IND vs ENG: ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾದ 5 ಆಟಗಾರರು ಅಲಭ್ಯ..!
India vs England T20: ಟೀಮ್ ಇಂಡಿಯಾ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್).
Updated on: Jul 06, 2022 | 1:54 PM

ಭಾರತ ಇಂಗ್ಲೆಂಡ್ ನಡುವಣ ಟಿ20 ಸರಣಿ ನಾಳೆಯಿಂದ (ಜುಲೈ 7) ಶುರುವಾಗಲಿದೆ. ಆದರೆ ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಐವರು ಪ್ರಮುಖ ಆಟಗಾರರು ಅಲಭ್ಯರಾಗಲಿದ್ದಾರೆ. ಟೀಮ್ ಇಂಡಿಯಾ ಟೆಸ್ಟ್ ತಂಡದಲ್ಲಿದ್ದ ಆಟಗಾರರಿಗೆ ಮೊದಲ ಟಿ20 ಪಂದ್ಯದ ವೇಳೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಏಜಿಯಾಸ್ ಬೌಲ್ನಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕೆ ಈ ಆಟಗಾರರು ಅಲಭ್ಯರಾಗಲಿದ್ದಾರೆ. ಹಾಗಿದ್ರೆ ಮೊದಲ ಪಂದ್ಯದಿಂದ ಹೊರಗುಳಿದಿರುವ 5 ಆಟಗಾರರು ಯಾರೆಲ್ಲಾ ನೋಡೋಣ...

ವಿರಾಟ್ ಕೊಹ್ಲಿ

ರಿಷಭ್ ಪಂತ್

ಶ್ರೇಯಸ್ ಅಯ್ಯರ್

ಜಸ್ಪ್ರೀತ್ ಬುಮ್ರಾ

ರವೀಂದ್ರ ಜಡೇಜಾ

ಇನ್ನು ಇವರ ಸ್ಥಾನದಲ್ಲಿ ತಂಡದಲ್ಲಿ ಸಂಜು ಸ್ಯಾಮ್ಸನ್, ರುತುರಾಜ್ ಗಾಯಕ್ವಾಡ್, ವೆಂಕಟೇಶ್ ಅಯ್ಯರ್, ಅರ್ಷದೀಪ್ ಸಿಂಗ್ ಹಾಗೂ ರಾಹುಲ್ ತ್ರಿಪಾಠಿ ಅವಕಾಶ ಪಡೆದಿದ್ದಾರೆ. ಇನ್ನು ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದ 5 ಆಟಗಾರರ ಆಗಮನದೊಂದಿಗೆ ಈ ಆಟಗಾರರು ತಂಡದಿಂದ ಹೊರಬೀಳಲಿದ್ದಾರೆ.

ಅಂದರೆ 2ನೇ ಟಿ20 ಪಂದ್ಯಕ್ಕೆ ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ ಲಭ್ಯರಿರಲಿದ್ದು, ಹೀಗಾಗಿ ಸಂಜು ಸ್ಯಾಮ್ಸನ್, ರುತುರಾಜ್ ಗಾಯಕ್ವಾಡ್, ವೆಂಕಟೇಶ್ ಅಯ್ಯರ್, ಅರ್ಷದೀಪ್ ಸಿಂಗ್ ಹಾಗೂ ರಾಹುಲ್ ತ್ರಿಪಾಠಿ ತಂಡದಿಂದ ಸ್ಥಾನ ಕಳೆದುಕೊಳ್ಳಲಿದ್ದಾರೆ.

ಮೊದಲ ಟಿ20 ಪಂದ್ಯಕ್ಕೆ ಟೀಮ್ ಇಂಡಿಯಾ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್ , ಅವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್
























