AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಕಿಂಗ್ ಕಂಬ್ಯಾಕ್: ವಿರಾಟ್ ಕೊಹ್ಲಿ ಮುಂದಿದೆ ಹೊಸ ದಾಖಲೆ

Virat Kohli Records: ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯ ಮೂಲಕ ವಿಶೇಷ ದಾಖಲೆ ಬರೆಯುವ ಅವಕಾಶ ವಿರಾಟ್ ಕೊಹ್ಲಿ ಮುಂದಿದೆ. 3 ಪಂದ್ಯಗಳ ಈ ಸರಣಿಯಲ್ಲಿ 35 ರನ್ ಬಾರಿಸಿದರೆ ಕಿಂಗ್ ಕೊಹ್ಲಿಯ ದಾಖಲೆಗಳ ಪಟ್ಟಿಗೆ ಮತ್ತೊಂದು ದಾಖಲೆ ಸೇರ್ಪಡೆಯಾಗಲಿದೆ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ.

TV9 Web
| Edited By: |

Updated on: Jan 08, 2024 | 10:30 AM

Share
ಬರೋಬ್ಬರಿ 14 ತಿಂಗಳುಗಳ ಬಳಿಕ ಭಾರತ ಟಿ20 ತಂಡದಲ್ಲಿ ವಿರಾಟ್ ಕೊಹ್ಲಿ (Virat Kohli) ಕಾಣಿಸಿಕೊಂಡಿದ್ದಾರೆ. ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯ ಮೂಲಕ ಕಿಂಗ್ ಕೊಹ್ಲಿ ಕಂಬ್ಯಾಕ್ ಮಾಡಲಿದ್ದಾರೆ. ಮೂರು ಪಂದ್ಯಗಳ ಈ ಸರಣಿಯಲ್ಲಿ ವಿಶೇಷ ದಾಖಲೆ ಬರೆಯುವ ಅವಕಾಶ ಕೂಡ ವಿರಾಟ್ ಕೊಹ್ಲಿ ಮುಂದಿದೆ.

1 / 6
ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 35 ರನ್ ಬಾರಿಸಿದರೆ ಟಿ20 ಕ್ರಿಕೆಟ್​ನಲ್ಲಿ 12 ಸಾವಿರ ರನ್ ಪೂರೈಸಿದ ದಾಖಲೆ ಬರೆಯಲಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಎನಿಸಿಕೊಳ್ಳಲಿದ್ದಾರೆ.

2 / 6
ಅಷ್ಟೇ ಅಲ್ಲದೆ ಟಿ20 ಕ್ರಿಕೆಟ್​ನಲ್ಲಿ 12 ಸಾವಿರ ರನ್​ ಕಲೆಹಾಕಿದ ವಿಶ್ವದ 4ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ವಿರಾಟ್ ಕೊಹ್ಲಿ ಪಾತ್ರರಾಗಲಿದ್ದಾರೆ. ಇದಕ್ಕೂ ಮುನ್ನ ಕ್ರಿಸ್ ಗೇಲ್ (14562), ಶೊಯೇಬ್ ಮಲಿಕ್ (12993) ಹಾಗೂ ಕೀರನ್ ಪೊಲಾರ್ಡ್​ (12390) ಈ ಸಾಧನೆ ಮಾಡಿದ್ದಾರೆ.

3 / 6
ಇದೀಗ ಒಟ್ಟು 357 ಟಿ20 ಇನಿಂಗ್ಸ್​ ಆಡಿರುವ ವಿರಾಟ್ ಕೊಹ್ಲಿ 11965 ರನ್ ಕಲೆಹಾಕಿದ್ದಾರೆ. ಇನ್ನು 35 ರನ್​ಗಳನ್ನು ಬಾರಿಸಿದರೆ ಟಿ20 ಕ್ರಿಕೆಟ್​ನಲ್ಲಿ 12 ಸಾವಿರ ರನ್​ ಪೂರೈಸಿದ ಮೊದಲ ಭಾರತೀಯ ಎಂಬ ದಾಖಲೆ ಕಿಂಗ್ ಕೊಹ್ಲಿ ಪಾಲಾಗಲಿದೆ.

4 / 6
ವಿಶೇಷ ಎಂದರೆ ಇಲ್ಲಿ ವಿರಾಟ್ ಕೊಹ್ಲಿ 11965 ರನ್​ ಕಲೆಹಾಕಿರುವುದು ಕೇವಲ ಟೀಮ್ ಇಂಡಿಯಾ ಹಾಗೂ ಆರ್​ಸಿಬಿ ಪರ ಕಣಕ್ಕಿಳಿಯುವ ಮೂಲಕ. ಅಂದರೆ ಟಾಪ್-3 ನಲ್ಲಿರುವ ಕ್ರಿಸ್ ಗೇಲ್, ಶೊಯೇಬ್ ಮಲಿಕ್ ಹಾಗೂ ಕೀರನ್ ಪೊಲಾರ್ಡ್ ರಾಷ್ಟ್ರೀಯ ತಂಡ ಹಾಗೂ ಹಲವು ಲೀಗ್​ಗಳನ್ನು ಆಡಿ ಈ ಸಾಧನೆ ಮಾಡಿದ್ದರು.

5 / 6
ಇದೀಗ ಕೇವಲ 2 ತಂಡಗಳ ಪರ ಮಾತ್ರ ಕಣಕ್ಕಿಳಿದು ಟಿ20 ಕ್ರಿಕೆಟ್​ನಲ್ಲಿ 12 ಸಾವಿರ ರನ್ ಪೂರೈಸಿದ ವಿಶೇಷ ದಾಖಲೆ ಬರೆಯುವ ಅವಕಾಶ ವಿರಾಟ್ ಕೊಹ್ಲಿ ಮುಂದಿದೆ. ಅದರಂತೆ ಮುಂಬರುವ ಅಫ್ಘಾನಿಸ್ತಾನ್ ವಿರುದ್ಧದ ಸರಣಿಯಲ್ಲಿ ಕಿಂಗ್ ಕೊಹ್ಲಿ ಈ ಮೈಲುಗಲ್ಲನ್ನು ದಾಟುವ ನಿರೀಕ್ಷೆಯಿದೆ.

6 / 6
Web contact
Web contact

TV9 Kannada

Read More
Follow Us
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ

ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ

ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ