AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Rankings: ಭರ್ಜರಿ ಮುಂಬಡ್ತಿ ಪಡೆದ ಕೊಹ್ಲಿ- ರಾಹುಲ್; ನಂ.1 ಪಟ್ಟ ಕಳೆದುಕೊಂಡ ಸಿರಾಜ್..!

ICC Rankings: ಚೆನ್ನೈನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ಪರ 85 ರನ್​ಗಳ ಸ್ಮರಣೀಯ ಇನ್ನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ, ಬುಧವಾರ ಬಿಡುಗಡೆಯಾದ ಐಸಿಸಿ ಬ್ಯಾಟರ್‌ಗಳ ಶ್ರೇಯಾಂಕದಲ್ಲಿ ಎರಡು ಸ್ಥಾನ ಮೇಲೇರಿ ಏಳನೇ ಸ್ಥಾನಕ್ಕೆ ತಲುಪಿದ್ದಾರೆ.

ಪೃಥ್ವಿಶಂಕರ
|

Updated on: Oct 12, 2023 | 7:15 AM

Share
ಚೆನ್ನೈನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ಪರ 85 ರನ್​ಗಳ ಸ್ಮರಣೀಯ ಇನ್ನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ, ಬುಧವಾರ ಬಿಡುಗಡೆಯಾದ ಐಸಿಸಿ ಬ್ಯಾಟರ್‌ಗಳ ಶ್ರೇಯಾಂಕದಲ್ಲಿ ಎರಡು ಸ್ಥಾನ ಮೇಲೇರಿ ಏಳನೇ ಸ್ಥಾನಕ್ಕೆ ತಲುಪಿದ್ದಾರೆ.

1 / 9
ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕೇವಲ 2 ರನ್​ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಟೀಂ ಇಂಡಿಯಾವನ್ನು ಗೆಲುವಿನ ದಡ ಸೇರಿಸುವಲ್ಲಿ ಕೊಹ್ಲಿ ಇನ್ನಿಂಗ್ಸ್ ಪ್ರಮುಖ ಪಾತ್ರವಹಿಸಿತ್ತು. ಕೆಎಲ್ ರಾಹುಲ್ ಅವರೊಂದಿಗೆ ನಾಲ್ಕನೇ ವಿಕೆಟ್‌ಗೆ 165 ರನ್‌ಗಳ ದಾಖಲೆಯ ಜೊತೆಯಾಟ ನಡೆಸಿದರು.

2 / 9
ಇನ್ನು ಆಸ್ಟ್ರೇಲಿಯಾ ವಿರುದ್ಧ ಅಜೇಯ 97 ರನ್ ಬಾರಿಸಿದ ರಾಹುಲ್, ಬ್ಯಾಟರ್‌ಗಳ ರ್ಯಾಂಕಿಂಗ್​ನಲ್ಲಿ 15 ಸ್ಥಾನಗಳನ್ನು ಮೇಲೇರಿ 19 ನೇ ಸ್ಥಾನವನ್ನು ತಲುಪಿದ್ದಾರೆ.

3 / 9
ಹಾಗೆಯೇ ವಿಶ್ವಕಪ್ ಇತಿಹಾಸದಲ್ಲಿ ವೇಗದ ಶತಕ ಬಾರಿಸಿದ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಏಡೆನ್ ಮಾರ್ಕ್ರಾಮ್ 11 ಸ್ಥಾನಗಳ ಭರ್ಜರಿ ಮುಂಬಡ್ತಿ ಪಡೆದು, ಪ್ರಸ್ತುತ 21 ನೇ ಸ್ಥಾನವನ್ನು ತಲುಪಿದ್ದಾರೆ.

4 / 9
ಅದೇ ಸಮಯದಲ್ಲಿ, ನವದೆಹಲಿಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 84 ಎಸೆತಗಳಲ್ಲಿ 100 ರನ್ ಬಾರಿಸಿದ್ದ ಕ್ವಿಂಟನ್ ಡಿ ಕಾಕ್ ಒಂದು ಸ್ಥಾನವನ್ನು ಮೇಲೇರಿ ಆರನೇ ಸ್ಥಾನಕ್ಕೆ ತಲುಪಿದ್ದಾರೆ.

5 / 9
ಧರ್ಮಶಾಲಾದಲ್ಲಿ ನಡೆದ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ 140 ರನ್​ಗಳ ಇನ್ನಿಂಗ್ಸ್ ಆಡಿದ್ದ ಇಂಗ್ಲೆಂಡ್‌ನ ಡೇವಿಡ್ ಮಲಾನ್ ಏಳು ಸ್ಥಾನಗಳ ಮುಂಬಡ್ತಿ ಪಡೆದು ಎಂಟನೇ ಸ್ಥಾನಕ್ಕೆ ತಲುಪಿದರೆ, ಪಾಕಿಸ್ತಾನದ ಇಮಾಮ್ ಉಲ್ ಹಕ್ ಮೂರು ಸ್ಥಾನಗಳನ್ನು ಕಳೆದುಕೊಂಡು ಒಂಬತ್ತನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

6 / 9
ಇನ್ನು ಬೌಲರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ವೇಗಿ ಮೊಹಮ್ಮದ್ ಸಿರಾಜ್ ಅವರು ಆಸ್ಟ್ರೇಲಿಯಾದ ಜೋಶ್ ಹ್ಯಾಜಲ್‌ವುಡ್ ಅವರೊಂದಿಗೆ ಸ್ವಲ್ಪ ಸಮಯದವರೆಗೆ ಅಗ್ರಸ್ಥಾನವನ್ನು ಹಂಚಿಕೊಂಡು ಇದೀಗ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ. ವಿಶ್ವಕಪ್​ನಲ್ಲಿ ಕೊಂಚ ದುಬಾರಿಯಾಗುತ್ತಿರುವ ಸಿರಾಜ್ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದ ನಂತರ ಐದು ಅಂಕಗಳನ್ನು ಕಳೆದುಕೊಂಡಿದ್ದರು.

7 / 9
ಇನ್ನೊಂದೆಡೆ ಗಮನಾರ್ಹ ಪ್ರದರ್ಶನ ನೀಡುತ್ತಿರುವ ಕುಲ್ದೀಪ್ ಯಾದವ್ ಬೌಲರ್​ಗಳ ಶ್ರೇಯಾಂಕದಲ್ಲಿ ಮೂರು ಸ್ಥಾನಗಳನ್ನು ಮೇಲೇರಿ ಎಂಟನೇ ಸ್ಥಾನಕ್ಕೆ ತಲುಪಿದ್ದಾರೆ.

8 / 9
ಆದರೆ ಆಸ್ಟ್ರೇಲಿಯಾ ವಿರುದ್ಧ ಮೂರು ವಿಕೆಟ್ ಪಡೆದ ಹೊರತಾಗಿಯೂ ಆಲ್ ರೌಂಡರ್ ರವೀಂದ್ರ ಜಡೇಜಾ ಬೌಲರ್‌ಗಳ ಶ್ರೇಯಾಂಕದಲ್ಲಿ ಟಾಪ್-40 ರಿಂದ ಹೊರಗಿದ್ದಾರೆ.

9 / 9
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್

ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!

ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!

ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ

ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ

ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ

ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು

ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ

ಬೆಂಗಳೂರು: ಶಾಂತಿನಗರದಲ್ಲಿ ಮೂರು ದಿನಗಳ ದುರ್ಗಾದೇವಿ ಉತ್ಸವ

ಹಬ್ಬ ಹಿನ್ನೆಲೆ ಕೆ. ಆರ್ ಮಾರ್ಕೆಟ್​ನಲ್ಲಿ ಖರೀದಿ ಭರಾಟೆ ಜೋರು!