- TV9 Kannada Photo gallery Cricket photos Virat Kohli is now Oldest Indian batter to be dismissed in 90s in ODI
ಶತಕ ತಪ್ಪಿಸಿ ಭರ್ಜರಿ ದಾಖಲೆ ಬರೆದ ವಿರಾಟ್ ಕೊಹ್ಲಿ
Virat Kohli Records: ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆಯಾಗಿದೆ. ಈ ಬಾರಿ ದಾಖಲೆ ನಿರ್ಮಾಣವಾಗಿರುವುದು ಶತಕ ವಂಚಿತರಾಗುವ ಮೂಲಕ ಎಂಬುದು ವಿಶೇಷ. ಅಂದರೆ ಏಕದಿನ ಕ್ರಿಕೆಟ್ನಲ್ಲಿ ಶತಕದಂಚಿನಲ್ಲಿ ಎಡವಿದ ಅತ್ಯಂತ ಹಿರಿಯ ಭಾರತೀಯ ಬ್ಯಾಟರ್ ಎಂಬ ದಾಖಲೆಯೊಂದನ್ನು ಕಿಂಗ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ.
Updated on: Jan 12, 2026 | 7:32 AM

ವಿರಾಟ್ ಕೊಹ್ಲಿಯ (Virat Kohli) ಬ್ಯಾಟ್ನಿಂದ 85ನೇ ಶತಕ ಜಸ್ಟ್ ಮಿಸ್ ಆಗಿದೆ. ಅದು ಕೂಡ 7 ರನ್ಗಳ ಅಂತರದಿಂದ. ಹೀಗೆ ಸೆಂಚುರಿ ತಪ್ಪಿಸಿಕೊಳ್ಳುವ ಮೂಲಕ ವಿರಾಟ್ ಕೊಹ್ಲಿ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

ವಡೋದರಾದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ 91 ಎಸೆತಗಳನ್ನು ಎದುರಿಸಿದ್ದರು. ಈ ವೇಳೆ 1 ಸಿಕ್ಸ್ ಹಾಗೂ 8 ಫೋರ್ಗಳೊಂದಿಗೆ 93 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಈ ಮೂಲಕ ಕೇವಲ 7 ರನ್ಗಳಿಂದ ವಿರಾಟ್ ಕೊಹ್ಲಿ ಶತಕ ವಂಚಿತರಾದರು. ಹೀಗೆ ಶತಕ ತಪ್ಪಿಸಿಕೊಳ್ಳುವ ಮೂಲಕ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ 90+ ರನ್ಗಳಿಸಿ ಔಟಾದ ಭಾರತದ ಅತ್ಯಂತ ಹಿರಿಯ ಬ್ಯಾಟರ್ ಎಂಬ ದಾಖಲೆಯೊಂದನ್ನು ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಈ ವಿಶೇಷ ದಾಖಲೆ ಸುನಿಲ್ ಗವಾಸ್ಕರ್ ಹೆಸರಿನಲ್ಲಿತ್ತು. 1986 ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ಗವಾಸ್ಕರ್ 92 ರನ್ಗಳಿಸಿ ಶತಕ ವಂಚಿತರಾಗಿದ್ದರು. ಈ ವೇಳೆ ಅವರ ವಯಸ್ಸು 36 ವರ್ಷ, 282 ದಿನಗಳು. ಈ ಮೂಲಕ ಭಾರತದ ಪರ ಏಕದಿನ ಕ್ರಿಕೆಟ್ನಲ್ಲಿ 90+ ರನ್ಗಳಿಸಿ ಶತಕ ತಪ್ಪಿಸಿಕೊಂಡ ಅತ್ಯಂತ ಹಿರಿಯ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದರು.

ಇದೀಗ 37ನೇ ವಯಸ್ಸಿನಲ್ಲಿ 93 ರನ್ಗಳಿಸಿ ಕೇವಲ 7 ರನ್ಗಳಿಂದ ಶತಕ ವಂಚಿತರಾಗುವ ಮೂಲಕ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಈ ಇತಿಹಾಸದೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 28 ಸಾವಿರ ರನ್ ಪೂರೈಸಿದ ವಿಶ್ವದ ಮೂರನೇ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಕೂಡ ಕಿಂಗ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



