- Kannada News Photo gallery Cricket photos Virat Kohli joins elite list after hitting 1000th four in Tests
Virat Kohli: ಫೋರ್ಗಳೊಂದಿಗೆ ದಾಖಲೆ ಪಟ್ಟಿಗೆ ಸೇರಿದ ವಿರಾಟ್ ಕೊಹ್ಲಿ
Virat Kohli Records: ಬಾಂಗ್ಲಾದೇಶ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಒಟ್ಟು 76 ರನ್ ಬಾರಿಸಿದ್ದಾರೆ. ಈ 76 ರನ್ಗಳೊಂದಿಗೆ ಕಿಂಗ್ ಕೊಹ್ಲಿ ಎರಡು ದಾಖಲೆಗಳನ್ನು ಬರೆದಿದ್ದಾರೆ. ಅದರಲ್ಲೊಂದು ವಿಶ್ವ ದಾಖಲೆ ಎಂಬುದು ವಿಶೇಷ. ಆ ದಾಖಲೆಗಳ ಸಂಪೂರ್ಣ ವಿವರ ಈ ಕೆಳಗಿನಂತಿದೆ...
Updated on: Oct 01, 2024 | 6:31 PM

ಬಾಂಗ್ಲಾದೇಶ್ ವಿರುದ್ಧ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ 8 ಫೋರ್ಗಳನ್ನು ಬಾರಿಸುವ ಮೂಲಕ ವಿರಾಟ್ ಕೊಹ್ಲಿ (Virat Kohli) ವಿಶೇಷ ದಾಖಲೆ ಪಟ್ಟಿಗೆ ಸೇರಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 35 ಎಸೆತಗಳನ್ನು ಎದುರಿಸಿದ ಕೊಹ್ಲಿ 4 ಫೋರ್ ಹಾಗೂ 1 ಸಿಕ್ಸ್ನೊಂದಿಗೆ 47 ರನ್ ಬಾರಿಸಿದ್ದರು. ಇನ್ನು ದ್ವಿತೀಯ ಇನಿಂಗ್ಸ್ನಲ್ಲಿ 37 ಎಸೆತಗಳಲ್ಲಿ 4 ಫೋರ್ಗಳೊಂದಿಗೆ ಅಜೇಯ 29 ರನ್ ಕಲೆಹಾಕಿದ್ದರು.

ಈ ಎಂಟು ಫೋರ್ಗಳೊಂದಿಗೆ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ನಲ್ಲಿ 1000 ಫೋರ್ಗಳನ್ನು ಬಾರಿಸಿದ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಭಾರತದ 6ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ವೀರೇಂದ್ರ ಸೆಹ್ವಾಗ್, ವಿವಿಎಸ್ ಲಕ್ಷ್ಮಣ್, ಸುನಿಲ್ ಗವಾಸ್ಕರ್ ಈ ಸಾಧನೆ ಮಾಡಿದ್ದರು.

ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್. ಟೀಮ್ ಇಂಡಿಯಾ ಪರ 200 ಟೆಸ್ಟ್ ಪಂದ್ಯಗಳನ್ನಾಡಿರುವ ಸಚಿನ್ 329 ಇನಿಂಗ್ಸ್ಗಳಲ್ಲಿ 2058 ಫೋರ್ಗಳನ್ನು ಬಾರಿಸಿ ವಿಶ್ವ ದಾಖಲೆ ಬರೆದಿದ್ದಾರೆ.

ಇದೀಗ 115 ಟೆಸ್ಟ್ಗಳಲ್ಲಿ 195 ಇನಿಂಗ್ಸ್ ಪೂರೈಸಿರುವ ವಿರಾಟ್ ಕೊಹ್ಲಿ ಒಟ್ಟು 1001 ಫೋರ್ಗಳನ್ನು ಬಾರಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಸಾವಿರ ಫೋರ್ ಬಾರಿಸಿದ ವಿಶ್ವದ 26ನೇ ಆಟಗಾರ ಎನಿಸಿಕೊಂಡಿದ್ದಾರೆ.

ಹಾಗೆಯೇ ಇದೇ ಪಂದ್ಯದಲ್ಲಿ ಒಟ್ಟು 76 ರನ್ ಬಾರಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 27 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗವಾಗಿ 27 ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಸಚಿನ್ ತೆಂಡೂಲ್ಕರ್ (623) ಹೆಸರಿನಲ್ಲಿತ್ತು. ಇದೀಗ ಕೇವಲ 594 ಇನಿಂಗ್ಸ್ಗಳ ಮೂಲಕ 27000 ರನ್ ಕಲೆಹಾಕಿ ವಿರಾಟ್ ಕೊಹ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.



















