Virat Kohli: ನಿಧಾನವೇ ಪ್ರಧಾನ… ಅನಗತ್ಯ ದಾಖಲೆ ಬರೆದ ವಿರಾಟ್ ಕೊಹ್ಲಿ

Updated on: Apr 28, 2025 | 8:24 AM

IPL 2025 Virat Kohli: ವಿರಾಟ್ ಕೊಹ್ಲಿ ಐಪಿಎಲ್​ನಲ್ಲಿ ಒಟ್ಟು 61 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ 61 ಹಾಫ್ ಸೆಂಚುರಿಗಳಲ್ಲಿ ಮೂರು ಅರ್ಧಶತಕ ಮೂಡಿಬಂದಿದ್ದು 44 ಕ್ಕಿಂತ ಹೆಚ್ಚಿನ ಎಸೆತಗಳಲ್ಲಿ. ಈ ಮೂಲಕ ಐಪಿಎಲ್​ನಲ್ಲಿ ಮೂರು ಬಾರಿ 44+ ಬಾಲ್​ಗಳನ್ನು ಎದುರಿಸಿ ಅರ್ಧಶತಕ ಬಾರಿಸಿದ ಬ್ಯಾಟರ್ ಎಂಬ ಅನಗತ್ಯ ದಾಖಲೆಯನ್ನು ಕೊಹ್ಲಿ ನಿರ್ಮಿಸಿದ್ದಾರೆ.

1 / 6
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 46ನೇ ಪಂದ್ಯದ ಮೂಲಕ ವಿರಾಟ್ ಕೊಹ್ಲಿ (Virat Kohli) ಅನಗತ್ಯ ದಾಖಲೆ ಬರೆದಿದ್ದಾರೆ. ಅದು ಸಹ ಅರ್ಧಶತಕ ಬಾರಿಸಿ ಎಂಬುದು ವಿಶೇಷ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 162 ರನ್ ಕಲೆಹಾಕಿತು.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 46ನೇ ಪಂದ್ಯದ ಮೂಲಕ ವಿರಾಟ್ ಕೊಹ್ಲಿ (Virat Kohli) ಅನಗತ್ಯ ದಾಖಲೆ ಬರೆದಿದ್ದಾರೆ. ಅದು ಸಹ ಅರ್ಧಶತಕ ಬಾರಿಸಿ ಎಂಬುದು ವಿಶೇಷ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 162 ರನ್ ಕಲೆಹಾಕಿತು.

2 / 6

163 ರನ್​ಗಳ ಗುರಿ ಬೆನ್ನತ್ತಿದ ಆರ್​ಸಿಬಿ ತಂಡಕ್ಕೆ ವಿರಾಟ್ ಕೊಹ್ಲಿ ಉತ್ತಮ ಆರಂಭ ಒದಗಿಸಿದ್ದರು. ಅದರಲ್ಲೂ ​ ಕಷ್ಟಕರವಾಗಿದ್ದ ಪಿಚ್​ನಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್​ ಪ್ರದರ್ಶಿಸಿದ ಕೊಹ್ಲಿ 45 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದರೊಂದಿಗೆ ಈ ಬಾರಿಯ ಐಪಿಎಲ್​ನಲ್ಲಿ ಅತ್ಯಂತ ನಿಧಾನಗತಿಯಲ್ಲಿ ಅರ್ಧಶತಕ ಬಾರಿಸಿದ ದಾಖಲೆ ವಿರಾಟ್ ಕೊಹ್ಲಿ ಪಾಲಾಯಿತು.

3 / 6

ಇದಕ್ಕೂ ಮುನ್ನ ಈ ದಾಖಲೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿಜಯ್ ಶಂಕರ್ ಹೆಸರಿನಲ್ಲಿತ್ತು. ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ 43 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ವಿಜಯ್ ಶಂಕರ್ ಈ ಅನಗತ್ಯ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ಮುರಿದು ಕೊಹ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

4 / 6

ಅಂದಹಾಗೆ ಇದು ವಿರಾಟ್ ಕೊಹ್ಲಿ ಅವರ ಐಪಿಎಲ್ ಕೆರಿಯರ್​ನ ಅತ್ಯಂತ ನಿಧಾನಗತಿಯ ಅರ್ಧಶತಕವಲ್ಲ. ಇದಕ್ಕೂ ಮುನ್ನ 2016 ರಲ್ಲಿ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ 47 ಎಸೆತಗಳನ್ನು ಎದುರಿಸಿ ಅರ್ಧಶತಕ ಬಾರಿಸಿದ್ದರು. ಇದೀಗ 45 ಎಸೆತಗಳ ಮೂಲಕ ಹಾಫ್ ಸೆಂಚುರಿ ಪೂರೈಸಿ ಅನಗತ್ಯ ದಾಖಲೆಗೆ ಮತ್ತೊಮ್ಮೆ ಕೊರೊಳೊಡ್ಡಿದ್ದಾರೆ.

5 / 6

ಇನ್ನು ಈ ಪಂದ್ಯದಲ್ಲಿ 47 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ 4 ಫೋರ್​ಗಳೊಂದಿಗೆ 51 ರನ್ ಬಾರಿಸಿದ್ದರು. ಈ ಅರ್ಧಶತಕದ ನೆರವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 163 ರನ್​ಗಳ ಗುರಿಯನ್ನು ಆರ್​ಸಿಬಿ ತಂಡ 18.3 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ರಾಯಲ್ ಪಡೆ 6 ವಿಕೆಟ್​ಗಳ ಜಯ ಸಾಧಿಸಿದೆ.

6 / 6

ಅಂದಹಾಗೆ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತ್ಯಂತ ನಿಧಾನಗತಿಯ ಅರ್ಧಶತಕ ಬಾರಿಸಿದ ದಾಖಲೆ ಸೌತ್ ಆಫ್ರಿಕಾದ ಜೆಪಿ ಡುಮಿನಿ ಹೆಸರಿನಲ್ಲಿದೆ. 2009ರ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿದ ಡುಮಿನಿ ಅರ್ಧಶತಕ ಬಾರಿಸಲು ಬರೋಬ್ಬರಿ 55 ಎಸೆತಗಳನ್ನು ತೆಗೆದುಕೊಂಡಿದ್ದರು. ಇದುವೇ ಐಪಿಎಲ್ ಇತಿಹಾಸದ ಅತ್ಯಂತ ನಿಧಾನಗತಿಯ ಅರ್ಧಶತಕವಾಗಿದೆ.

Loading...
Unable to load recommendations.
Follow Us