Updated on: Jul 19, 2023 | 9:23 PM
India vs West Indies: ಪೋರ್ಟ್ ಆಫ್ ಸ್ಪೇನ್ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೂಲಕ ವಿರಾಟ್ ಕೊಹ್ಲಿ (Virat Kohli) ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 500 ಪಂದ್ಯಗಳನ್ನಾಡಿದ ಸಾಧನೆ ಮಾಡಲಿದ್ದಾರೆ.
ವಿಶೇಷ ಎಂದರೆ ಈ ಪಂದ್ಯದೊಂದಿಗೆ 500 ಪಂದ್ಯಗಳ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆ ಕೂಡ ಕಿಂಗ್ ಕೊಹ್ಲಿ ಪಾಲಾಗಲಿದೆ. ಏಕೆಂದರೆ 499 ಪಂದ್ಯಗಳಲ್ಲಿ ಅತೀ ಹೆಚ್ಚು ರನ್ ಬಾರಿಸಿದ ದಾಖಲೆ ಇರುವುದೇ ವಿರಾಟ್ ಕೊಹ್ಲಿ ಹೆಸರಿನಲ್ಲಿ.
ವಿರಾಟ್ ಕೊಹ್ಲಿ 499 ಅಂತಾರಾಷ್ಟ್ರೀಯ ಪಂದ್ಯಗಳ ಮೂಲಕ ಕಲೆಹಾಕಿರುವುದು ಬರೋಬ್ಬರಿ 25,461 ರನ್ಗಳು. ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವುದು ಆಸ್ಟ್ರೇಲಿಯಾ ರಿಕಿ ಪಾಂಟಿಂಗ್.
ಆಸೀಸ್ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 499 ಪಂದ್ಯಗಳನ್ನು ಮುಗಿಸಿದಾಗ 24,991 ರನ್ ಕಲೆಹಾಕಿದ್ದರು.
ಹಾಗೆಯೇ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ 499 ಪಂದ್ಯಗಳ ಮೂಲಕ ಒಟ್ಟು 24,839 ರನ್ ಬಾರಿಸಿದ್ದರು. ಅಂದರೆ ಈ ಇಬ್ಬರು ಆಟಗಾರರ ದಾಖಲೆಗಳನ್ನು ಈಗಾಗಲೇ ವಿರಾಟ್ ಕೊಹ್ಲಿ ಮುರಿದು ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ಇದೀಗ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ 500 ಅಂತಾರಾಷ್ಟ್ರೀಯ ಪಂದ್ಯಗಳಿಂದ ಅತೀ ಹೆಚ್ಚು ರನ್ ಕಲೆಹಾಕಿದ ವಿಶೇಷ ವಿಶ್ವ ದಾಖಲೆಯೊಂದು ವಿರಾಟ್ ಕೊಹ್ಲಿ ಪಾಲಾಗಲಿದೆ.