ಓವಲ್ನಲ್ಲಿ ವಿರಾಟ್ ಕೊಹ್ಲಿ ಮುಂದಿದೆ ಭರ್ಜರಿ ದಾಖಲೆಗಳು
India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ದ್ವಿತೀಯ ಪಂದ್ಯವು ಶುಕ್ರವಾರದಿಂದ (ಡಿ. 6) ಶುರುವಾಗಲಿದೆ. ಅಡಿಲೇಡ್ನ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಹೊನಳು-ಬೆಳಕಿನ ಟೆಸ್ಟ್ ಪಂದ್ಯ ಎಂಬುದು ವಿಶೇಷ.
1 / 5
ಪರ್ತ್ ಟೆಸ್ಟ್ನಲ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ ವಿರಾಟ್ ಕೊಹ್ಲಿ ಇದೀಗ ದ್ವಿತೀಯ ಟೆಸ್ಟ್ ಪಂದ್ಯಕ್ಕಾಗಿ ಸಜ್ಜಾಗಿದ್ದಾರೆ. ಅಡಿಲೇಡ್ನ ಓವಲ್ ಮೈದಾನದಲ್ಲಿ ಜರುಗಲಿರುವ ಈ ಪಂದ್ಯದಲ್ಲಿ 2 ಭರ್ಜರಿ ದಾಖಲೆಗಳನ್ನು ಬರೆಯುವ ಅವಕಾಶ ಕಿಂಗ್ ಕೊಹ್ಲಿ ಮುಂದಿದೆ.
2 / 5
ಅದರಂತೆ ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ 102 ರನ್ ಬಾರಿಸಿದರೆ, ಅಡಿಲೇಡ್ ಓವಲ್ ಮೈದಾನದಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಳ್ಳಬಹುದು.
3 / 5
ಸದ್ಯ ಈ ದಾಖಲೆ ವೆಸ್ಟ್ ಇಂಡೀಸ್ನ ದಂತಕಥೆ ಬ್ರಿಯಾನ್ ಲಾರಾ ಹೆಸರಿನಲ್ಲಿದೆ. 1993-2005 ರ ನಡುವೆ ಅಡಿಲೇಡ್ನಲ್ಲಿ 8 ಟೆಸ್ಟ್ ಇನಿಂಗ್ಸ್ ಆಡಿರುವ ಲಾರಾ 862 ಎಸೆತಗಳಲ್ಲಿ 610 ರನ್ ಕಲೆಹಾಕಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾದ ಪ್ರತಿಷ್ಠಿತ ಮೈದಾನದಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿದೇಶಿ ಬ್ಯಾಟರ್ ಎನಿಸಿಕೊಂಡಿದ್ದಾರೆ.
4 / 5
ಇದೀಗ ಬ್ರಿಯಾನ್ ಲಾರಾ ಅವರ ಈ ದಾಖಲೆ ಮುರಿಯಲು ವಿರಾಟ್ ಕೊಹ್ಲಿಗೆ ಕೇವಲ 102 ರನ್ಗಳ ಅವಶ್ಯಕತೆಯಿದೆ. 2012-2020 ರ ನಡುವೆ ಅಡಿಲೇಡ್ನಲ್ಲಿ 8 ಟೆಸ್ಟ್ ಇನಿಂಗ್ಸ್ ಆಡಿರುವ ಕೊಹ್ಲಿ ಒಟ್ಟು 509 ರನ್ ಕಲೆಹಾಕಿದ್ದಾರೆ. ದ್ವಿತೀಯ ಟೆಸ್ಟ್ನಲ್ಲಿ ಕೊಹ್ಲಿ ಬ್ಯಾಟ್ನಿಂದ 102 ರನ್ ಮೂಡಿಬಂದರೆ, ಅಡಿಲೇಡ್ ಮೈದಾನದಲ್ಲಿ ಅತ್ಯಧಿಕ ರನ್ ಗಳಿಸಿದ ವಿದೇಶಿ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.
5 / 5
ಹಾಗೆಯೇ ಆಸ್ಟ್ರೇಲಿಯಾದ ಒಂದೇ ಮೈದಾನದಲ್ಲಿ ಅತ್ಯಧಿಕ ಟೆಸ್ಟ್ ಶತಕ ಸಿಡಿಸಿದ ವಿದೇಶಿ ಬ್ಯಾಟರ್ ಎನಿಸಿಕೊಳ್ಳಲು ವಿರಾಟ್ ಕೊಹ್ಲಿಗೆ ಒಂದು ಶತಕದ ಅಗತ್ಯವಿದೆ. ಈ ಪಟ್ಟಿಯಲ್ಲಿ ಇಂಗ್ಲೆಂಡ್ನ ಜಾಕ್ ಹಾಬ್ಸ್ (3 ಶತಕಗಳು) ಅಗ್ರಸ್ಥಾನದಲ್ಲಿದ್ದಾರೆ. ಅಡಿಲೇಡ್ನಲ್ಲಿ ಈಗಾಗಲೇ 3 ಟೆಸ್ಟ್ ಸೆಂಚುರಿ ಸಿಡಿಸಿರುವ ವಿರಾಟ್ ಕೊಹ್ಲಿ, ಪಿಂಕ್ ಬಾಲ್ ಟೆಸ್ಟ್ನಲ್ಲಿ ಸೆಂಚುರಿ ಸಿಡಿಸಿದರೆ ಓವಲ್ ಮೈದಾನದ ಸೆಂಚುರಿ ಸರದಾರ ಎನಿಸಿಕೊಳ್ಳಲಿದ್ದಾರೆ.