾಗೆಯೇ 2016 ರಲ್ಲಿ ಕಿಂಗ್ ಕೊಹ್ಲಿ ನಾಯಕತ್ವದಲ್ಲೇ ಆರ್​ಸಿಬಿ ಫೈನಲ್​ಗೆ ಪ್ರವೇಶಿಸಿತ್ತು. ಇನ್ನು 2021 ರಲ್ಲಿ ಆರ್​ಸಿಬಿ ನಾಯಕತ್ವ ತೊರೆದಿರುವ ವಿರಾಟ್ ಕೊಹ್ಲಿ ಇದೀಗ ಮತ್ತೆ ಚುಕ್ಕಾಣಿ ಹಿಡಿಯಲು ಸಜ್ಜಾಗಿದ್ದಾರೆ.

ಝಾಹಿರ್ ಯೂಸುಫ್
|

Updated on:Feb 13, 2025 | 2:53 PM

ಇಂಡಿಯನ್ ಪ್ರೀಮಿಯರ್ ಲೀಗ್​ (IPL 2025) ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಮುನ್ನಡೆಸುವವರು ಯಾರು? ಈ ಕುತೂಹಲಕಾರಿ ಪ್ರಶ್ನೆಗೆ ಇನ್ನೂ ಸಹ ಉತ್ತರ ಸಿಕ್ಕಿಲ್ಲ. ಆದರೆ ಈ ಬಾರಿ ಆರ್​ಸಿಬಿ ತಂಡವನ್ನು ವಿರಾಟ್ ಕೊಹ್ಲಿಯೇ ಮುನ್ನಡೆಸಲಿದ್ದಾರೆ ಎಂಬ ಮಹತ್ವದ ಸುಳಿವು ನೀಡಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ಸುರೇಶ್ ರೈನಾ.

1 / 5
ಇಂಗ್ಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದ ವೇಳೆ ಸುರೇಶ್ ರೈನಾ ಕಾಮೆಂಟರಿ ಬಾಕ್ಸ್​ನಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ ಮೈದಾನದಲ್ಲಿ ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್ ಮಾತುಕತೆ ನಡೆಸುತ್ತಿರುವುದನ್ನು ವರ್ಣಿಸುತ್ತಾ ರೈನಾ, ಇಂಗ್ಲೆಂಡ್ ಆಟಗಾರ ಆರ್​ಸಿಬಿ ತಂಡದ ನಾಯಕನೊಂದಿಗೆ ಕುಶಲೋಪರಿ ನಡೆಸುತ್ತಿದ್ದಾರೆ ಎಂದಿದ್ದಾರೆ.

2 / 5
ಇತ್ತ ಸುರೇಶ್ ರೈನಾ ಹಾಗೂ ವಿರಾಟ್ ಕೊಹ್ಲಿ ನಡುವೆ ಉತ್ತಮ ಬಾಂಧವ್ಯವಿದೆ. ಹೀಗಾಗಿ ಅವರಿಗೆ ಆರ್​ಸಿಬಿ ತಂಡದ ಮುಂದಿನ ನಾಯಕ ಯಾರೆಂಬುದು ಗೊತ್ತಿದೆ. ಇದೇ ಕಾರಣದಿಂದಾಗಿ ವಿರಾಟ್ ಕೊಹ್ಲಿಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮುಂದಿನ ನಾಯಕ ಎಂದು ಸುರೇಶ್ ರೈನಾ ಬಹಿರಂಗವಾಗಿ ಹೇಳಿದ್ದಾರೆ.

3 / 5
ರೈನಾ ನೀಡಿರುವ ಸುಳಿವಿನಂತೆ ಐಪಿಎಲ್ 2025 ರಲ್ಲಿ ಆರ್​ಸಿಬಿ ತಂಡವನ್ನು ವಿರಾಟ್ ಕೊಹ್ಲಿ ಮುನ್ನಡೆಸುವುದು ಬಹುತೇಕ ಖಚಿತ. ಈ ಮೂಲಕ ಕಿಂಗ್ ಕೊಹ್ಲಿ 2021ರ ಬಳಿಕ ಮತ್ತೊಮ್ಮೆ ರಾಯಲ್ ಪಡೆಯ ಚುಕ್ಕಾಣಿ ಹಿಡಿಯಲು ಸಜ್ಜಾಗಿದ್ದಾರೆ. ಇದಕ್ಕೂ ಮುನ್ನ ಅವರು ಆರ್​ಸಿಬಿ ತಂಡವನ್ನು 9 ವರ್ಷಗಳ ಕಾಲ ಮುನ್ನಡೆಸಿದ್ದರು.

4 / 5
RCB ತಂಡವನ್ನು 143 ಪಂದ್ಯಗಳಲ್ಲಿ ಮುನ್ನಡೆಸಿರುವ ವಿರಾಟ್ ಕೊಹ್ಲಿ 66 ಪಂದ್ಯಗಳಲ್ಲಿ ಜಯ ತಂದುಕೊಟ್ಟಿದ್ದಾರೆ. ಅಲ್ಲದೆ ಕಿಂಗ್ ಕೊಹ್ಲಿ ನಾಯಕತ್ವದಲ್ಲೇ ಆರ್​ಸಿಬಿ 2016 ರಲ್ಲಿ ಫೈನಲ್​ಗೆ ಪ್ರವೇಶಿಸಿದರೆ, 3 ಬಾರಿ ಪ್ಲೇಆಫ್ಸ್ ಆಡಿತ್ತು. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಕಿಂಗ್ ಕೊಹ್ಲಿಗೆ ಮತ್ತೆ ನಾಯಕನ ಪಟ್ಟ ನೀಡುವುದರಲ್ಲಿ ಡೌಟೇ ಇಲ್ಲ ಎನ್ನಬಹುದು.

5 / 5

Published On - 7:54 am, Tue, 11 February 25

Follow us
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ

ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?

ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ

ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ

ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ

ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್

ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ

ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ

ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ

ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು