AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಫೋರ್​ಗಳೊಂದಿಗೆ ದಾಖಲೆ ಪಟ್ಟಿಗೆ ಸೇರಿದ ವಿರಾಟ್ ಕೊಹ್ಲಿ

Virat Kohli Records: ಬಾಂಗ್ಲಾದೇಶ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಒಟ್ಟು 76 ರನ್ ಬಾರಿಸಿದ್ದಾರೆ. ಈ 76 ರನ್​ಗಳೊಂದಿಗೆ ಕಿಂಗ್ ಕೊಹ್ಲಿ ಎರಡು ದಾಖಲೆಗಳನ್ನು ಬರೆದಿದ್ದಾರೆ. ಅದರಲ್ಲೊಂದು ವಿಶ್ವ ದಾಖಲೆ ಎಂಬುದು ವಿಶೇಷ. ಆ ದಾಖಲೆಗಳ ಸಂಪೂರ್ಣ ವಿವರ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on: Oct 01, 2024 | 6:31 PM

Share
ಬಾಂಗ್ಲಾದೇಶ್ ವಿರುದ್ಧ ನಡೆದ ಎರಡನೇ ಟೆಸ್ಟ್​ ಪಂದ್ಯದಲ್ಲಿ 8 ಫೋರ್​ಗಳನ್ನು​ ಬಾರಿಸುವ ಮೂಲಕ ವಿರಾಟ್ ಕೊಹ್ಲಿ (Virat Kohli) ವಿಶೇಷ ದಾಖಲೆ ಪಟ್ಟಿಗೆ ಸೇರಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 35 ಎಸೆತಗಳನ್ನು ಎದುರಿಸಿದ ಕೊಹ್ಲಿ 4 ಫೋರ್ ಹಾಗೂ 1 ಸಿಕ್ಸ್​ನೊಂದಿಗೆ 47 ರನ್ ಬಾರಿಸಿದ್ದರು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ 37 ಎಸೆತಗಳಲ್ಲಿ 4 ಫೋರ್​ಗಳೊಂದಿಗೆ ಅಜೇಯ 29 ರನ್ ಕಲೆಹಾಕಿದ್ದರು.

1 / 5
ಈ ಎಂಟು ಫೋರ್​ಗಳೊಂದಿಗೆ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ 1000 ಫೋರ್​ಗಳನ್ನು ಬಾರಿಸಿದ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಭಾರತದ 6ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ವೀರೇಂದ್ರ ಸೆಹ್ವಾಗ್, ವಿವಿಎಸ್ ಲಕ್ಷ್ಮಣ್, ಸುನಿಲ್ ಗವಾಸ್ಕರ್ ಈ ಸಾಧನೆ ಮಾಡಿದ್ದರು.

2 / 5
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್. ಟೀಮ್ ಇಂಡಿಯಾ ಪರ 200 ಟೆಸ್ಟ್ ಪಂದ್ಯಗಳನ್ನಾಡಿರುವ ಸಚಿನ್ 329	ಇನಿಂಗ್ಸ್​ಗಳಲ್ಲಿ 2058 ಫೋರ್​ಗಳನ್ನು ಬಾರಿಸಿ ವಿಶ್ವ ದಾಖಲೆ ಬರೆದಿದ್ದಾರೆ.

3 / 5
ಇದೀಗ 115 ಟೆಸ್ಟ್​ಗಳಲ್ಲಿ 195 ಇನಿಂಗ್ಸ್ ಪೂರೈಸಿರುವ ವಿರಾಟ್ ಕೊಹ್ಲಿ ಒಟ್ಟು 1001 ಫೋರ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಸಾವಿರ ಫೋರ್ ಬಾರಿಸಿದ ವಿಶ್ವದ 26ನೇ ಆಟಗಾರ ಎನಿಸಿಕೊಂಡಿದ್ದಾರೆ.

4 / 5
ಹಾಗೆಯೇ ಇದೇ ಪಂದ್ಯದಲ್ಲಿ ಒಟ್ಟು 76 ರನ್ ಬಾರಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 27 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗವಾಗಿ 27 ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಸಚಿನ್ ತೆಂಡೂಲ್ಕರ್ (623) ಹೆಸರಿನಲ್ಲಿತ್ತು. ಇದೀಗ ಕೇವಲ 594 ಇನಿಂಗ್ಸ್​ಗಳ ಮೂಲಕ 27000 ರನ್ ಕಲೆಹಾಕಿ ವಿರಾಟ್ ಕೊಹ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ

ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ

ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?

ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು

ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?

‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ

ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!

‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ