ICC Rankings: ಭರ್ಜರಿ ಮುಂಬಡ್ತಿ ಪಡೆದ ಕೊಹ್ಲಿ- ರಾಹುಲ್; ನಂ.1 ಪಟ್ಟ ಕಳೆದುಕೊಂಡ ಸಿರಾಜ್..!
ICC Rankings: ಚೆನ್ನೈನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ಪರ 85 ರನ್‌ಗಳ ಸ್ಮರಣೀಯ ಇನ್ನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ, ಬುಧವಾರ ಬಿಡುಗಡೆಯಾದ ಐಸಿಸಿ ಬ್ಯಾಟರ್‌ಗಳ ಶ್ರೇಯಾಂಕದಲ್ಲಿ ಎರಡು ಸ್ಥಾನ ಮೇಲೇರಿ ಏಳನೇ ಸ್ಥಾನಕ್ಕೆ ತಲುಪಿದ್ದಾರೆ.
1 / 9
ಚೆನ್ನೈನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ಪರ 85 ರನ್‌ಗಳ ಸ್ಮರಣೀಯ ಇನ್ನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ, ಬುಧವಾರ ಬಿಡುಗಡೆಯಾದ ಐಸಿಸಿ ಬ್ಯಾಟರ್‌ಗಳ ಶ್ರೇಯಾಂಕದಲ್ಲಿ ಎರಡು ಸ್ಥಾನ ಮೇಲೇರಿ ಏಳನೇ ಸ್ಥಾನಕ್ಕೆ ತಲುಪಿದ್ದಾರೆ.
2 / 9
ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕೇವಲ 2 ರನ್ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಟೀಂ ಇಂಡಿಯಾವನ್ನು ಗೆಲುವಿನ ದಡ ಸೇರಿಸುವಲ್ಲಿ ಕೊಹ್ಲಿ ಇನ್ನಿಂಗ್ಸ್ ಪ್ರಮುಖ ಪಾತ್ರವಹಿಸಿತ್ತು. ಕೆಎಲ್ ರಾಹುಲ್ ಅವರೊಂದಿಗೆ ನಾಲ್ಕನೇ ವಿಕೆಟ್‌ಗೆ 165 ರನ್‌ಗಳ ದಾಖಲೆಯ ಜೊತೆಯಾಟ ನಡೆಸಿದರು.
3 / 9
ಇನ್ನು ಆಸ್ಟ್ರೇಲಿಯಾ ವಿರುದ್ಧ ಅಜೇಯ 97 ರನ್ ಬಾರಿಸಿದ ರಾಹುಲ್, ಬ್ಯಾಟರ್‌ಗಳ ರ್ಯಾಂಕಿಂಗ್ನಲ್ಲಿ 15 ಸ್ಥಾನಗಳನ್ನು ಮೇಲೇರಿ 19 ನೇ ಸ್ಥಾನವನ್ನು ತಲುಪಿದ್ದಾರೆ.
4 / 9
ಹಾಗೆಯೇ ವಿಶ್ವಕಪ್ ಇತಿಹಾಸದಲ್ಲಿ ವೇಗದ ಶತಕ ಬಾರಿಸಿದ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಏಡೆನ್ ಮಾರ್ಕ್ರಾಮ್ 11 ಸ್ಥಾನಗಳ ಭರ್ಜರಿ ಮುಂಬಡ್ತಿ ಪಡೆದು, ಪ್ರಸ್ತುತ 21 ನೇ ಸ್ಥಾನವನ್ನು ತಲುಪಿದ್ದಾರೆ.
5 / 9
ಅದೇ ಸಮಯದಲ್ಲಿ, ನವದೆಹಲಿಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 84 ಎಸೆತಗಳಲ್ಲಿ 100 ರನ್ ಬಾರಿಸಿದ್ದ ಕ್ವಿಂಟನ್ ಡಿ ಕಾಕ್ ಒಂದು ಸ್ಥಾನವನ್ನು ಮೇಲೇರಿ ಆರನೇ ಸ್ಥಾನಕ್ಕೆ ತಲುಪಿದ್ದಾರೆ.
6 / 9
ಧರ್ಮಶಾಲಾದಲ್ಲಿ ನಡೆದ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ 140 ರನ್‌ಗಳ ಇನ್ನಿಂಗ್ಸ್ ಆಡಿದ್ದ ಇಂಗ್ಲೆಂಡ್‌ನ ಡೇವಿಡ್ ಮಲಾನ್ ಏಳು ಸ್ಥಾನಗಳ ಮುಂಬಡ್ತಿ ಪಡೆದು ಎಂಟನೇ ಸ್ಥಾನಕ್ಕೆ ತಲುಪಿದರೆ, ಪಾಕಿಸ್ತಾನದ ಇಮಾಮ್ ಉಲ್ ಹಕ್ ಮೂರು ಸ್ಥಾನಗಳನ್ನು ಕಳೆದುಕೊಂಡು ಒಂಬತ್ತನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
7 / 9
ಇನ್ನು ಬೌಲರ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ವೇಗಿ ಮೊಹಮ್ಮದ್ ಸಿರಾಜ್ ಅವರು ಆಸ್ಟ್ರೇಲಿಯಾದ ಜೋಶ್ ಹ್ಯಾಜಲ್‌ವುಡ್ ಅವರೊಂದಿಗೆ ಸ್ವಲ್ಪ ಸಮಯದವರೆಗೆ ಅಗ್ರಸ್ಥಾನವನ್ನು ಹಂಚಿಕೊಂಡು ಇದೀಗ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ. ವಿಶ್ವಕಪ್ನಲ್ಲಿ ಕೊಂಚ ದುಬಾರಿಯಾಗುತ್ತಿರುವ ಸಿರಾಜ್ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದ ನಂತರ ಐದು ಅಂಕಗಳನ್ನು ಕಳೆದುಕೊಂಡಿದ್ದರು.
8 / 9
ಇನ್ನೊಂದೆಡೆ ಗಮನಾರ್ಹ ಪ್ರದರ್ಶನ ನೀಡುತ್ತಿರುವ ಕುಲ್ದೀಪ್ ಯಾದವ್ ಬೌಲರ್‌ಗಳ ಶ್ರೇಯಾಂಕದಲ್ಲಿ ಮೂರು ಸ್ಥಾನಗಳನ್ನು ಮೇಲೇರಿ ಎಂಟನೇ ಸ್ಥಾನಕ್ಕೆ ತಲುಪಿದ್ದಾರೆ.
9 / 9
ಆದರೆ ಆಸ್ಟ್ರೇಲಿಯಾ ವಿರುದ್ಧ ಮೂರು ವಿಕೆಟ್ ಪಡೆದ ಹೊರತಾಗಿಯೂ ಆಲ್ ರೌಂಡರ್ ರವೀಂದ್ರ ಜಡೇಜಾ ಬೌಲರ್‌ಗಳ ಶ್ರೇಯಾಂಕದಲ್ಲಿ ಟಾಪ್-40 ರಿಂದ ಹೊರಗಿದ್ದಾರೆ.