ಫ್ಯಾಬ್-4 ಸೆಂಚುರಿ ಸರದಾರರ ಪಟ್ಟಿಯಲ್ಲಿ ಹಿಂದುಳಿದ ವಿರಾಟ್ ಕೊಹ್ಲಿ
Virat Kohli: ಟೆಸ್ಟ್ ಕ್ರಿಕೆಟ್ನಲ್ಲಿ ಸಕ್ರೀಯರಾಗಿರುವ ಅತ್ಯುತ್ತಮ ಬ್ಯಾಟರ್ಗಳನ್ನು ಫ್ಯಾಬಲಸ್-4 ಎಂದು ಗುರುತಿಸಲಾಗುತ್ತಿದೆ. ಅದರಂತೆ ಇದೀಗ ವಿರಾಟ್ ಕೊಹ್ಲಿ, ಜೋ ರೂಟ್, ಸ್ಟೀವ್ ಸ್ಮಿತ್ ಮತ್ತು ಕೇನ್ ವಿಲಿಯಮ್ಸನ್ ಫ್ಯಾಬ್-4 ಪಟ್ಟಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಪಟ್ಟಿಯಲ್ಲಿರುವ ಸೆಂಚುರಿ ಸರದಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಹಿಂದೆ ಉಳಿದಿದ್ದಾರೆ.
Updated on:Jul 23, 2024 | 9:12 AM

ನಾಟಿಂಗ್ಹ್ಯಾಮ್ನ ಎಡ್ಜ್ಬಾಸ್ಟ್ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಜೋ ರೂಟ್ (Joe Root) ಭರ್ಜರಿ ಸೆಂಚುರಿ ಸಿಡಿಸಿ ಮಿಂಚಿದ್ದರು. ಈ ಪಂದ್ಯದ 2ನೇ ಇನಿಂಗ್ಸ್ನಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರೂಟ್ 178 ಎಸೆತಗಳಲ್ಲಿ 122 ರನ್ ಬಾರಿಸಿದ್ದರು. ಈ ಶತಕದೊಂದಿಗೆ ಜೋ ರೂಟ್ ತಮ್ಮ ಟೆಸ್ಟ್ ಶತಕಗಳ ಸಂಖ್ಯೆಯನ್ನು 32 ಕ್ಕೇರಿಸಿದ್ದಾರೆ.

ಇದರೊಂದಿಗೆ ಫ್ಯಾಬ್-4 ಬ್ಯಾಟರ್ಗಳ ಪಟ್ಟಿಯಲ್ಲಿ ಮೂವರ ಶತಕಗಳ ಸಂಖ್ಯೆ ಸಮವಾಗಿದೆ. ಆದರೆ ಮತ್ತೊಂದೆಡೆ ಅಗ್ರಸ್ಥಾನದಲ್ಲಿದ್ದ ವಿರಾಟ್ ಕೊಹ್ಲಿ ಈ ಇದೀಗ 4ನೇ ಸ್ಥಾನಕ್ಕೆ ತಳ್ಳಲ್ಪಿಟ್ಟಿದ್ದಾರೆ. ಅಂದರೆ 2021ರವರೆಗೆ ಫ್ಯಾಬ್-4 ಬ್ಯಾಟರ್ಗಳ ಪಟ್ಟಿಯಲ್ಲಿ ಕೊಹ್ಲಿ ಅತೀ ಹೆಚ್ಚು ಶತಕ ಸಿಡಿಸಿದ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದರು. ಇದೀಗ ಕೇನ್ ವಿಲಿಯಮ್ಸನ್, ಸ್ಟೀವ್ ಸ್ಮಿತ್, ಜೋ ರೂಟ್ ಮೊದಲ ಮೂರು ಸ್ಥಾನಗಳನ್ನು ಅಲಂಕರಿಸಿದರೆ, ಕೊಹ್ಲಿ 4ನೇ ಸ್ಥಾನದಲ್ಲಿದ್ದಾರೆ.

ಕೇನ್ ವಿಲಿಯಮ್ಸನ್: ನ್ಯೂಝಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಈವರೆಗೆ 100 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 176 ಇನಿಂಗ್ಸ್ ಆಡಿರುವ ಕೇನ್ 32 ಶತಕ ಹಾಗೂ 34 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ ಫ್ಯಾಬ್-4 ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ.

ಸ್ಟೀವ್ ಸ್ಮಿತ್: ಆಸ್ಟ್ರೇಲಿಯಾ ತಂಡದ ಟೆಸ್ಟ್ ಸ್ಪೆಷಲಿಸ್ಟ್ ಸ್ಟೀವ್ ಸ್ಮಿತ್ 109 ಟೆಸ್ಟ್ ಪಂದ್ಯಗಳ 195 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 32 ಶತಕ ಹಾಗೂ 41 ಅರ್ಧಶತಕಗಳನ್ನು ಸಿಡಿಸಿದ್ದಾರೆ.

ಜೋ ರೂಟ್: ಇಂಗ್ಲೆಂಡ್ ಟೆಸ್ಟ್ ತಂಡದ ಬೆನ್ನೆಲುಬು ಎಂದೇ ಗುರುತಿಸಿಕೊಂಡಿರುವ ಜೋ ರೂಟ್ ಈವರೆಗೆ 142 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 260 ಇನಿಂಗ್ಸ್ ಆಡಿರುವ ರೂಟ್ 32 ಶತಕ 62 ಅರ್ಧಶತಕಗಳನ್ನು ಬಾರಿಸಿದ್ದಾರೆ.

ವಿರಾಟ್ ಕೊಹ್ಲಿ: ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಈವರೆಗೆ 113 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 191 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿರುವ ಕೊಹ್ಲಿ 29 ಶತಕ ಹಾಗೂ 30 ಅರ್ಧಶತಕಗಳನ್ನು ಸಿಡಿಸಿದ್ದಾರೆ.
Published On - 9:10 am, Tue, 23 July 24

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




