Virat Kohli: ಕಿಂಗ್ ಕಂಬ್ಯಾಕ್: ವಿರಾಟ್ ಕೊಹ್ಲಿ ಮುಂದಿದೆ ಹೊಸ ದಾಖಲೆ
TV9 Web | Updated By: ಝಾಹಿರ್ ಯೂಸುಫ್
Updated on:
Jan 08, 2024 | 10:30 AM
Virat Kohli Records: ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯ ಮೂಲಕ ವಿಶೇಷ ದಾಖಲೆ ಬರೆಯುವ ಅವಕಾಶ ವಿರಾಟ್ ಕೊಹ್ಲಿ ಮುಂದಿದೆ. 3 ಪಂದ್ಯಗಳ ಈ ಸರಣಿಯಲ್ಲಿ 35 ರನ್ ಬಾರಿಸಿದರೆ ಕಿಂಗ್ ಕೊಹ್ಲಿಯ ದಾಖಲೆಗಳ ಪಟ್ಟಿಗೆ ಮತ್ತೊಂದು ದಾಖಲೆ ಸೇರ್ಪಡೆಯಾಗಲಿದೆ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ.
1 / 6
ಬರೋಬ್ಬರಿ 14 ತಿಂಗಳುಗಳ ಬಳಿಕ ಭಾರತ ಟಿ20 ತಂಡದಲ್ಲಿ ವಿರಾಟ್ ಕೊಹ್ಲಿ (Virat Kohli) ಕಾಣಿಸಿಕೊಂಡಿದ್ದಾರೆ. ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯ ಮೂಲಕ ಕಿಂಗ್ ಕೊಹ್ಲಿ ಕಂಬ್ಯಾಕ್ ಮಾಡಲಿದ್ದಾರೆ. ಮೂರು ಪಂದ್ಯಗಳ ಈ ಸರಣಿಯಲ್ಲಿ ವಿಶೇಷ ದಾಖಲೆ ಬರೆಯುವ ಅವಕಾಶ ಕೂಡ ವಿರಾಟ್ ಕೊಹ್ಲಿ ಮುಂದಿದೆ.
2 / 6
ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 35 ರನ್ ಬಾರಿಸಿದರೆ ಟಿ20 ಕ್ರಿಕೆಟ್ನಲ್ಲಿ 12 ಸಾವಿರ ರನ್ ಪೂರೈಸಿದ ದಾಖಲೆ ಬರೆಯಲಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಎನಿಸಿಕೊಳ್ಳಲಿದ್ದಾರೆ.
3 / 6
ಅಷ್ಟೇ ಅಲ್ಲದೆ ಟಿ20 ಕ್ರಿಕೆಟ್ನಲ್ಲಿ 12 ಸಾವಿರ ರನ್ ಕಲೆಹಾಕಿದ ವಿಶ್ವದ 4ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ವಿರಾಟ್ ಕೊಹ್ಲಿ ಪಾತ್ರರಾಗಲಿದ್ದಾರೆ. ಇದಕ್ಕೂ ಮುನ್ನ ಕ್ರಿಸ್ ಗೇಲ್ (14562), ಶೊಯೇಬ್ ಮಲಿಕ್ (12993) ಹಾಗೂ ಕೀರನ್ ಪೊಲಾರ್ಡ್ (12390) ಈ ಸಾಧನೆ ಮಾಡಿದ್ದಾರೆ.
4 / 6
ಇದೀಗ ಒಟ್ಟು 357 ಟಿ20 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 11965 ರನ್ ಕಲೆಹಾಕಿದ್ದಾರೆ. ಇನ್ನು 35 ರನ್ಗಳನ್ನು ಬಾರಿಸಿದರೆ ಟಿ20 ಕ್ರಿಕೆಟ್ನಲ್ಲಿ 12 ಸಾವಿರ ರನ್ ಪೂರೈಸಿದ ಮೊದಲ ಭಾರತೀಯ ಎಂಬ ದಾಖಲೆ ಕಿಂಗ್ ಕೊಹ್ಲಿ ಪಾಲಾಗಲಿದೆ.
5 / 6
ವಿಶೇಷ ಎಂದರೆ ಇಲ್ಲಿ ವಿರಾಟ್ ಕೊಹ್ಲಿ 11965 ರನ್ ಕಲೆಹಾಕಿರುವುದು ಕೇವಲ ಟೀಮ್ ಇಂಡಿಯಾ ಹಾಗೂ ಆರ್ಸಿಬಿ ಪರ ಕಣಕ್ಕಿಳಿಯುವ ಮೂಲಕ. ಅಂದರೆ ಟಾಪ್-3 ನಲ್ಲಿರುವ ಕ್ರಿಸ್ ಗೇಲ್, ಶೊಯೇಬ್ ಮಲಿಕ್ ಹಾಗೂ ಕೀರನ್ ಪೊಲಾರ್ಡ್ ರಾಷ್ಟ್ರೀಯ ತಂಡ ಹಾಗೂ ಹಲವು ಲೀಗ್ಗಳನ್ನು ಆಡಿ ಈ ಸಾಧನೆ ಮಾಡಿದ್ದರು.
6 / 6
ಇದೀಗ ಕೇವಲ 2 ತಂಡಗಳ ಪರ ಮಾತ್ರ ಕಣಕ್ಕಿಳಿದು ಟಿ20 ಕ್ರಿಕೆಟ್ನಲ್ಲಿ 12 ಸಾವಿರ ರನ್ ಪೂರೈಸಿದ ವಿಶೇಷ ದಾಖಲೆ ಬರೆಯುವ ಅವಕಾಶ ವಿರಾಟ್ ಕೊಹ್ಲಿ ಮುಂದಿದೆ. ಅದರಂತೆ ಮುಂಬರುವ ಅಫ್ಘಾನಿಸ್ತಾನ್ ವಿರುದ್ಧದ ಸರಣಿಯಲ್ಲಿ ಕಿಂಗ್ ಕೊಹ್ಲಿ ಈ ಮೈಲುಗಲ್ಲನ್ನು ದಾಟುವ ನಿರೀಕ್ಷೆಯಿದೆ.