AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್ ಕೊಹ್ಲಿ ಎಂಟ್ರಿ: ಬಾಂಗ್ಲಾ ವಿರುದ್ಧ ಕಣಕ್ಕಿಳಿಯುವುದು ಡೌಟ್..!

India vs Bangladesh: ಇಂದು (ಜೂನ್ 1) ನಡೆಯಲಿರುವ ಟಿ20 ವಿಶ್ವಕಪ್​ನ ಅಭ್ಯಾಸ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ್ ತಂಡಗಳು ಕಣಕ್ಕಿಳಿಯಲಿದೆ. ನ್ಯೂಯಾರ್ಕ್​ನಲ್ಲಿ ನಡೆಯಲಿರುವ ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಶುರುವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್ ಚಾನೆಲ್ ಮತ್ತು ಡಿಸ್ನಿ ಹಾಟ್​ಸ್ಟಾರ್​ನಲ್ಲಿ ನೇರ ಪ್ರಸಾರ ಇರಲಿದೆ.

ಝಾಹಿರ್ ಯೂಸುಫ್
|

Updated on: Jun 01, 2024 | 11:32 AM

ಟಿ20 ವಿಶ್ವಕಪ್ ಆರಂಭಕ್ಕೆ ಇನ್ನು ಉಳಿದಿರುವುದು ಕೇವಲ ಒಂದು ದಿನ ಮಾತ್ರ. ಭಾನುವಾರದಿಂದ (ಜೂ.2) ಚುಟುಕು ಕ್ರಿಕೆಟ್ ಕದನ ಶುರುವಾಗಲಿದ್ದು, ಅದಕ್ಕೂ ಮುನ್ನ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ (Virat Kohli) ಭಾರತ ತಂಡವನ್ನು ಕೂಡಿಕೊಂಡಿದ್ದಾರೆ. ಶುಕ್ರವಾರ ನೂಯಾರ್ಕ್​ಗೆ ಆಗಮಿಸಿದ ಕೊಹ್ಲಿ ನೇರವಾಗಿ ಭಾರತೀಯ ಕ್ರಿಕೆಟ್ ತಂಡದ ಶಿಬಿರವನ್ನು ಸೇರಿಕೊಂಡರು. ಇದಾಗ್ಯೂ ಅವರು ಇಂದು ಕಣಕ್ಕಿಳಿಯುವ ಸಾಧ್ಯತೆಯಿಲ್ಲ ಎಂದು ವರದಿಯಾಗಿದೆ.

1 / 6
ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಅಭ್ಯಾಸ ಪಂದ್ಯವು ಇಂದು ನಡೆಯಲಿದ್ದು, ಈ ಪಂದ್ಯಕ್ಕೆ ವಿರಾಟ್ ಕೊಹ್ಲಿ ಅಲಭ್ಯರಾಗುವ ಸಾಧ್ಯತೆಯಿದೆ. ದೂರದ ಪ್ರಯಾಣದ ನಿಮಿತ್ತ ಕೊಹ್ಲಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಶನಿವಾರ ನಡೆಯಲಿರುವ ಅಭ್ಯಾಸ ಪಂದ್ಯದಲ್ಲಿ ಅವರು ಕಾಣಿಸಿಕೊಳ್ಳುವ ಸಾಧ್ಯತೆ ತುಂಬಾ ಕಡಿಮೆ.

2 / 6
ಇದಕ್ಕೂ ಮುನ್ನ, ಅಂದರೆ ಮೇ 26 ರಂದು ಭಾರತೀಯ ಆಟಗಾರರು ಟಿ20 ವಿಶ್ವಕಪ್​ಗಾಗಿ ಅಮೆರಿಕಾಗೆ ತೆರಳಿದ್ದರು. ಆದರೆ ವೀಸಾ ಪೇಪರ್ ವರ್ಕ್​ಗಳ ವಿಳಂಬವಾದ ಕಾರಣ ಕೊಹ್ಲಿ ಈ ಬಳಗದೊಂದಿಗೆ ಪ್ರಯಾಣಿಸಲು ಸಾಧ್ಯವಾಗಿರಲಿಲ್ಲ. ಇದೀಗ 5 ದಿನಗಳ ಬಳಿಕ ಕಿಂಗ್ ಕೊಹ್ಲಿ ಭಾರತ ತಂಡವನ್ನು ಕೂಡಿಕೊಂಡಿದ್ದಾರೆ.

3 / 6
ಟಿ20 ವಿಶ್ವಕಪ್​ ಜೂನ್ 2 ರಿಂದ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಆತಿಥೇಯ ಅಮೆರಿಕ ಮತ್ತು ಕೆನಡಾ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಭಾರತ ತಂಡವು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಶುರು ಮಾಡಲಿದ್ದಾರೆ.

4 / 6
ಹಾಗೆಯೇ ಜೂನ್ 9 ರಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದ್ದು, ಈ ಪಂದ್ಯಕ್ಕೆ ನ್ಯೂಯಾರ್ಕ್​ನ ನಸ್ಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ.

5 / 6
ಭಾರತ ಟಿ20​ ವಿಶ್ವಕಪ್ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.||| ಮೀಸಲು ಆಟಗಾರರು: ಶುಭ್​ಮನ್ ಗಿಲ್, ಅವೇಶ್ ಖಾನ್, ರಿಂಕು ಸಿಂಗ್, ಖಲೀಲ್ ಅಹ್ಮದ್.

6 / 6
Follow us