ದಕ್ಷಿಣ ಆಫ್ರಿಕಾ ಸರಣಿಯು ಡಿಸೆಂಬರ್ 26 ರಿಂದ ಶುರುವಾಗಲಿದ್ದು, ಆರಂಭದಲ್ಲಿ ಮೂರು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ಟೆಸ್ಟ್ ತಂಡದ ನಾಯಕನಾಗಿ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದಾದ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದ್ದು, ಈ ಸರಣಿಯೊಂದಿಗೆ ರೋಹಿತ್ ಶರ್ಮಾ ಏಕದಿನ ತಂಡದ ನಾಯಕತ್ವದ ಜವಾಬ್ದಾರಿವಹಿಸಿಕೊಳ್ಳಲಿದ್ದಾರೆ.