AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಹೊಸ ವರ್ಷದಲ್ಲಿ ಕಿಂಗ್ ಕೊಹ್ಲಿ ಮುಂದಿದೆ 10 ದಾಖಲೆಗಳು

Virat Kohli Records: ವಿರಾಟ್ ಕೊಹ್ಲಿ ಈ ವರ್ಷ ಹಲವು ದಾಖಲೆಗಳನ್ನು ನಿರ್ಮಿಸುವ ಹೊಸ್ತಿಲಲ್ಲಿದ್ದಾರೆ. 2024 ರಲ್ಲಿ ಕಿಂಗ್ ಕೊಹ್ಲಿ ಬ್ಯಾಟ್​ನಿಂದ ಮೂಡಿಬರಲಿರುವ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.

TV9 Web
| Edited By: |

Updated on: Jan 02, 2024 | 11:28 AM

Share
ಕ್ರಿಕೆಟ್ ಅಂಗಳದ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಸೌತ್ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೂಲಕ ಹೊಸ ವರ್ಷವನ್ನು ಆರಂಭಿಸಲಿದ್ದಾರೆ. ಕೇಪ್​ಟೌನ್​ನ ನ್ಯೂಲ್ಯಾಂಡ್ಸ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ವಿಶೇಷ ದಾಖಲೆ ಬರೆಯುವ ಅವಕಾಶ ಕಿಂಗ್ ಕೊಹ್ಲಿ ಮುಂದಿದೆ.

1 / 12
ಅಷ್ಟೇ ಅಲ್ಲದೆ ಈ ವರ್ಷ ಹಲವು ದಾಖಲೆಗಳನ್ನು ನಿರ್ಮಿಸುವ ಹೊಸ್ತಿಲಲ್ಲಿದ್ದಾರೆ. ಹಾಗಿದ್ರೆ 2024 ರಲ್ಲಿ ವಿರಾಟ್ ಕೊಹ್ಲಿ ಬ್ಯಾಟ್​ನಿಂದ ಮೂಡಿಬರಲಿರುವ ದಾಖಲೆಗಳಾವುವು ಎಂದು ನೋಡೋಣ...

2 / 12
1- ಸೌತ್ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧಶತಕ ಬಾರಿಸಿದರೆ,  SENA ದೇಶಗಳಲ್ಲಿ (ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್, ಆಸ್ಟ್ರೇಲಿಯಾ) ಅತೀ ಹೆಚ್ಚು 50+ ಸ್ಕೋರ್​ಗಳಿಸಿದ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಸರಿಗಟ್ಟಬಹುದು. SENA ದೇಶಗಳಲ್ಲಿ ಸಚಿನ್ ಒಟ್ಟು 74 ಬಾರಿ 50+ ಸ್ಕೋರ್​ಗಳಿಸಿ ದಾಖಲೆ ನಿರ್ಮಿಸಿದ್ದರೆ, 73 ಬಾರಿ 50+ ಸ್ಕೋರ್​ಗಳಿಸಿರುವ ಕೊಹ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ.

3 / 12
2 - ಏಕದಿನದಲ್ಲಿ 14000 ರನ್ ಪೂರೈಸಲು ವಿರಾಟ್ ಕೊಹ್ಲಿಗೆ ಬೇಕಿರುವುದು ಕೇವಲ 152 ರನ್‌ಗಳು ಮಾತ್ರ. ಈ 152 ರನ್​ಗಳೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 14 ಸಾವಿರ ರನ್​ ಕಲೆಹಾಕಿದ ವಿಶ್ವ ದಾಖಲೆ ಕೊಹ್ಲಿ ಪಾಲಾಗಲಿದೆ.

4 / 12
3- ಟಿ20 ಕ್ರಿಕೆಟ್‌ನಲ್ಲಿ 12000 ರನ್ ಗಳಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಲು ವಿರಾಟ್ ಕೊಹ್ಲಿಗೆ ಕೇವಲ 35 ರನ್‌ಗಳ ಅವಶ್ಯಕತೆಯಿದೆ. ಈ ಮೂಲಕ ಕ್ರಿಸ್ ಗೇಲ್, ಶೋಯೆಬ್ ಮಲಿಕ್ ಮತ್ತು ಕೀರನ್ ಪೊಲಾರ್ಡ್ ಈ ಸಾಧನೆ ಮಾಡಿದ 4ನೇ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.

5 / 12
4- ಇಂಗ್ಲೆಂಡ್ ವಿರುದ್ಧದ ಟೆಸ್ಟ್‌ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎನಿಸಿಕೊಳ್ಳಲು ವಿರಾಟ್ ಕೊಹ್ಲಿಗೆ ಕೇವಲ 544 ರನ್​ಗಳ ಅವಶ್ಯಕತೆಯಿದೆ. ಸದ್ಯ ಈ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಅವರ 2535 ರನ್​ಗಳಿಸಿರುವ ಸಚಿನ್ ಅಗ್ರಸ್ಥಾನದಲ್ಲಿದ್ದಾರೆ.

6 / 12
5- ಇಂಗ್ಲೆಂಡ್ ವಿರುದ್ಧ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟ್ಸ್​ಮನ್ ಎಂಬ ದಾಖಲೆ ಬರೆಯಲು ಕೊಹ್ಲಿಗೆ ಬೇಕಿರುವುದು ಕೇವಲ 21 ರನ್​ಗಳು ಮಾತ್ರ.

7 / 12
6- ತವರಿನಲ್ಲಿ ಅತೀ ಹೆಚ್ಚು ಅಂತಾರಾಷ್ಟ್ರೀಯ ಶತಕ ಬಾರಿಸಿದ ಬ್ಯಾಟರ್ ಎನಿಸಿಕೊಳ್ಳಲು ಕೊಹ್ಲಿಗೆ 5 ಶತಕಗಳ ಅವಶ್ಯಕತೆಯಿದೆ. 42 ಶತಕ ಬಾರಿಸಿದ ಸಚಿನ್ ತೆಂಡೂಲ್ಕರ್ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

8 / 12
7- ಇಂಗ್ಲೆಂಡ್ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 4 ಸಾವಿರ ರನ್ ಪೂರೈಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಲು ವಿರಾಟ್ ಕೊಹ್ಲಿ ಕೇವಲ 30 ರನ್​ಗಳಿಸಿದರೆ ಸಾಕು.

9 / 12
8- ವೆಸ್ಟ್ ಇಂಡೀಸ್‌ನಲ್ಲಿ ಭಾರತದ ಪರ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಳ್ಳಲು ಕಿಂಗ್ ಕೊಹ್ಲಿಗೆ 322 ರನ್‌ಗಳ ಅಗತ್ಯವಿದೆ. ಈ ಪಟ್ಟಿಯಲ್ಲಿ ರಾಹುಲ್ ದ್ರಾವಿಡ್ (1919 ರನ್ಸ್) ಅಗ್ರಸ್ಥಾನದಲ್ಲಿದ್ದಾರೆ.

10 / 12
9- ನ್ಯೂಝಿಲೆಂಡ್ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ಭಾರತೀಯ ಬ್ಯಾಟರ್ ದಾಖಲೆ ಬರೆಯಲು ಕಿಂಗ್ ಕೊಹ್ಲಿಗೆ 1 ಶತಕದ ಅಗತ್ಯವಿದೆ. ಸದ್ಯ ಕೊಹ್ಲಿ ಹಾಗೂ ಸಚಿನ್ ತೆಂಡೂಲ್ಕರ್ ತಲಾ ಒಂಬತ್ತು ಶತಕ ಸಿಡಿಸಿದ್ದಾರೆ.

11 / 12
10- ಬಾಂಗ್ಲಾದೇಶ ವಿರುದ್ಧದ ಟೆಸ್ಟ್‌ನಲ್ಲಿ ಭಾರತದ ಪರ ಅತೀ ಹೆಚ್ಚು ರನ್​ ಕಲೆಹಾಕಿದ ಬ್ಯಾಟರ್ ಎನಿಸಿಕೊಳ್ಳಲು ಕಿಂಗ್ ಕೊಹ್ಲಿಗೆ 383 ರನ್​ಗಳ ಅವಶ್ಯಕತೆಯಿದೆ. ಸದ್ಯ ಈ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ (820 ರನ್ಸ್​) ಅಗ್ರಸ್ಥಾನದಲ್ಲಿದ್ದು, ಈ ವರ್ಷದಲ್ಲಿ ಕಿಂಗ್ ಕೊಹ್ಲಿ ಈ ದಾಖಲೆಗಳನ್ನು ಮುರಿಯಲಿದ್ದಾರಾ ಕಾದು ನೋಡಬೇಕಿದೆ.

12 / 12
Web contact
Web contact

TV9 Kannada

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?

ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು

ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?

‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ

ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!

‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!

ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ