Virat Kohli: ಭರ್ಜರಿ ದಾಖಲೆ ಬರೆದ ಕಿಂಗ್ ಕೊಹ್ಲಿ
TV9 Web | Updated By: ಝಾಹಿರ್ ಯೂಸುಫ್
Updated on:
Dec 27, 2023 | 8:13 AM
Virat Kohli Records: ಈ ಪಂದ್ಯದ 2ನೇ ಇನಿಂಗ್ಸ್ನಲ್ಲಿ 28 ರನ್ ಬಾರಿಸಿದರೆ ವರ್ಷವೊಂದರಲ್ಲಿ ಅತೀ ಹೆಚ್ಚು ಬಾರಿ 2000 ರನ್ ಪೂರೈಸಿದ ವಿಶ್ವ ದಾಖಲೆ ಕಿಂಗ್ ಕೊಹ್ಲಿ ಪಾಲಾಗಲಿದೆ. ಸದ್ಯ ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ಶ್ರೀಲಂಕಾದ ಕುಮಾರ ಸಂಗಾಕ್ಕರ (6 ಬಾರಿ) ಜಂಟಿಯಾಗಿ ಅಗ್ರಸ್ಥಾನ ಅಲಂಕರಿಸಿಕೊಂಡಿದ್ದಾರೆ.
1 / 6
ಸೆಂಚುರಿಯನ್ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 38 ರನ್ ಬಾರಿಸುವ ಮೂಲಕ ವಿರಾಟ್ ಕೊಹ್ಲಿ (Virat Kohli) ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಅವರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.
2 / 6
ಈ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕಿಂಗ್ ಕೊಹ್ಲಿ 64 ಎಸೆತಗಳಲ್ಲಿ 5 ಫೋರ್ಗಳನ್ನು ಬಾರಿ 38 ರನ್ ಬಾರಿಸಿದ್ದರು. ಈ 38 ರನ್ಗಳೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಅತ್ಯಧಿಕ ರನ್ ಬಾರಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.
3 / 6
ಇದಕ್ಕೂ ಮುನ್ನ ಈ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅಗ್ರಸ್ಥಾನದಲ್ಲಿದ್ದರು. ಹಿಟ್ಮ್ಯಾನ್ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಒಟ್ಟು 43 ಇನಿಂಗ್ಸ್ ಆಡಿದ್ದು, ಈ ವೇಳೆ 2097 ರನ್ ಕಲೆಹಾಕಿದ್ದಾರೆ. ಈ ಮೂಲಕ WTC ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದರು.
4 / 6
ಇದೀಗ 57 ಇನಿಂಗ್ಸ್ಗಳ ಮೂಲಕ ವಿರಾಟ್ ಕೊಹ್ಲಿ 2101 ರನ್ ಕಲೆಹಾಕಿದ್ದಾರೆ. ಈ ಮೂಲಕ ರೋಹಿತ್ ಶರ್ಮಾರನ್ನು ಹಿಂದಿಕ್ಕಿ, ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
5 / 6
ಇನ್ನು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಇಂಗ್ಲೆಂಡ್ನ ಜೋ ರೂಟ್. ಇದುವರೆಗೆ 86 ಇನಿಂಗ್ಸ್ ಆಡಿರುವ ರೂಟ್ ಒಟ್ಟು 3987 ರನ್ ಕಲೆಹಾಕಿದ್ದಾರೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಟಾಪ್ ರನ್ ಸರದಾರ ಎನಿಸಿಕೊಂಡಿದ್ದಾರೆ.
6 / 6
ಸೌತ್ ಆಫ್ರಿಕಾ ವಿರುದ್ಧದ ಈ ಪಂದ್ಯದ 2ನೇ ಇನಿಂಗ್ಸ್ನಲ್ಲಿ 28 ರನ್ ಬಾರಿಸಿದರೆ ವರ್ಷವೊಂದರಲ್ಲಿ ಅತೀ ಹೆಚ್ಚು ಬಾರಿ 2000 ರನ್ ಪೂರೈಸಿದ ವಿಶ್ವ ದಾಖಲೆ ಕಿಂಗ್ ಕೊಹ್ಲಿ ಪಾಲಾಗಲಿದೆ. ಸದ್ಯ ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ಶ್ರೀಲಂಕಾದ ಕುಮಾರ ಸಂಗಾಕ್ಕರ (6 ಬಾರಿ) ಜಂಟಿಯಾಗಿ ಅಗ್ರಸ್ಥಾನ ಅಲಂಕರಿಸಿಕೊಂಡಿದ್ದಾರೆ. ಇದೀಗ 7ನೇ ಬಾರಿ 2000 ರನ್ ಪೂರೈಸುವ ಅವಕಾಶ ಕಿಂಗ್ ಕೊಹ್ಲಿ ಮುಂದಿದೆ. ಈ ಮೂಲಕ ಕೊಹ್ಲಿ ಹೊಸ ವಿಶ್ವ ದಾಖಲೆ ಬರೆಯಲಿದ್ದಾರಾ ಕಾದು ನೋಡಬೇಕಿದೆ.